AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಸರ್ಕಾರ ಹೈದರಾಬಾದ್ ರಸ್ತೆಗೆ ಡೊನಾಲ್ಡ್ ಟ್ರಂಪ್ ಹೆಸರಿಡಲು ಕಾರಣವೇನು?

ತೆಲಂಗಾಣ ಸರ್ಕಾರವು ಹೈದರಾಬಾದ್‌ನಲ್ಲಿರುವ ಯುನೈಟೆಡ್ ಸ್ಟೇಟ್ಸ್ ಕಾನ್ಸುಲೇಟ್ ಜನರಲ್‌ನ ಹೈ ಪ್ರೊಫೈಲ್ ರಸ್ತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರಿಡಲು ಪ್ರಸ್ತಾಪಿಸಿದ್ದು, ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಈ ರಸ್ತೆಯನ್ನು ಇನ್ನು 'ಡೊನಾಲ್ಡ್ ಟ್ರಂಪ್ ಅವೆನ್ಯೂ' ಎಂದು ಕರೆಯಲಾಗುವುದು. ಹಾಗೇ, ಇತರೆ ಹಲವು ರಸ್ತೆಗಳಿಗೆ ಟೆಕ್ ದೈತ್ಯ ಕಂಪನಿಗಳ ಹೆಸರು, ರತನ್ ಟಾಟಾ ಹೆಸರು ಇಡುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ.

ತೆಲಂಗಾಣ ಸರ್ಕಾರ ಹೈದರಾಬಾದ್ ರಸ್ತೆಗೆ ಡೊನಾಲ್ಡ್ ಟ್ರಂಪ್ ಹೆಸರಿಡಲು ಕಾರಣವೇನು?
Donald Trump
ಸುಷ್ಮಾ ಚಕ್ರೆ
|

Updated on: Dec 08, 2025 | 6:22 PM

Share

ಹೈದರಾಬಾದ್, ಡಿಸೆಂಬರ್ 8: ಹೈದರಾಬಾದ್‌ನಲ್ಲಿರುವ ಯುಎಸ್ ಕಾನ್ಸುಲೇಟ್ ಕಟ್ಟಡಕ್ಕೆ ಹೋಗುವ ರಸ್ತೆಗೆ ಅಮೆರಿಕದ 45 ಮತ್ತು 47ನೇ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ (Donald Trump) ಅವರ ಹೆಸರಿಡಲು ತೆಲಂಗಾಣ ಸರ್ಕಾರ ಭಾನುವಾರ ಪ್ರಸ್ತಾಪಿಸಿದೆ. ಈ ಹೈ ಪ್ರೊಫೈಲ್ ರಸ್ತೆಗೆ ‘ಡೊನಾಲ್ಡ್ ಟ್ರಂಪ್ ಅವೆನ್ಯೂ’ ಎಂದು ಹೆಸರಿಡಲು ನಿರ್ಧರಿಸಲಾಗಿದೆ. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಹೈದರಾಬಾದ್​​ನ ರಸ್ತೆಗೆ ಟ್ರಂಪ್ ಹೆಸರಿಡುವ ಬಗ್ಗೆ ತೆಲಂಗಾಣ ಸರ್ಕಾರ ಶೀಘ್ರದಲ್ಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಮತ್ತು ಯುಎಸ್ ರಾಯಭಾರ ಕಚೇರಿಗೆ ಸಮನ್ವಯ ಮತ್ತು ಅನುಮೋದನೆಗಾಗಿ ಮನವಿ ಮಾಡಲಿದೆ.

ಹಾಗೇ, ಗ್ರೀನ್‌ಫೀಲ್ಡ್ ರೇಡಿಯಲ್ ರಸ್ತೆಗೆ ರತನ್ ಟಾಟಾ ಅವರ ಹೆಸರಿಡಲಾಗುವುದು. ರವಿರಿಯಾಲದಲ್ಲಿರುವ ಔಟರ್ ರಿಂಗ್ ರಸ್ತೆ (ORR) ಅನ್ನು ಪ್ರಸ್ತಾವಿತ ರೇಡಿಯಲ್ ರಿಂಗ್ ರಸ್ತೆ (RRR) ನೊಂದಿಗೆ ಸಂಪರ್ಕಿಸುವ ಮುಂಬರುವ ಗ್ರೀನ್‌ಫೀಲ್ಡ್ ರೇಡಿಯಲ್ ರಸ್ತೆಗೆ ದಿವಂಗತ ಉದ್ಯಮಿ ರತನ್ ಟಾಟಾ ಅವರ ಹೆಸರಿಡಲು ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: Telangana Road Accident: ತೆಲಂಗಾಣ: ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 20 ಮಂದಿ ಸಾವು

ರಾಜ್ಯ ಸರ್ಕಾರವು ಹೈದರಾಬಾದ್​​ನ ಪ್ರಮುಖ ರಸ್ತೆಗೆ ಯುಎಸ್ ಮೂಲದ ಟೆಕ್ ದೈತ್ಯ ಗೂಗಲ್ ಹೆಸರಿಡಲು ಪ್ರಸ್ತಾಪಿಸಿದೆ. ಇದಲ್ಲದೆ, ‘ವಿಪ್ರೋ’, ‘ಮೈಕ್ರೋಸಾಫ್ಟ್’ ನಂತಹ ಇತರ ಟೆಕ್ ದೈತ್ಯ ಕಂಪನಿಗಳನ್ನು ಸಹ ರಸ್ತೆಗಳಿಗೆ ಇಡುವ ಸಾಧ್ಯತೆಯಿದೆ. ನಗರದ ಹೊರವಲಯದಲ್ಲಿರುವ ಭಾರತ್ ಫ್ಯೂಚರ್ ಸಿಟಿಯಲ್ಲಿ ತೆಲಂಗಾಣ ರೈಸಿಂಗ್ ಗ್ಲೋಬಲ್ ಶೃಂಗಸಭೆ 2025ರ ಮುನ್ನಾದಿನದಂದು ಈ ಘೋಷಣೆ ಮಾಡಲಾಯಿತು.

ನವೆಂಬರ್‌ನಲ್ಲಿ ದೆಹಲಿಯಲ್ಲಿ ನಡೆದ ಯುಎಸ್-ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್‌ನರ್‌ಶಿಪ್ ಫೋರಂ (USISPF)ನಲ್ಲಿ ಮಾತನಾಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮುಖ ರಸ್ತೆಗಳಿಗೆ ಪ್ರಮುಖ ಜಾಗತಿಕ ಕಂಪನಿಗಳ ಹೆಸರಿಡಲು ಪ್ರಸ್ತಾಪಿಸಿದ್ದರು.

ಇದನ್ನೂ ಓದಿ: ತೆಲಂಗಾಣದ ರಾಜಭವನವನ್ನು ಲೋಕ ಭವನ ಎಂದು ಮರುನಾಮಕರಣ

ಈ ಪ್ರಸ್ತಾವನೆಗೆ ಪ್ರತಿಕ್ರಿಯಿಸಿದ ಬಿಜೆಪಿ, ಕಾಂಗ್ರೆಸ್ ನೇತೃತ್ವದ ತೆಲಂಗಾಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಹೈದರಾಬಾದ್ ಅನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡಲು ಸೂಚಿಸಿದ್ದಾರೆ. ”ಕಾಂಗ್ರೆಸ್ ಸರ್ಕಾರ ಹೆಸರುಗಳನ್ನು ಬದಲಾಯಿಸಲು ಇಷ್ಟೊಂದು ಉತ್ಸುಕರಾಗಿದ್ದರೆ, ಅವರು ನಿಜವಾಗಿಯೂ ಇತಿಹಾಸ ಮತ್ತು ಅರ್ಥವನ್ನು ಹೊಂದಿರುವ ಹೆಸರುಗಳನ್ನು ಬಳಸಬೇಕು. ರೇವಂತ್ ರೆಡ್ಡಿ ಯಾರ ವರ್ತನೆಯನ್ನು ಅನುಸರಿಸುತ್ತಿದ್ದಾರೋ ಅವರ ಹೆಸರನ್ನೇ ಇಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಲೇವಡಿ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಇಂದು ಮುಕ್ಕೋಟಿ ದ್ವಾದಶಿ, ಒಂದು ಪುಣ್ಯಕ್ಕೆ 3 ಕೋಟಿ ಫಲ!
ಇಂದು ಮುಕ್ಕೋಟಿ ದ್ವಾದಶಿ, ಒಂದು ಪುಣ್ಯಕ್ಕೆ 3 ಕೋಟಿ ಫಲ!