ನಾನು ಹಿಂದೂ, ಹಾಗಾಗಿ ದೇವಸ್ಥಾನಗಳಿಗೆ  ಭೇಟಿ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್

Arvind Kejriwal ನೀವು ದೇವಸ್ಥಾನಕ್ಕೆ ಹೋಗುತ್ತೀರಾ? ನಾನು ಕೂಡ ದೇವಸ್ಥಾನಕ್ಕೆ ಹೋಗುತ್ತೇನೆ. ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ, ನೀವು ಅದನ್ನು ಭೇಟಿ ಮಾಡಿದಾಗ ನಿಮಗೆ ಶಾಂತಿ ಸಿಗುತ್ತದೆ.

ನಾನು ಹಿಂದೂ, ಹಾಗಾಗಿ ದೇವಸ್ಥಾನಗಳಿಗೆ  ಭೇಟಿ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 07, 2021 | 8:02 PM

ಪಣಜಿ: ನಾನು ಹಿಂದೂ ಎಂಬ ಕಾರಣಕ್ಕೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಇದಕ್ಕೆ ಯಾರೂ ಆಕ್ಷೇಪ ವ್ಯಕ್ತಪಡಿಸಬಾರದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ. ಎರಡು ದಿನಗಳ ಭೇಟಿಗಾಗಿ ಇಲ್ಲಿಗೆ ಆಗಮಿಸಿದ ಆಮ್ ಆದ್ಮಿ ಪಕ್ಷದ (Aam Aadmi Party) ರಾಷ್ಟ್ರೀಯ ಸಂಚಾಲಕರಾದ ಕೇಜ್ರಿವಾಲ್ ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ “ಮೃದು ಹಿಂದುತ್ವ” ದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ. “ನೀವು ದೇವಸ್ಥಾನಕ್ಕೆ ಹೋಗುತ್ತೀರಾ? ನಾನು ಕೂಡ ದೇವಸ್ಥಾನಕ್ಕೆ ಹೋಗುತ್ತೇನೆ. ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ, ನೀವು ಅದನ್ನು ಭೇಟಿ ಮಾಡಿದಾಗ ನಿಮಗೆ ಶಾಂತಿ ಸಿಗುತ್ತದೆ. ಅವರ (ಮೃದು ಹಿಂದುತ್ವದ ಆರೋಪ ಮಾಡುವವರು) ಆಕ್ಷೇಪಣೆ ಏನು? ಏಕೆ ವಿರೋಧ ವ್ಯಕ್ತಪಡಿಸಬೇಕು? ನಾನು ಹಿಂದೂ ಎಂಬ ಕಾರಣಕ್ಕೆ ನಾನು ದೇವಸ್ಥಾನಕ್ಕೆ ಹೋಗುತ್ತಿದ್ದೇನೆ, ನನ್ನ ಪತ್ನಿ ಗೌರಿಶಂಕರ ದೇವಸ್ಥಾನಕ್ಕೆ ಭೇಟಿ ನೀಡುತ್ತಾಳೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ತೀರ್ಥಯಾತ್ರೆಗಳನ್ನು ಪ್ರಾಯೋಜಿಸುವಂತಹ ಕರಾವಳಿ ರಾಜ್ಯದ ಯೋಜನೆಗಳನ್ನು ಎಎಪಿ ನಕಲು ಮಾಡುತ್ತಿದೆ ಎಂಬ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಸಾವಂತ್ ಅವರು ನಿಜವಾಗಿಯೂ ತಮ್ಮ ಪಕ್ಷವನ್ನು ನಕಲಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. | “ಪ್ರಮೋದ್ ಸಾವಂತ್ ನಮ್ಮನ್ನು ನಕಲು ಮಾಡುತ್ತಿದ್ದಾರೆ ಎಂದು ನಾನು ಹೇಳಬಯಸುತ್ತೇನೆ, ನಾವು ವಿದ್ಯುತ್ ಉಚಿತ ನೀಡುತ್ತೇವೆ ಎಂದು ನಾನು ಹೇಳಿದಾಗ ಅವರು ನೀರು ಉಚಿತವಾಗಿ ನೀಡಿದರು, ನಾವು ಉದ್ಯೋಗ ಭತ್ಯೆ ನೀಡುತ್ತೇವೆ ಎಂದು ಹೇಳಿದಾಗ ಅವರು ಸುಮಾರು 10,000 ಉದ್ಯೋಗಗಳನ್ನು ಘೋಷಿಸಿದರು. ನಾನು ತೀರ್ಥಯಾತ್ರೆಗಳ ಬಗ್ಗೆ ಮಾತನಾಡುವಾಗ ಅವರು ತಮ್ಮ ಯೋಜನೆ ಘೋಷಣೆ ಮಾಡಿದರು ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿ ಮುಖ್ಯಮಂತ್ರಿಗಳು ತಮ್ಮ ಭೇಟಿಯ ಸಮಯದಲ್ಲಿ, ಭಂಡಾರಿ ಸಮುದಾಯದ ಸದಸ್ಯರನ್ನು ಭೇಟಿ ಮಾಡಿದರು.ಅದೇ ವೇಳೆ ಕಾರ್ಮಿಕ ಸಂಘಟನೆಯ ಮತ್ತು ಗಣಿ ಉದ್ಯಮಿ ನಾಯಕ ಪುತಿ ಗಾಂವ್ಕರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರು.

ಇದನ್ನೂ ಓದಿ: ಕೊವಿಡ್ ಲಸಿಕೆ ವಿತರಣೆ, ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ನಿರ್ಧಾರವನ್ನು ಶ್ಲಾಘಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ