AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಭಾರತದ ಸೊಸೆ, ಇಲ್ಲೇ ಇರುತ್ತೇನೆ; ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಮನವಿ

ಕಾಶ್ಮೀರದ ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ಭಾರತ ಸ್ಥಗಿತಗೊಳಿಸಿದೆ. ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಭಾರತದ ಯುವಕನನ್ನು ಮದುವೆಯಾಗಿದ್ದರು. ಆದರೆ, ಅವರನ್ನು ಕೂಡ ಗಡೀಪಾರು ಮಾಡಲಾಗುತ್ತದೆಯೇ? ಎಂಬ ಪ್ರಶ್ನೆ ಉದ್ಭವವಾಗಿದೆ. ಸೀಮಾ ಹೈದರ್ 2023ರಲ್ಲಿ ತನ್ನ ಭಾರತೀಯ ಪ್ರೇಮಿ ಸಚಿನ್ ಎಂಬುವವರನ್ನು ಮದುವೆಯಾಗಲು ಪಾಕಿಸ್ತಾನವನ್ನು ತೊರೆದು ಬಂದಿದ್ದರು. ಆ ವೇಳೆ ಅವರು ಬಹಳ ಸುದ್ದಿಯಾಗಿದ್ದರು.

ನಾನು ಭಾರತದ ಸೊಸೆ, ಇಲ್ಲೇ ಇರುತ್ತೇನೆ; ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಮನವಿ
Seema Haider
ಸುಷ್ಮಾ ಚಕ್ರೆ
|

Updated on: Apr 26, 2025 | 4:55 PM

Share

ನವದೆಹಲಿ, ಏಪ್ರಿಲ್ 26: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Terror Attack) ನಂತರ, ಭಾರತ ಸರ್ಕಾರವು ಹಲವಾರು ರಾಜತಾಂತ್ರಿಕ ಮತ್ತು ಭದ್ರತಾ ಕ್ರಮಗಳನ್ನು ತೆಗೆದುಕೊಂಡಿತು. ಆ ಪ್ರಮುಖ ನಿರ್ಧಾರಗಳಲ್ಲಿ ಒಂದೆಂದರೆ ತಕ್ಷಣದಿಂದ ಜಾರಿಗೆ ಬರುವಂತೆ ಪಾಕಿಸ್ತಾನಿಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸುವುದು. ವಿದೇಶಾಂಗ ಸಚಿವಾಲಯ ಗುರುವಾರ ಪಾಕಿಸ್ತಾನಿಗಳಿಗೆ ನೀಡಲಾದ ಎಲ್ಲಾ ಅಸ್ತಿತ್ವದಲ್ಲಿರುವ ವೀಸಾಗಳನ್ನು ರದ್ದುಗೊಳಿಸಿದೆ. ಪಾಕಿಸ್ತಾನದಲ್ಲಿರುವ ಭಾರತೀಯ ಪ್ರಜೆಗಳು ಬೇಗನೆ ಮರಳುವಂತೆ ಸಚಿವಾಲಯ ಸೂಚಿಸಿದೆ.

ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಹುಲ್ಲುಗಾವಲಿನಲ್ಲಿ 26 ಜನರ ಜೀವವನ್ನು ಬಲಿ ಪಡೆದ ಭಯೋತ್ಪಾದಕ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ಬೆಳವಣಿಗೆಗಳ ನಡುವೆ, ಭಾರತೀಯನನ್ನು ಮದುವೆಯಾಗಿರುವ ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ಭಾರತವನ್ನು ತೊರೆಯಬೇಕೇ? ಎಂಬ ಚರ್ಚೆ ನಡೆದಿದೆ. ಪಾಕಿಸ್ತಾನದ ಸಿಂಧ್‌ನ 27 ವರ್ಷದ ಮಹಿಳೆ ಸೀಮಾ ಹೈದರ್ ತನ್ನ ಅಸಾಮಾನ್ಯ ಪ್ರೇಮಕಥೆಯಿಂದಾಗಿ ಸುದ್ದಿಯಾಗಿದ್ದರು. ಕೊವಿಡ್-19 ಸಮಯದಲ್ಲಿ, ಅವರು ಆನ್‌ಲೈನ್ ಗೇಮ್ PUBG ಮೂಲಕ ಭಾರತದ 22 ವರ್ಷದ ಅಂಗಡಿ ಸಹಾಯಕ ಸಚಿನ್ ಮೀನಾ ಅವರೊಂದಿಗೆ ಸಂಪರ್ಕ ಬೆಳೆಸಿದ್ದರು. ಆರಂಭಿಕ ಭೇಟಿಗಳ ನಂತರ, ಸೀಮಾ ಮೇ 2023ರಲ್ಲಿ ದುಬೈ ಮತ್ತು ನೇಪಾಳದ ಮೂಲಕ ತನ್ನ ಮೊದಲ ಮದುವೆಯಿಂದ 4 ಮಕ್ಕಳೊಂದಿಗೆ ಭಾರತವನ್ನು ಅಕ್ರಮವಾಗಿ ಪ್ರವೇಶಿಸಿದ್ದರು. ಅವರು ಈಗ ಸಚಿನ್ ಅವರೊಂದಿಗೆ ಗ್ರೇಟರ್ ನೋಯ್ಡಾದಲ್ಲಿ ನೆಲೆಸಿದ್ದಾರೆ. ಈ ದಂಪತಿಗೆ ಈ ವರ್ಷ ಮಗಳು ಕೂಡ ಹುಟ್ಟಿದ್ದಾಳೆ.

ಇದನ್ನೂ ಓದಿ: ಸ್ನಾನಕ್ಕೂ ಭಾರತದಿಂದ ನೀರು ಕೇಳಬೇಕು; ತಮಗೆ ತಾವೇ ಟ್ರೋಲ್ ಮಾಡಿಕೊಂಡ ಪಾಕಿಸ್ತಾನೀಯರು!

ಇದನ್ನೂ ಓದಿ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
Image
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಸೀಮಾ ಮತ್ತು ಸಚಿನ್ ಇಬ್ಬರನ್ನೂ ಜುಲೈ 2023ರಲ್ಲಿ ಬಂಧಿಸಲಾಗಿತ್ತು. ಸೀಮಾ ಅವರನ್ನು ಅಕ್ರಮ ಭಾರತ ಪ್ರವೇಶಕ್ಕಾಗಿ ಮತ್ತು ಸಚಿನ್ ಅವರನ್ನು ಅಕ್ರಮ ವಲಸಿಗರಿಗೆ ಆಶ್ರಯ ನೀಡಿದ್ದಕ್ಕಾಗಿ ಬಂಧಿಸಲಾಗಿತ್ತು. ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಸೀಮಾ ಅವರ ಪ್ರಕರಣವು ಆಕೆ ಭಾರತವನ್ನು ಹೇಗೆ ಪ್ರವೇಶಿಸಿದರು ಎಂಬುದರಿಂದ ಮತ್ತಷ್ಟು ಜಟಿಲವಾಗಿದೆ. ಮಾನ್ಯ ವೀಸಾಗಳೊಂದಿಗೆ ಬಂದ ಇತರ ಪಾಕಿಸ್ತಾನಿ ಪ್ರಜೆಗಳಿಗಿಂತ ಭಿನ್ನವಾಗಿ, ಸೀಮಾ ನೇಪಾಳದಿಂದ ಅಕ್ರಮವಾಗಿ ಗಡಿ ದಾಟುವ ಮೂಲಕ ಅಧಿಕೃತ ವಲಸೆ ಮಾರ್ಗಗಳನ್ನು ಬೈಪಾಸ್ ಮಾಡಿದ್ದರು. ಆಕೆ ಇನ್ನೂ ಭಾರತೀಯ ಪೌರತ್ವವನ್ನು ಪಡೆದಿಲ್ಲ. ನ್ಯಾಯಾಂಗವು ಇನ್ನೂ ಅವರ ಕಾನೂನು ಸ್ಥಿತಿಯನ್ನು ಪರಿಶೀಲಿಸುತ್ತಿದೆ. ಹೀಗಾಗಿ, ಪಾಕಿಸ್ತಾನದ ವಿರುದ್ಧ ಭಾರತ ತೆಗೆದುಕೊಂಡ ನಿರ್ಧಾರಗಳು ಸೀಮಾಗೆ ಅನ್ವಯವಾಗುತ್ತದೆಯೇ? ಎಂಬ ಚರ್ಚೆಗಳು ನಡೆದಿವೆ.

ಇದನ್ನೂ ಓದಿ: ಪಹಲ್ಗಾಮ್ ದಾಳಿಯ ತಟಸ್ಥ ತನಿಖೆಗೆ ಸಿದ್ಧ; ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಭರವಸೆ

ಆದರೆ, ಈ ಬಗ್ಗೆ ಸೀಮಾ ಹೈದರ್ ಪ್ರತಿಕ್ರಿಯಿಸಿದ್ದು, ನಾನೀಗ ಭಾರತದ ಸೊಸೆಯಾಗಿದ್ದೇನೆ. ನಾನು ಪಾಕಿಸ್ತಾನಕ್ಕೆ ಹೋಗುವುದಿಲ್ಲ, ಭಾರತದಲ್ಲೇ ಇರುತ್ತೇನೆ ಎಂದಿದ್ದಾರೆ. “ನಾನು ಪಾಕಿಸ್ತಾನದ ಮಗಳಾಗಿದ್ದೆ, ಆದರೆ ಈಗ ನಾನು ಭಾರತದ ಸೊಸೆ” ಎಂದು ಸೀಮಾ ಹೈದರ್ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ನಂತರ ಅವರು ತಮ್ಮನ್ನು ಕೂಡ ಗಡೀಪಾರು ಮಾಡುವ ಭಯದಲ್ಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ