ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ

ಭಾಂಗ್​ ಕುಡಿದು ವಿಮಾನ ಹತ್ತಿದ್ದ ಪ್ರಯಾಣಿಕರೊಬ್ಬರು ಆಗಸದಲ್ಲಿರುವಾಗ ವಿಮಾನದ ಬಾಗಿಲು ತೆರೆಯಲು ಯತ್ನಿಸಿರುವ ಘಟನೆ ಇಂಡಿಗೋ ವಿಮಾನದಲ್ಲಿ ನಡೆದಿದೆ.

ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ
ಇಂಡಿಗೋ ವಿಮಾನ
Follow us
ನಯನಾ ರಾಜೀವ್
|

Updated on:May 26, 2024 | 3:22 PM

ವಿಮಾನ(Flight) ಹತ್ತುವ ಮುಂಚೆ ಭಾಂಗ್ ಕುಡಿದಿದ್ದ ಪ್ರಯಾಣಿಕರೊಬ್ಬರು ಆಗಸದಲ್ಲಿ ವಿಮಾನದ ಬಾಗಿಲು ತೆಗೆಯಲು ಯತ್ನಿಸಿರುವ ಘಟನೆ ನಡೆದಿದೆ. ಇಂದೋರ್​ನಿಂದ ಹೈದರಾಬಾದ್​ಗೆ ತೆರಳುತ್ತಿದ್ದ ಇಂಡಿಗೋ(IndiGo) ವಿಮಾನದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ವಿಮಾನವು ಹೈದರಾಬಾದ್‌ನಲ್ಲಿ ಲ್ಯಾಂಡ್ ಆಗುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ. 29 ವರ್ಷದ ವ್ಯಕ್ತಿ ವಿಮಾನ ಹತ್ತುವ ಮೊದಲು ‘ಭಾಂಗ್’ ಸೇವಿಸಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುವ ಮುನ್ನ ಏರ್‌ಲೈನ್ಸ್ ಉದ್ಯೋಗಿಗಳೊಂದಿಗೆ ವಾಗ್ವಾದ ನಡೆಸಿದ್ದರು ಎಂದು ಅವರು ಹೇಳಿದರು. ಘಟನೆ ಮೇ 21ರಂದು ನಡೆದಿದೆ ಎಂದು ಹೇಳಲಾಗಿದೆ, ಈ ವ್ಯಕ್ತಿಯ ವಿರುದ್ಧ ಏರ್‌ಲೈನ್ಸ್ ಸಿಬ್ಬಂದಿ ದೂರು ದಾಖಲಿಸಿದ್ದಾರೆ ಮತ್ತು ಅವರನ್ನು ಬಂಧಿಸಲಾಗಿದೆ.

ವರದಿಗಳ ಪ್ರಕಾರ, ವ್ಯಕ್ತಿ ಇಂದೋರ್‌ನಲ್ಲಿ ವಿಮಾನವನ್ನು ಹತ್ತಿದ ಕೂಡಲೇ, ಸಿಬ್ಬಂದಿ ಅವನ ನಡವಳಿಕೆಯಲ್ಲಿ ಅಸಹಜತೆಯನ್ನು ಗಮನಿಸಿದರು, ನಂತರ ಅವರು ವ್ಯಕ್ತಿಯನ್ನು ಬೇರೆ ಸೀಟಿಗೆ ಸ್ಥಳಾಂತರಿಸಿದರು. ಪ್ರಯಾಣಿಕ ತನ್ನ ಸ್ನೇಹಿತನೊಂದಿಗೆ ಕುಳಿತುಕೊಳ್ಳುವುದಾಗಿ ಹಠ ಹಿಡಿದಿದ್ದರು, ಸಿಬ್ಬಂದಿ ಕೊನೆಗೆ ಒಪ್ಪಿಗೆ ನೀಡಿದ್ದರು. ವ್ಯಕ್ತಿ ಸ್ವಲ್ಪ ಸಮಯದವರೆಗೆ ಶಾಂತವಾಗಿ ಕುಳಿತಿದ್ದರು ಬಳಿಕ ಸಹ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ.

ಮತ್ತಷ್ಟು ಓದಿ: ಲೇಹ್​ಗೆ ಹೊರಟಿದ್ದ ಸ್ಪೈಸ್​ಜೆಟ್ ವಿಮಾನಕ್ಕೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ

ವಿಮಾನದ ತುಂಬೆಲ್ಲಾ ಓಡಾಡಲು ಆರಂಭಿಸಿದ್ದರು, ಆತನಿಗೆ ನಿಗದಿತ ಸೀಟಿನಲ್ಲಿ ಕುಳಿತುಕೊಳ್ಳುವಂತೆ ಸಿಬ್ಬಂದಿ ತಾಕೀತು ಮಾಡಿದರೂ ಗಮನಕೊಡಲಿಲ್ಲ.

ವಿಮಾನ ಇನ್ನೇನು ಲ್ಯಾಂಡಿಂಗ್ ಆಗಬೇಕು ಅನ್ನುವಷ್ಟರಲ್ಲಿ ಬಾಗಿಲ ಬಳಿ ಹೋಗಿ ಬಾಗಿಲು ತೆಗೆಯಲು ಪ್ರಯತ್ನಿಸಿದ್ದರು. ವಿಮಾನದಲ್ಲಿದ್ದ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರು ಅವರನ್ನು ತಡೆದರು ಎಂದು ವಕ್ತಾರರು ತಿಳಿಸಿದ್ದಾರೆ. ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದು, ಶೌಚಾಲಯದಲ್ಲಿ ಸಿಗರೇಟ್​ ಸೇದಿದ್ದು, ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿರುವ ಸಾಕಷ್ಟು ಘಟನೆಗಳು ಬೆಳಿಕಿಗೆ ಬಂದಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:20 pm, Sun, 26 May 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್