Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: ವಿಮಾನ ತಪ್ಪಿಹೋಗುತ್ತೆಂದು ಫ್ಲೈಟ್​ ಅಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದ ವ್ಯಕ್ತಿಯ ಬಂಧನ

ಹೈದರಾಬಾದ್‌ನಿಂದ ಚೆನ್ನೈಗೆ ತೆರಳುತ್ತಿದ್ದ ಪ್ರಯಾಣಿಕನೊಬ್ಬ ವಿಮಾನ ತಪ್ಪಿ ಹೋಗಬಹುದೆಂಬ ಭಯದಿಂದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾನೆ.ಬಾಂಬ್ ಬೆದರಿಕೆ ಬಂದ ಕೂಡಲೇ ಭದ್ರತಾ ಸಿಬ್ಬಂದಿ ತೆರಳಿ ವಿಮಾನವನ್ನು ಪರಿಶೀಲಿಸಿದರು. ಮತ್ತು ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಿದರು.

Hyderabad: ವಿಮಾನ ತಪ್ಪಿಹೋಗುತ್ತೆಂದು ಫ್ಲೈಟ್​ ಅಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದ ವ್ಯಕ್ತಿಯ ಬಂಧನ
ವಿಮಾನ
Follow us
ನಯನಾ ರಾಜೀವ್
|

Updated on: Feb 21, 2023 | 8:38 AM

ಹೈದರಾಬಾದ್‌ನಿಂದ ಚೆನ್ನೈಗೆ ತೆರಳುತ್ತಿದ್ದ ಪ್ರಯಾಣಿಕನೊಬ್ಬ ವಿಮಾನ ತಪ್ಪಿ ಹೋಗಬಹುದೆಂಬ ಭಯದಿಂದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾನೆ.ಬಾಂಬ್ ಬೆದರಿಕೆ ಬಂದ ಕೂಡಲೇ ಭದ್ರತಾ ಸಿಬ್ಬಂದಿ ತೆರಳಿ ವಿಮಾನವನ್ನು ಪರಿಶೀಲಿಸಿದರು. ಮತ್ತು ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಿದರು.

ಹೈದರಾಬಾದ್​ನಿಂದ ಆತ ಚೆನ್ನೈಗೆ ತೆರಳಬೇಕಿತ್ತು, ಏರ್​ಪೋರ್ಟ್​ಗೆ ತೆರಳುವುದು ತಡವಾಗುತ್ತಿತ್ತು, ವಿಮಾನ ಮಿಸ್ ಆಗಬಹುದು ಎನ್ನು ಭಯದಿಂದ ಹುಸಿ ಬಾಂಬ್ ಕರೆ ಮಾಡಿದ್ದಾನೆ.

ಆರೋಪಿಯನ್ನು ಗುರುತಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಬಂದಿತ್ತು ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪರಿಚಿತ ಇಂದು ಮುಂಜಾನೆ ಹುಸಿ ಬಾಂಬ್ ಕರೆ ಬಂದಿದ್ದು, ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು. 2022ರ ಮೇನಲ್ಲಿ ಬೆಳಗಿನ ಜಾವ 3.30 ರ ಸಮಯದಲ್ಲಿ ಅಪರಿಚಿತ ವ್ಯಕ್ತಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಮಾಹಿತಿ ನೀಡಿದ್ದರು.

ಗೂಗಲ್ ಕಚೇರಿಗೆ ಹುಸಿ ಬಾಂಬ್ ಕರೆ ಮಹಾರಾಷ್ಟ್ರದ ಪುಣೆಯ ಗೂಗಲ್ ಕಂಪನಿ ಕಚೇರಿ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ ಬಂದ ನಂತರ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಇದು ಹುಸಿ ಕರೆ ಎಂಬುದು ದೃಢಪಟ್ಟಿತ್ತು.

ಮದ್ಯದ ನಶೆಯಲ್ಲಿ ಈ ರೀತಿ ಕರೆ ಮಾಡಿದ ವ್ಯಕ್ತಿಯನ್ನು ಹೈದರಾಬಾದ್ ನಲ್ಲಿ ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪುಣೆಯ ಮುಂಡ್ವಾ ಪ್ರದೇಶದಲ್ಲಿರುವ ಬಹು ಅಂತಸ್ತಿನ ವಾಣಿಜ್ಯ ಕಟ್ಟಡದ 11ನೇ ಮಹಡಿಯಲ್ಲಿದ್ದ ಗೂಗಲ್ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಭಾನುವಾರ ತಡರಾತ್ರಿ ಕರೆ ಬಂದಿದ್ದಾಗಿ ಉಪ ಪೊಲೀಸ್ ಆಯುಕ್ತ ವಿಕ್ರಾಂತ್ ದೇಶ್ ಮುಖ್ ತಿಳಿಸಿದ್ದರು.

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ