ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ದೂರ ಎಳೆದೊಯ್ದ ಲಾರಿ, ಎದೆ ಝೆಲ್ಲೆನಿಸುವ ವಿಡಿಯೋ

|

Updated on: Apr 18, 2024 | 10:04 AM

ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇಯ ಬಹು ದೂರ ಎಳೆದೊಯ್ದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಟ್ರಕ್ ಚಾಲಕನನ್ನು ಪೃಥ್ವಿರಾಜ್ ಎಂದು ಗುರುತಿಸಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ದೂರ ಎಳೆದೊಯ್ದ ಲಾರಿ, ಎದೆ ಝೆಲ್ಲೆನಿಸುವ ವಿಡಿಯೋ
ಹಿಟ್​ ಆ್ಯಂಡ್ ರನ್
Follow us on

ಇತ್ತೀಚೆಗೆ ಅಪಘಾತ(Accident)ಗಳು ಹಾಗೂ ಹಿಟ್​ ಆ್ಯಂಡ್​ ರನ್(Hit and Run)  ಪ್ರಕರಣಗಳು ಹೆಚ್ಚಾಗುತ್ತಿವೆ. ಟ್ರಕ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದಿರುವ ಘಟನೆ ಹೈದರಾಬಾದ್​(Hyderabad)ನಲ್ಲಿ ನಡೆದಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಟ್​ ಆ್ಯಂಡ್ ರನ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ. ವೇಗದ ಲಾರಿಯೊಂದು ಜನನಿಬಿಡ ಪ್ರದೇಶದಲ್ಲಿ ಬೈಕ್​ಗೆ ಡಿಕ್ಕಿ ಹೊಡೆದು ಅದರ ಮುಂಭಾಗದ ಟೈರ್ ಅಡಿಯಲ್ಲಿ ಎಳೆದುಕೊಂಡು ಹೋಗುವುದನ್ನು ವಿಡಿಯೋ ತೋರಿಸುತ್ತದೆ.

ಆದರೆ ಪುಣ್ಯಕ್ಕೆ ಆ ಬೈಕ್ ಸವಾರ ಹೇಗೋ ಮಾಡಿ ಬೈಕ್​ನಿಂದ ತಪ್ಪಿಸಿಕೊಂಡು ಲಾರಿಯ ಬದಿಯನ್ನು ಹಿಡಿದು ನೇತಾಡುತ್ತಿರುವುದನ್ನು ಕಾಣಬಹುದು. ಸ್ವಲ್ಪ ದೂರ ಹೋಗ ಬಳಿಕ ಲಾರಿ ಚಕ್ರಕ್ಕೆ ಸಿಲುಕಿದ್ದ ಬೈಕ್​ ಬೇರ್ಪಡುತ್ತದೆ.
ಈ ಲಾರಿಯು ಬೈಕ್​ಗೆ ಡಿಕ್ಕಿ ಹೊಡೆದು ಸ್ವಲ್ಪ ಸಮಯದ ಬಳಿಕ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆ ಏಪ್ರಿಲ್​ 14ರಂದು ನಡೆದಿದೆ.

ಪೊಲೀಸರ ಪ್ರಕಾರ ಏಪ್ರಿಲ್ 15ರಂದು ಹೈದರಾಬಾದ್ ನಿವಾಸಿ ಅಬ್ದುಲ್ ಮಜೀದ್ ಎಂಬುವವರು ದೂರು ನೀಡಿದ್ದಾರೆ. ಏಪ್ರಿಲ್​ 14ರಂದು ರಾತ್ರಿ 11 ಗಂಟೆ ಸುಮಾರಿಗೆ ಚಂಪಾಪೇಟೆಯ ಲಕ್ಷ್ಮೀ ಗಾರ್ಡನ್ ಕಡೆಗೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಅತಿವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿತ್ತು.

ಮತ್ತಷ್ಟು ಓದಿ: Road Accident: ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ, 10 ಮಂದಿ ದುರ್ಮರಣ

ಡಿಕ್ಕಿಯ ನಂತರ ರಸ್ತೆಯ ಎಡಭಾಗದಲ್ಲಿ ಬಿದ್ದಿದ್ದಾರೆ, ಆಗ ಟ್ರಕ್ ಚಾಲಕ ವಾಹನವನ್ನು ನಿಲ್ಲಿಸದೆ ಓಡಿ ಹೋಗಲು ಯತ್ನಿಸಿದ್ದರು, ಈ ಘಟನೆಯ ವಿಡಿಯೋವನ್ನು ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರು ಮಾಡಿದ್ದಾರೆ. ಸವಾರನಿಗೆ ಗಾಯವಾಗದಿದ್ದರೂ ಆತನ ದ್ವಿಚಕ್ರವಾಹನವನ್ನು ಸುಮಾರು ದೂರ ಎಳೆದುಕೊಂಡು ಹೋಗಿದ್ದು, ಇದರಿಂದ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ.

ಘಟನೆಯ ವಿಡಿಯೋ

ನಂತರ ಅದೇ ಟ್ರಕ್​ ಚಂಪಾಪೇಟ್ ಟಿ ಜಂಕ್ಷನ್​ನಲ್ಲಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಚಾಲಕನನ್ನು ಪೃಥ್ವಿರಾಜ್ ಎಂದು ಗುರುತಿಸಲಾಗಿದೆ. ಘಟನೆಗೆ ಅತಿಯಾದ ವೇಗವೇ ಕಾರಣ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ