AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಡ್ ಡೆಲಿವರಿಗೆ ಹೋದಾಗ ನಾಯಿಗೆ ಹೆದರಿ 3ನೇ ಮಹಡಿಯಿಂದ ಹಾರಿದ ಸ್ವಿಗ್ಗಿ ಬಾಯ್

ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗೆ ಫುಡ್ ನೀಡಲು ತೆರಳಿದ್ದಾಗ ಜರ್ಮನ್ ಶೆಫರ್ಡ್ ನಾಯಿ ಸ್ವಿಗ್ಗಿ ಡೆಲಿವರಿ ಬಾಯ್ ಮೇಲೆ ದಾಳಿ ನಡೆಸಿದೆ. ಇದರಿಂದ ಹೆದರಿದ ಅವರು ಮೂರನೇ ಮಹಡಿಯಿಂದ ಕೆಳಗೆ ಹಾರಿ, ಗಂಭೀರವಾಗಿ ಗಾಯಗೊಂಡಿದ್ದಾರೆ.

ಫುಡ್ ಡೆಲಿವರಿಗೆ ಹೋದಾಗ ನಾಯಿಗೆ ಹೆದರಿ 3ನೇ ಮಹಡಿಯಿಂದ ಹಾರಿದ ಸ್ವಿಗ್ಗಿ ಬಾಯ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 13, 2023 | 5:10 PM

Share

ಹೈದರಾಬಾದ್: ಫುಡ್ ಡೆಲಿವರಿಗೆ (Food Delivery) ಹೋದಾಗ ನಾಯಿಗೆ ಹೆದರಿ ಸ್ವಿಗ್ಗಿ ಡೆಲಿವರಿ ಬಾಯ್ (Swiggy Delivery Agent) 3ನೇ ಮಹಡಿಯಿಂದ ಜಿಗಿದ ಘಟನೆ ನಡೆದಿದೆ. ಆ ಯುವಕನ ಸ್ಥಿತಿ ಗಂಭೀರವಾಗಿದೆ. ಸ್ವಿಗ್ಗಿ ಡೆಲಿವರಿ ಬಾಯ್ ಮನೆಯ ಕಾಲಿಂಗ್ ಬೆಲ್ ಒತ್ತಿದಾಗ ಮನೆಯೊಳಗಿದ್ದ ನಾಯಿ ಜೋರಾಗಿ ಬೊಗಳುತ್ತಾ ಹೊರಗೆ ಬಂದಿತು. ಆಗ ಹೆದರಿದ ಡೆಲಿವರಿ ಬಾಯ್ ಕೆಳಗೆ ಹಾರಿ ಬಿದ್ದಿದ್ದಾರೆ.

ನಾಯಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಆ ಯುವಕ ಮೂರನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ. ಮೇಲಿನಿಂದ ಬಿದ್ದಿದ್ದರಿಂದ ಅವರಿಗೆ ಗಂಭೀರ ಗಾಯಗಳಾಗಿವೆ. ಆತ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೀದಿ ನಾಯಿ ಮೇಲೆ ಕಾರು ಹರಿಸಿದ ದುರುಳ; ಒದ್ದಾಡಿ ಪ್ರಾಣ ಬಿಟ್ಟ ನಾಯಿ

ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಜಿಗಿದ ಆನ್‌ಲೈನ್ ಫುಡ್ ಡೆಲಿವರಿ ಏಜೆಂಟ್ ಗಾಯಗೊಂಡಿದ್ದಾರೆ. ಫುಡ್ ನೀಡಲು ಅಲ್ಲಿಗೆ ತೆರಳಿದ್ದ ವೇಳೆ ಜರ್ಮನ್ ಶೆಫರ್ಡ್ ನಾಯಿಯೊಂದು ಅವರ ಮೇಲೆ ದಾಳಿ ನಡೆಸಿದೆ. ಸ್ವಿಗ್ಗಿ ಡೆಲಿವರಿ ಏಜೆಂಟ್ 25 ವರ್ಷದ ರಿಜ್ವಾನ್ ಕಳೆದ 3 ವರ್ಷಗಳಿಂದ ಸ್ವಿಗ್ಗಿಯೊಂದಿಗೆ ಕೆಲಸ ಮಾಡುತ್ತಿದ್ದರು.

ಫ್ಲಾಟ್ ಮಾಲೀಕರ ನಿರ್ಲಕ್ಷ್ಯದ ವಿರುದ್ಧ ರಿಜ್ವಾನ್​ನ ಸಹೋದರ ಗುರುವಾರ ರಾತ್ರಿ ಬಂಜಾರಾ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!