Hyderabad: ವಿಮಾನ ತಪ್ಪಿಹೋಗುತ್ತೆಂದು ಫ್ಲೈಟ್​ ಅಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದ ವ್ಯಕ್ತಿಯ ಬಂಧನ

|

Updated on: Feb 21, 2023 | 8:38 AM

ಹೈದರಾಬಾದ್‌ನಿಂದ ಚೆನ್ನೈಗೆ ತೆರಳುತ್ತಿದ್ದ ಪ್ರಯಾಣಿಕನೊಬ್ಬ ವಿಮಾನ ತಪ್ಪಿ ಹೋಗಬಹುದೆಂಬ ಭಯದಿಂದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾನೆ.ಬಾಂಬ್ ಬೆದರಿಕೆ ಬಂದ ಕೂಡಲೇ ಭದ್ರತಾ ಸಿಬ್ಬಂದಿ ತೆರಳಿ ವಿಮಾನವನ್ನು ಪರಿಶೀಲಿಸಿದರು. ಮತ್ತು ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಿದರು.

Hyderabad: ವಿಮಾನ ತಪ್ಪಿಹೋಗುತ್ತೆಂದು ಫ್ಲೈಟ್​ ಅಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದ ವ್ಯಕ್ತಿಯ ಬಂಧನ
ವಿಮಾನ
Follow us on

ಹೈದರಾಬಾದ್‌ನಿಂದ ಚೆನ್ನೈಗೆ ತೆರಳುತ್ತಿದ್ದ ಪ್ರಯಾಣಿಕನೊಬ್ಬ ವಿಮಾನ ತಪ್ಪಿ ಹೋಗಬಹುದೆಂಬ ಭಯದಿಂದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾನೆ.ಬಾಂಬ್ ಬೆದರಿಕೆ ಬಂದ ಕೂಡಲೇ ಭದ್ರತಾ ಸಿಬ್ಬಂದಿ ತೆರಳಿ ವಿಮಾನವನ್ನು ಪರಿಶೀಲಿಸಿದರು. ಮತ್ತು ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಿದರು.

ಹೈದರಾಬಾದ್​ನಿಂದ ಆತ ಚೆನ್ನೈಗೆ ತೆರಳಬೇಕಿತ್ತು, ಏರ್​ಪೋರ್ಟ್​ಗೆ ತೆರಳುವುದು ತಡವಾಗುತ್ತಿತ್ತು, ವಿಮಾನ ಮಿಸ್ ಆಗಬಹುದು ಎನ್ನು ಭಯದಿಂದ ಹುಸಿ ಬಾಂಬ್ ಕರೆ ಮಾಡಿದ್ದಾನೆ.

ಆರೋಪಿಯನ್ನು ಗುರುತಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಬಂದಿತ್ತು
ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪರಿಚಿತ ಇಂದು ಮುಂಜಾನೆ ಹುಸಿ ಬಾಂಬ್ ಕರೆ ಬಂದಿದ್ದು, ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು.
2022ರ ಮೇನಲ್ಲಿ ಬೆಳಗಿನ ಜಾವ 3.30 ರ ಸಮಯದಲ್ಲಿ ಅಪರಿಚಿತ ವ್ಯಕ್ತಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಮಾಹಿತಿ ನೀಡಿದ್ದರು.

ಗೂಗಲ್ ಕಚೇರಿಗೆ ಹುಸಿ ಬಾಂಬ್ ಕರೆ
ಮಹಾರಾಷ್ಟ್ರದ ಪುಣೆಯ ಗೂಗಲ್ ಕಂಪನಿ ಕಚೇರಿ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ ಬಂದ ನಂತರ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಇದು ಹುಸಿ ಕರೆ ಎಂಬುದು ದೃಢಪಟ್ಟಿತ್ತು.

ಮದ್ಯದ ನಶೆಯಲ್ಲಿ ಈ ರೀತಿ ಕರೆ ಮಾಡಿದ ವ್ಯಕ್ತಿಯನ್ನು ಹೈದರಾಬಾದ್ ನಲ್ಲಿ ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪುಣೆಯ ಮುಂಡ್ವಾ ಪ್ರದೇಶದಲ್ಲಿರುವ ಬಹು ಅಂತಸ್ತಿನ ವಾಣಿಜ್ಯ ಕಟ್ಟಡದ 11ನೇ ಮಹಡಿಯಲ್ಲಿದ್ದ ಗೂಗಲ್ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಭಾನುವಾರ ತಡರಾತ್ರಿ ಕರೆ ಬಂದಿದ್ದಾಗಿ ಉಪ ಪೊಲೀಸ್ ಆಯುಕ್ತ ವಿಕ್ರಾಂತ್ ದೇಶ್ ಮುಖ್ ತಿಳಿಸಿದ್ದರು.