ಹೈದರಾಬಾದ್: ಫುಡ್ ಡೆಲಿವರಿಗೆ (Food Delivery) ಹೋದಾಗ ನಾಯಿಗೆ ಹೆದರಿ ಸ್ವಿಗ್ಗಿ ಡೆಲಿವರಿ ಬಾಯ್ (Swiggy Delivery Agent) 3ನೇ ಮಹಡಿಯಿಂದ ಜಿಗಿದ ಘಟನೆ ನಡೆದಿದೆ. ಆ ಯುವಕನ ಸ್ಥಿತಿ ಗಂಭೀರವಾಗಿದೆ. ಸ್ವಿಗ್ಗಿ ಡೆಲಿವರಿ ಬಾಯ್ ಮನೆಯ ಕಾಲಿಂಗ್ ಬೆಲ್ ಒತ್ತಿದಾಗ ಮನೆಯೊಳಗಿದ್ದ ನಾಯಿ ಜೋರಾಗಿ ಬೊಗಳುತ್ತಾ ಹೊರಗೆ ಬಂದಿತು. ಆಗ ಹೆದರಿದ ಡೆಲಿವರಿ ಬಾಯ್ ಕೆಳಗೆ ಹಾರಿ ಬಿದ್ದಿದ್ದಾರೆ.
ನಾಯಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಆ ಯುವಕ ಮೂರನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ. ಮೇಲಿನಿಂದ ಬಿದ್ದಿದ್ದರಿಂದ ಅವರಿಗೆ ಗಂಭೀರ ಗಾಯಗಳಾಗಿವೆ. ಆತ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬೀದಿ ನಾಯಿ ಮೇಲೆ ಕಾರು ಹರಿಸಿದ ದುರುಳ; ಒದ್ದಾಡಿ ಪ್ರಾಣ ಬಿಟ್ಟ ನಾಯಿ
ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಜಿಗಿದ ಆನ್‌ಲೈನ್ ಫುಡ್ ಡೆಲಿವರಿ ಏಜೆಂಟ್ ಗಾಯಗೊಂಡಿದ್ದಾರೆ. ಫುಡ್ ನೀಡಲು ಅಲ್ಲಿಗೆ ತೆರಳಿದ್ದ ವೇಳೆ ಜರ್ಮನ್ ಶೆಫರ್ಡ್ ನಾಯಿಯೊಂದು ಅವರ ಮೇಲೆ ದಾಳಿ ನಡೆಸಿದೆ. ಸ್ವಿಗ್ಗಿ ಡೆಲಿವರಿ ಏಜೆಂಟ್ 25 ವರ್ಷದ ರಿಜ್ವಾನ್ ಕಳೆದ 3 ವರ್ಷಗಳಿಂದ ಸ್ವಿಗ್ಗಿಯೊಂದಿಗೆ ಕೆಲಸ ಮಾಡುತ್ತಿದ್ದರು.
ಫ್ಲಾಟ್ ಮಾಲೀಕರ ನಿರ್ಲಕ್ಷ್ಯದ ವಿರುದ್ಧ ರಿಜ್ವಾನ್ನ ಸಹೋದರ ಗುರುವಾರ ರಾತ್ರಿ ಬಂಜಾರಾ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.