ನನ್ನ ಕಥೆ ಬಿಡಿ, ಬದುಕಿ ಬಾಳಬೇಕಿರುವವರಿಗೆ ಲಸಿಕೆ ಕೊಡಿ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಸೇರಿ ಸಾಕಷ್ಟು ರಾಷ್ಟ್ರೀಯ ನಾಯಕರು ಕೊರೊನಾ ಲಸಿಕೆ ಪಡೆದಿದ್ದಾರೆ. ಈ ಮಧ್ಯೆ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

ನನ್ನ ಕಥೆ ಬಿಡಿ, ಬದುಕಿ ಬಾಳಬೇಕಿರುವವರಿಗೆ ಲಸಿಕೆ ಕೊಡಿ: ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 01, 2021 | 9:58 PM

ಮೊದಲ ಹಂತದಲ್ಲಿ 1.30 ಕೋಟಿ ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇಂದಿನಿಂದ (ಮಾರ್ಚ್ 1) 2ನೇ ಹಂತದ ಲಸಿಕೆ ಅಭಿಯಾನ ಶುರುವಾಗಿದ್ದು, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿದೆ. 45 ವರ್ಷ ಮೇಲ್ಪಟ್ಟವರೂ ಸಹ ಇತರ ರೋಗಗಳಿಂದ ಬಳಲುತ್ತಿದ್ದರೆ ಲಸಿಕೆ ಪಡೆಯಬಹುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಸೇರಿ ಸಾಕಷ್ಟು ರಾಷ್ಟ್ರೀಯ ನಾಯಕರು ಕೊರೊನಾ ಲಸಿಕೆ ಪಡೆದಿದ್ದಾರೆ. ಈ ಮಧ್ಯೆ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

ಎರಡನೇ ಹಂತದ ಕೊರೊನಾ ಲಸಿಕೆ ನೀಡುತ್ತಿರುವವರ ಬಗ್ಗೆ ಕೇಳಿದ ಪ್ರಶ್ನೆಗೆ ಖರ್ಗೆ ಉತ್ತರ ನೀಡಿದ್ದಾರೆ. ನನ್ನ ವಯಸ್ಸು 70 ವರ್ಷದಾಟಿದೆ. ನಾನು ಇನ್ನು ಹೆಚ್ಚು ಅಂದರೆ 10-15 ವರ್ಷ ಬದುಕಬಹುದು. ಹೀಗಾಗಿ ಬಾಳಿ ಬದುಕಬೇಕಾದ ಯುವಕರಿಗೆ ಕೊರೊನಾ ಲಸಿಕೆ ನೀಡಿ ಎಂದು ಮನವಿ ಮಾಡಿದ್ದಾರೆ.

ದೇಶದ 10 ಸಾವಿರ ಸರ್ಕಾರಿ ಕೇಂದ್ರಗಳಲ್ಲಿ ಉಚಿತ ಲಸಿಕೆ ನೀಡಲು ನಿರ್ಧರಿಸಿದ್ದು, 20 ಸಾವಿರ ಖಾಸಗಿ ಕೇಂದ್ರಗಳ ಮೂಲಕವೂ ಲಸಿಕೆ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಖಾಸಗಿ ವೈದ್ಯಕೀಯ ಕೇಂದ್ರಗಳಲ್ಲಿ ಲಸಿಕೆಗೆ 250 ರೂಪಾಯಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ.

ರಾಜಕೀಯ ನಾಯಕರಿಗೆ ಲಸಿಕೆ: ಪ್ರಧಾನಿ ನರೇಂದ್ರ ಮೋದಿ ಅವರು ಕೊವಿಡ್​​-19 ಲಸಿಕೆ ಪಡೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್​ ಶಾ ಕೂಡ ಇಂದು ಕೊರೊನಾ ಲಸಿಕೆ ಪಡೆದಿದ್ದಾರೆ. ಏಮ್ಸ್​ ಆಸ್ಪತ್ರೆಯಲ್ಲಿ ಮೋದಿ ಲಸಿಕೆ ಪಡೆದುಕೊಂಡರೆ, ಮೇದಾಂತಾ ಆಸ್ಪತ್ರೆಯ ವೈದ್ಯರು ಅಮಿತ್​ ಶಾಗೆ ಕೊರೊನಾ ಔಷಧ ಕೊಟ್ಟಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಪಡೆದ ಕೊವಿಡ್​ ವ್ಯಾಕ್ಸಿನ್ ಯಾವುದು? ಲಸಿಕೆ ಪಡೆದ ಬಳಿಕ ಪುದುಚೇರಿ, ಕೇರಳದ ನರ್ಸ್​ಗಳಿಗೆ ಹೇಳಿದ್ದೇನು?

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು