ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ದೂರ ಎಳೆದೊಯ್ದ ಲಾರಿ, ಎದೆ ಝೆಲ್ಲೆನಿಸುವ ವಿಡಿಯೋ

ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇಯ ಬಹು ದೂರ ಎಳೆದೊಯ್ದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಟ್ರಕ್ ಚಾಲಕನನ್ನು ಪೃಥ್ವಿರಾಜ್ ಎಂದು ಗುರುತಿಸಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ದೂರ ಎಳೆದೊಯ್ದ ಲಾರಿ, ಎದೆ ಝೆಲ್ಲೆನಿಸುವ ವಿಡಿಯೋ
ಹಿಟ್​ ಆ್ಯಂಡ್ ರನ್
Follow us
ನಯನಾ ರಾಜೀವ್
|

Updated on: Apr 18, 2024 | 10:04 AM

ಇತ್ತೀಚೆಗೆ ಅಪಘಾತ(Accident)ಗಳು ಹಾಗೂ ಹಿಟ್​ ಆ್ಯಂಡ್​ ರನ್(Hit and Run)  ಪ್ರಕರಣಗಳು ಹೆಚ್ಚಾಗುತ್ತಿವೆ. ಟ್ರಕ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದಿರುವ ಘಟನೆ ಹೈದರಾಬಾದ್​(Hyderabad)ನಲ್ಲಿ ನಡೆದಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಟ್​ ಆ್ಯಂಡ್ ರನ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ. ವೇಗದ ಲಾರಿಯೊಂದು ಜನನಿಬಿಡ ಪ್ರದೇಶದಲ್ಲಿ ಬೈಕ್​ಗೆ ಡಿಕ್ಕಿ ಹೊಡೆದು ಅದರ ಮುಂಭಾಗದ ಟೈರ್ ಅಡಿಯಲ್ಲಿ ಎಳೆದುಕೊಂಡು ಹೋಗುವುದನ್ನು ವಿಡಿಯೋ ತೋರಿಸುತ್ತದೆ.

ಆದರೆ ಪುಣ್ಯಕ್ಕೆ ಆ ಬೈಕ್ ಸವಾರ ಹೇಗೋ ಮಾಡಿ ಬೈಕ್​ನಿಂದ ತಪ್ಪಿಸಿಕೊಂಡು ಲಾರಿಯ ಬದಿಯನ್ನು ಹಿಡಿದು ನೇತಾಡುತ್ತಿರುವುದನ್ನು ಕಾಣಬಹುದು. ಸ್ವಲ್ಪ ದೂರ ಹೋಗ ಬಳಿಕ ಲಾರಿ ಚಕ್ರಕ್ಕೆ ಸಿಲುಕಿದ್ದ ಬೈಕ್​ ಬೇರ್ಪಡುತ್ತದೆ. ಈ ಲಾರಿಯು ಬೈಕ್​ಗೆ ಡಿಕ್ಕಿ ಹೊಡೆದು ಸ್ವಲ್ಪ ಸಮಯದ ಬಳಿಕ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆ ಏಪ್ರಿಲ್​ 14ರಂದು ನಡೆದಿದೆ.

ಪೊಲೀಸರ ಪ್ರಕಾರ ಏಪ್ರಿಲ್ 15ರಂದು ಹೈದರಾಬಾದ್ ನಿವಾಸಿ ಅಬ್ದುಲ್ ಮಜೀದ್ ಎಂಬುವವರು ದೂರು ನೀಡಿದ್ದಾರೆ. ಏಪ್ರಿಲ್​ 14ರಂದು ರಾತ್ರಿ 11 ಗಂಟೆ ಸುಮಾರಿಗೆ ಚಂಪಾಪೇಟೆಯ ಲಕ್ಷ್ಮೀ ಗಾರ್ಡನ್ ಕಡೆಗೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಅತಿವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿತ್ತು.

ಮತ್ತಷ್ಟು ಓದಿ: Road Accident: ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ, 10 ಮಂದಿ ದುರ್ಮರಣ

ಡಿಕ್ಕಿಯ ನಂತರ ರಸ್ತೆಯ ಎಡಭಾಗದಲ್ಲಿ ಬಿದ್ದಿದ್ದಾರೆ, ಆಗ ಟ್ರಕ್ ಚಾಲಕ ವಾಹನವನ್ನು ನಿಲ್ಲಿಸದೆ ಓಡಿ ಹೋಗಲು ಯತ್ನಿಸಿದ್ದರು, ಈ ಘಟನೆಯ ವಿಡಿಯೋವನ್ನು ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರು ಮಾಡಿದ್ದಾರೆ. ಸವಾರನಿಗೆ ಗಾಯವಾಗದಿದ್ದರೂ ಆತನ ದ್ವಿಚಕ್ರವಾಹನವನ್ನು ಸುಮಾರು ದೂರ ಎಳೆದುಕೊಂಡು ಹೋಗಿದ್ದು, ಇದರಿಂದ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ.

ಘಟನೆಯ ವಿಡಿಯೋ

ನಂತರ ಅದೇ ಟ್ರಕ್​ ಚಂಪಾಪೇಟ್ ಟಿ ಜಂಕ್ಷನ್​ನಲ್ಲಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಚಾಲಕನನ್ನು ಪೃಥ್ವಿರಾಜ್ ಎಂದು ಗುರುತಿಸಲಾಗಿದೆ. ಘಟನೆಗೆ ಅತಿಯಾದ ವೇಗವೇ ಕಾರಣ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ