AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: ವಾಕಿಂಗ್ ಹೋಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಮಗು ಸೇರಿದಂತೆ 3 ಸಾವು, ಎದೆ ಝುಲ್​​ ಎನಿಸುವ ದೃಶ್ಯ ಇಲ್ಲಿದೆ

ಸನ್‌ಸಿಟಿ ಬಂಡ್ಲಗುಡದ ಸಮೀಪ ಇಂದು ಬೆಳಗಿನ ಭೀಕರ ರಸ್ತೆ ಅಪಘಾತ ಸಂಭವಿಸಿದೆ, ಬೆಳಗಿನ ಜಾವ ವಾಕಿಂಗ್ ಮಾಡುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಇದೀಗ ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Hyderabad: ವಾಕಿಂಗ್ ಹೋಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಮಗು ಸೇರಿದಂತೆ 3 ಸಾವು, ಎದೆ ಝುಲ್​​ ಎನಿಸುವ ದೃಶ್ಯ ಇಲ್ಲಿದೆ
ವೈರಲ್​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on:Jul 04, 2023 | 4:20 PM

Share

ಹೈದರಾಬಾದ್: ಸನ್‌ಸಿಟಿ ಬಂಡ್ಲಗುಡದ ಸಮೀಪ ಇಂದು ಬೆಳಗಿನ ಭೀಕರ ರಸ್ತೆ ಅಪಘಾತ ಸಂಭವಿಸಿದೆ, ಬೆಳಗಿನ ಜಾವ ವಾಕಿಂಗ್ ಮಾಡುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಈ ಭೀಕರ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದು ಬಾರಿ ಈ ದೃಶ್ಯವನ್ನು ನೋಡಿದರೆ ಎದೆ ಝಲ್ ಎನ್ನುವುದು ಖಂಡಿತ.

ಈ ರಸ್ತೆಗಳಲ್ಲಿ ಓಡಾಡುವುದೇ ದೊಡ್ಡ ಕಷ್ಟವಾಗಿದೆ, ಪ್ರಾಣವನ್ನು ಕೈಹಿಡಿಕೊಂಡು ಹೋಗುವ ಪರಿಸ್ಥಿತಿ ಉಂಟಾಗಿದೆ. ಸ್ವಲ್ಪ ಎಚ್ಚರ ತಪ್ಪಿದರು ಯಮನ ಪಾದ ಸೇರುವುದು ಖಂಡಿತ, ಇತ್ತೀಚೆಗೆ ದಿನಗಳಲ್ಲಿ ಹೆಚ್ಚು ಹೆಚ್ಚು ರಸ್ತೆ ಅಪಘಾತಗಳು ನಡೆಯುತ್ತಿದೆ. ಪಾದಚಾರಿಗಳು ಗಮನ ನೀಡಿದರು, ಈ ವಾಹನ ಸಂಚಾರಿಗಳು ಹೆಚ್ಚು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಚಾಲಕರ ತಮ್ಮ ಬೇಜಾವಾಬ್ದಾರಿಗಳಿಂದ ಇಂತಹ ಘಟನೆಗಳಿಗೆ ಕಾರಣವಾಗುತ್ತದೆ.

ಪೊಲೀಸರ ಪ್ರಕಾರ, ಬಲಿಯಾದವರಲ್ಲಿ ತಾಯಿ ಮತ್ತು ಮಗು, ಬೆಳಗಿನ ವಾಕಿಂಗ್‌ಗೆ ಹೊರಟಿದ್ದಾಗ ಬಂಡ್ಲಗುಡ ರಸ್ತೆಯಲ್ಲಿ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ತಾಯಿ ಮತ್ತು ಮಗು ಹಾಗೂ ಮತ್ತೊಬ್ಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Maharashtra: ಮುಂಬೈ-ಆಗ್ರಾ ಹೆದ್ದಾರಿಯಲ್ಲಿರುವ ಹೋಟೆಲ್‌ಗೆ ಟ್ರಕ್ ಡಿಕ್ಕಿ, 9 ಸಾವು, ಹಲವರಿಗೆ ಗಾಯ

ಘಟನೆ ಬಳಿಕ ಕಾರು ಚಾಲಕ ಕಾರು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಮೂವರ ಮೃತದೇಹಗಳನ್ನು ಉಸ್ಮಾನಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಕಾರು ಅತಿವೇಗದಲ್ಲಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಇದೀಗ ಈ ಘಟನೆಗೆ ಸಂಬಂಧಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:19 pm, Tue, 4 July 23

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ