Hyderabad: ಶಾಲಾ ಆಟದ ಮೈದಾನದಲ್ಲಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ ಪ್ರಾಂಶುಪಾಲರ ಸಾಕು ನಾಯಿ
ಶಾಲಾ ಆಟದ ಮೈದಾನದಲ್ಲಿ ವಿದ್ಯಾರ್ಥಿಗಳು ಆಟವಾಡುತ್ತಿರುವ ವೇಳೆ ಪ್ರಾಂಶುಪಾಲರ ಸಾಕು ನಾಯಿ ದಾಳಿ(Dog Attack) ನಡೆಸಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿಗೆ ಗಾಯವಾಗಿದೆ.
ಶಾಲಾ ಆಟದ ಮೈದಾನದಲ್ಲಿ ವಿದ್ಯಾರ್ಥಿಗಳು ಆಟವಾಡುತ್ತಿರುವ ವೇಳೆ ಪ್ರಾಂಶುಪಾಲರ ಸಾಕು ನಾಯಿ ದಾಳಿ(Dog Attack) ನಡೆಸಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿಗೆ ಗಾಯವಾಗಿದೆ. ಹೈದರಾಬಾದ್ನ ಸನತ್ ನಗರದಲ್ಲಿರುವ ಸೇಂಟ್ ಥೆರೆಸಾ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಆಟದ ಮೈದಾನದಲ್ಲಿ ವಿದ್ಯಾರ್ಥಿಗಳು ಆಟವಾಡುತ್ತಿರುವಾಗ ಘಟನೆ ಸಂಭವಿಸಿದೆ.
ಗಾಯಗೊಂಡು ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಾಂಶುಪಾಲರು ನಾಯಿಯನ್ನು ಶಾಲೆಗೆ ಕರೆತಂದಿರುವುದಕ್ಕೆ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ಓದಿ: Stray Dog Attack: 8 ವರ್ಷದ ಬಾಲಕಿಯ ಮೇಲೆ 3 ಬೀದಿ ನಾಯಿಗಳ ದಾಳಿ
ಪೊಲೀಸರು ಪ್ರಾಂಶುಪಾಲರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರೆಸಿದ್ದಾರೆ. ಇದೇ ಫೆಬ್ರವರಿಯಲ್ಲಿ ಅಂಬರ್ ಪೇಟೆಯಲ್ಲಿ ನಾಯಿಗಳು 5 ವರ್ಷದ ಮಗುವಿನ ಮೇಲೆ ದಾಳಿ ನಡೆಸಿದ್ದವು, ಈಗಲೂ ನಾಯಿಗಳ ದಾಳಿ ಮುಂದುವರೆದಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:40 pm, Fri, 23 June 23