AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣಗಳಲ್ಲಿ “ಬಾಡಿಗೆಗೆ ಗೆಳೆಯ” ಜಾಲ: ಯುವತಿಯರಿಗೆ ಪೊಲೀಸರಿಂದ ಬಿಗ್ ವಾರ್ನಿಂಗ್

ಹೈದರಾಬಾದ್‌ನಲ್ಲಿ 'ಬಾಯ್‌ಫ್ರೆಂಡ್ ಫಾರ್ ರೆಂಟ್' ಹೆಸರಿನಲ್ಲಿ ಹೊಸ ಸೈಬರ್ ವಂಚನೆ ಜಾಲ ಸಕ್ರಿಯವಾಗಿದೆ. ಆಕರ್ಷಕ ಜಾಹೀರಾತುಗಳ ಮೂಲಕ ಯುವತಿಯರನ್ನು ಗುರಿಯಾಗಿಸಿ, ನೋಂದಣಿ ಶುಲ್ಕದ ಹೆಸರಿನಲ್ಲಿ ಹಣ ದೋಚಿ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ಹೈದರಾಬಾದ್ ಪೊಲೀಸರು ಈ ಬಗ್ಗೆ ತೀವ್ರ ಎಚ್ಚರಿಕೆ ನೀಡಿದ್ದು, ವೈಯಕ್ತಿಕ ಮಾಹಿತಿ ಹಂಚಿಕೆ ಮತ್ತು ಮುಂಗಡ ಹಣ ಪಾವತಿಸದಂತೆ, ಸೈಬರ್ ಕ್ರೈಮ್ ಸಹಾಯವಾಣಿಗೆ ದೂರು ನೀಡುವಂತೆ ಸೂಚಿಸಿದ್ದಾರೆ. ಇದು ಬ್ಲ್ಯಾಕ್‌ಮೇಲ್ ಮತ್ತು ದೈಹಿಕ ಅಪಾಯಕ್ಕೂ ಕಾರಣವಾಗಬಹುದು.

ಸಾಮಾಜಿಕ ಜಾಲತಾಣಗಳಲ್ಲಿ ಬಾಡಿಗೆಗೆ ಗೆಳೆಯ ಜಾಲ: ಯುವತಿಯರಿಗೆ ಪೊಲೀಸರಿಂದ ಬಿಗ್ ವಾರ್ನಿಂಗ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 10, 2026 | 4:42 PM

Share

ಹೈದರಾಬಾದ್, ಆ.10: ದೇಶದ ದೊಡ್ಡ ದೊಡ್ಡ ನಗರಗಳಲ್ಲಿ ಬಾಯ್‌ಫ್ರೆಂಡ್ ಫಾರ್ ರೆಂಟ್, ಗರ್ಲ್​​​ಫ್ರೆಂಡ್ ಫಾರ್ ರೆಂಟ್ ಎಂಬ ಟ್ರೆಂಡ್​​ ಶುರುವಾಗಿದೆ. ಒಬ್ಬಂಟಿ ಯುವಕ-ಯುವತಿಯರು ಅಥವಾ ಹುಚ್ಚುತನಕ್ಕೆ ಇಂತಹ ಆಪ್​​​ಗಳನ್ನು ಡೌನ್​​​ಲೋಡ್​​​ ಮಾಡಿಕೊಂಡು ತಮ್ಮ ಜೀವನ ಹಾಗೂ ಹಣವನ್ನು ಖರ್ಚು ಮಾಡುತ್ತಿದ್ದಾರೆ. ಮೋಸ ಬಲೆಗೆ ಬಿದ್ದು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಇಂತಹ ಟ್ರೆಂಡ್​​​ಗಳು ದೆಹಲಿ, ಮುಂಬೈ, ಹೈದರಬಾದ್​​​, ಬೆಂಗಳೂರಂತಹ ಸಿಟಿಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರು ಹಾಗೂ ಮಹಿಳೆಯರನ್ನು ಗುರಿಯಾಗಿಸಿಕೊಂಡು “ಬಾಯ್‌ಫ್ರೆಂಡ್ ಫಾರ್ ರೆಂಟ್” (Boyfriends for Rent) ಹೆಸರಿನಲ್ಲಿ ಆಕರ್ಷಕ ಜಾಹೀರಾತುಗಳನ್ನು ನೀಡಿ ಹಣ ಹಾಗೂ ವೈಯಕ್ತಿಕ ಮಾಹಿತಿ ದೋಚುತ್ತಿರುವ ನೂತನ ಸೈಬರ್ ವಂಚನೆ ಜಾಲದ ಕುರಿತು ಹೈದರಾಬಾದ್ ಪೊಲೀಸರು ತೀವ್ರ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಹೈದರಾಬಾದ್ ನಗರ ಪೊಲೀಸ್ ಆಯುಕ್ತವಿ.ಸಿ. ಸಜ್ಜನರ್ ಅವರು ಎಕ್ಸ್ (ಟ್ವಿಟರ್)ನಲ್ಲಿ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸಂದೇಶ ರವಾನಿಸಿದ್ದು, ಆಕರ್ಷಕ ರಿಯಾಯಿತಿಗಳು ಹಾಗೂ ಸಂಗಾತಿ ಸೇವೆ ಒದಗಿಸುವುದಾಗಿ ನಂಬಿಸಿ ಸೈಬರ್ ವಂಚಕರು ಮೋಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಹಾಗೂ ಟೆಲಿಗ್ರಾಂಗಳಲ್ಲಿ “Rent Boyfriend Your Personal Companion” ಎಂಬಂತಹ ಶೀರ್ಷಿಕೆಗಳೊಂದಿಗೆ ಜಾಹೀರಾತುಗಳನ್ನು ಪೋಸ್ಟ್ ಮಾಡಲಾಗುತ್ತದೆ. AI (ಕೃತಕ ಬುದ್ಧಿಮತ್ತೆ) ಮೂಲಕ ರಚಿಸಿದ ಅಥವಾ ಇತರರ ಪ್ರೊಫೈಲ್‌ಗಳಿಂದ ಕದ್ದ ಸುಂದರ ಯುವಕರ ಫೋಟೋಗಳನ್ನು ಬಳಸಲಾಗುತ್ತದೆ. ಕಾಫಿ ಡೇಟ್‌ಗಳು, ಸಿನೆಮಾಗೆ ಹೋಗುವುದು ಹಾಗೂ ಶಾಪಿಂಗ್‌ಗೆ ಸಾಥ್ ನೀಡುವುದು ಮುಂತಾದ ಸೇವೆಗಳನ್ನು ನೀಡುವುದಾಗಿ ಆಸೆ ತೋರಿಸಲಾಗುತ್ತದೆ.

ಸೌಲಭ್ಯವನ್ನು ಬುಕ್ ಮಾಡಲು ಯುವತಿಯರು ಸಂಪರ್ಕಿಸಿದಾಗ, ಮಾತುಕತೆಯ ಮೂಲಕ ಅವರ ನಂಬಿಕೆ ಗಳಿಸಿ, ನೋಂದಣಿ ಶುಲ್ಕ, ಭದ್ರತಾ ಠೇವಣಿ ಅಥವಾ ಬುಕಿಂಗ್ ಶುಲ್ಕದ ಹೆಸರಿನಲ್ಲಿ QR ಕೋಡ್ ಹಾಗೂ UPI ಆಪ್‌ಗಳ ಮೂಲಕ ಮುಂಗಡ ಹಣ ವರ್ಗಾಯಿಸಿಕೊಳ್ಳಲಾಗುತ್ತದೆ. ಒಮ್ಮೆ ಹಣ ಖಾತೆಗೆ ಜಮೆಯಾದ ತಕ್ಷಣ ಸೈಬರ್ ಖದೀಮರು ಯುವತಿಯರ ನಂಬರ್‌ಗಳನ್ನು ಬ್ಲಾಕ್ ಮಾಡಿ ಸಂಪರ್ಕ ಕಡಿತಗೊಳಿಸುತ್ತಾರೆ.

ಬ್ಲ್ಯಾಕ್‌ಮೇಲ್ ಮತ್ತು ದೈಹಿಕ ಅಪಾಯದ ಎಚ್ಚರಿಕೆ:

ಪೊಲೀಸರ ಪ್ರಕಾರ, ಅಪರಿಚಿತ ಹಾಗೂ ಪರಿಶೀಲಿಸದ ಆನ್‌ಲೈನ್ ಖಾತೆಗಳೊಂದಿಗೆ ಫೋನ್ ಸಂಖ್ಯೆ, ಫೋಟೋ ಅಥವಾ ವೈಯಕ್ತಿಕ ವಿವರಗಳನ್ನು ಹಂಚಿಕೊಳ್ಳುವುದರಿಂದ ಬ್ಲ್ಯಾಕ್‌ಮೇಲ್, ಕಿರುಕುಳ ಹಾಗೂ ನೇರವಾಗಿ ಭೇಟಿಯಾದಾಗ ದೈಹಿಕ ಅಪಾಯಕ್ಕೂ ಈಡಾಗುವ ಸಾಧ್ಯತೆಯಿರುತ್ತದೆ.

ಇದನ್ನೂ ಓದಿ: ದೇವಾಲಯಗಳಲ್ಲಿ ಸೆಪ್ಟೆಂಬರ್ 1 ರಿಂದ ‘ನೋ ಮೊಬೈಲ್’: ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಪೋಷಕರು ಮತ್ತು ಯುವತಿಯರಿಗೆ ಸಜ್ಜನ್ನಾರ್ ನೀಡಿದ ಪ್ರಮುಖ ಸಲಹೆಗಳು:

ಪೋಷಕರು ತಮ್ಮ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಏನು ವೀಕ್ಷಿಸುತ್ತಿದ್ದಾರೆ, ಯಾರೊಂದಿಗೆ ಮಾತನಾಡುತ್ತಿದ್ದಾರೆ ಹಾಗೂ ಯಾರನ್ನು ಭೇಟಿಯಾಗುತ್ತಿದ್ದಾರೆ ಎಂಬುದರ ಮೇಲೆ ನಿಗಾ ಇಡಬೇಕು. ಮಕ್ಕಳ ಸ್ಮಾರ್ಟ್‌ಫೋನ್ ಬಳಕೆಯನ್ನು ಗಮನಿಸುವುದರಿಂದ ಅವರನ್ನು ಇಂತಹ ವಂಚನೆಗಳಿಂದ ರಕ್ಷಿಸಬಹುದು. ಆನ್‌ಲೈನ್‌ನಲ್ಲಿ ಅಪರಿಚಿತ ಪ್ರೊಫೈಲ್‌ಗಳ ಜೊತೆ ಸಂವಹನ ನಡೆಸಬೇಡಿ ಹಾಗೂ ಇಂತಹ ಯಾವುದೇ ಸೇವೆಗಳಿಗೆ ಯಾವುದೇ ಕಾರಣಕ್ಕೂ ಮುಂಗಡ ಹಣ ಪಾವತಿಸಬೇಡಿ.

ಯಾವುದೇ ರೀತಿಯ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ಅಥವಾ ಸೈಬರ್ ವಂಚನೆಗೆ ಒಳಗಾದಲ್ಲಿ ತಕ್ಷಣವೇ ಸೈಬರ್ ಕ್ರೈಮ್ ಸಹಾಯವಾಣಿ ಸಂಖ್ಯೆ 1930 ಗೆ ಕರೆ ಮಾಡಬಹುದು ಅಥವಾ ಅಧಿಕೃತ ರಾಷ್ಟ್ರೀಯ ಸೈಬರ್ ಕ್ರೈಮ್ ಪೋರ್ಟಲ್ (national cybercrime portal) ಮೂಲಕ ದೂರು ದಾಖಲಿಸಬಹುದು ಎಂದು ಹೈದರಾಬಾದ್​ ಪೊಲೀಸರು ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ