AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ, ಅಮಿತ್​ ಶಾಗೆ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾಗೆ ಬೆದರಿಕೆ ಹಾಕಿದ್ದ ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಹೈದರಾಬಾದ್ ಮೂಲದ ಅಬ್ದುಲ್ ಮಜೀದ್ ಅತ್ತಾರ್​ನನ್ನು ಹೈದರಾಬಾದ್​ನ ಮೊಘಲ್​ಪುರ ಪೊಲೀಸರು ಬಂಧಿಸಿದ್ದಾರೆ.

ಪ್ರಧಾನಿ ಮೋದಿ, ಅಮಿತ್​ ಶಾಗೆ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ
Amit Shah, Narendra Modi
TV9 Web
| Edited By: |

Updated on:Jun 30, 2022 | 11:41 AM

Share

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾಗೆ ಬೆದರಿಕೆ ಹಾಕಿದ್ದ ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಹೈದರಾಬಾದ್ ಮೂಲದ ಅಬ್ದುಲ್ ಮಜೀದ್ ಅತ್ತಾರ್​ನನ್ನು ಹೈದರಾಬಾದ್​ನ ಮೊಘಲ್​ಪುರ ಪೊಲೀಸರು ಬಂಧಿಸಿದ್ದಾರೆ.

ಆತ ಮಜ್ಲಿಸ್ -ಎ-ಇಂಕ್ವಿಲಾಬ್-ಎ-ಮಿಲ್ಲಾದ ರಾಷ್ಟ್ರೀಯ ಸಂಚಾಲಕನಾಗಿದ್ದಾನೆ. ನೂಪುರ್​ ಶರ್ಮಾ ಹೇಳಿಕೆಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದ ಅಬ್ದುಲ್,  ಆರೆಸ್ಸೆಸ್ ಮತ್ತು ಬಿಜೆಪಿಯ ಉನ್ನತ ನಾಯಕರು ಕ್ಷಮೆಯಾಚಿಸಲಿ ಎಂದು ಹೇಳಿದ್ದ.

ಕಮೆಂಟ್‌ಗಳಿಗೆ ಕ್ಷಮೆಯಾಚಿಸಲಿ ಅಥವಾ ಶಿರಚ್ಛೇದಕ್ಕೆ ಸಿದ್ಧರಾಗಿರಿ ಫೇಸ್‌ಬುಕ್​ನಲ್ಲಿ ಪ್ರಚೋದನಕಾರಿ ಪೋಸ್ಟ್ ಆತ ಹಾಕಿದ್ದ ಎಂದು ಹೇಳಲಾಗಿದೆ.

ಅಬ್ದುಲ್ ಮಜಿದ್ ಅತ್ತಾರ್ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಲಾಗಿದೆ. ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಉದ್ದೇಶ ಹಾಗೂ ಕೋಮು ದ್ವೇಷ ಮೂಡಿಸುವ ಉದ್ದೇಶದಿಂದ ಈ ಪೋಸ್ಟ್ ಮಾಡಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 153A,295-A,504,505(2),506-II ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್‌ಐಆರ್ ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು.

ಎರಡು ದಿನಗಳ ಹಿಂದಷ್ಟೇ ರಾಜಸ್ಥಾನದ ಉದಯ್​ಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಎಂಬುವವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಟೈಲರ್ ಬೆಂಬಲ ಸೂಚಿಸಿ ಪೋಸ್ಟ್ ಒಂದನ್ನು ಹಾಕಿದ್ದರು.

ಹೀಗಾಗಿ ಯಾವುದೇ ಬೆದರಿಕೆ ಕರೆ, ಬೆದರಿಕೆ ಪೋಸ್ಟ್​ಗಳನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Published On - 11:34 am, Thu, 30 June 22

Follow Us
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್