AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂ.ಬಿ.ಪಾಟೀಲ್, ಶಿವಶಂಕರಪ್ಪ ಜತೆ ನಾನು ಮಾತಾಡುತ್ತೇನೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನದಲ್ಲಿ ಬಿ.ಎಸ್​ ಯಡಿಯೂರಪ್ಪ ಮುಂದುವರೆಯಲು ಎಂ.ಬಿ.ಪಾಟೀಲ್ ಮತ್ತು ಶಿವಶಂಕರಪ್ಪ ಬೆಂಬಲ ಸೂಚಿಸಿರುವ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಹಾಗೂ ಶಿವಶಂಕರಪ್ಪ ಜತೆ ಈ ಸಂಬಂಧ ನಾನು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಎಂ.ಬಿ.ಪಾಟೀಲ್, ಶಿವಶಂಕರಪ್ಪ ಜತೆ ನಾನು ಮಾತಾಡುತ್ತೇನೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಸಿದ್ದರಾಮಯ್ಯ
TV9 Web
| Edited By: |

Updated on: Jul 21, 2021 | 11:00 AM

Share

ದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(CM BS Yediyurappa) ಪರ ರಾಜ್ಯದ ವಿವಿಧ ಮಠಾಧೀಶರು, ರಾಜಕೀಯ ನಾಯಕರು ಬ್ಯಾಟಿಂಗ್ ಮುಂದುವರೆಸಿದ್ದಾರೆ. ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ತೆರವುಗೊಳಿಸುತ್ತಾರೆ ಎಂಬ ಮಾತು ಬಲಗೊಳ್ಳೊತ್ತಿದ್ದಂತೆಯೇ ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬಂದಿದೆ. ಸದ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಬಿ.ಎಸ್​ ಯಡಿಯೂರಪ್ಪ ಮುಂದುವರೆಯಲು ಎಂ.ಬಿ.ಪಾಟೀಲ್ ಮತ್ತು ಶಿವಶಂಕರಪ್ಪ ಬೆಂಬಲ ಸೂಚಿಸಿರುವ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಹಾಗೂ ಶಿವಶಂಕರಪ್ಪ ಜತೆ ಈ ಸಂಬಂಧ ನಾನು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಮೌನಕ್ಕೆ ಶರಣಾದ ಸುತ್ತೂರು ಮಠದ ಶ್ರೀಗಳು ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ​​ ಬದಲಾವಣೆ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಬಹುತೇಕ ಎಲ್ಲಾ ಮಠಾಧೀಶರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಅವರ ಪರವಾಗಿ ಮಾತನಾಡುತ್ತಿದ್ದಾರೆ. ಆದರೆ ಸುತ್ತೂರು ಮಠದ ಶ್ರೀಗಳು ಮಾತ್ರ ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರೀಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.

ಕೆಲ ದಿನಗಳಿಂದ ಶಕ್ತಿ ಕೇಂದ್ರವಾಗಿದ್ದ ಸುತ್ತೂರು ಮಠಕ್ಕೆ ಸಚಿವರು, ಶಾಸಕರು, ಬಂಡಾಯ ನಾಯಕರು ಭೇಟಿ ನೀಡಿದ್ದರು. ಸಿ.ಪಿ.ಯೋಗೇಶ್ವರ್, ಅರವಿಂದ ಬೆಲ್ಲದ್, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಆರ್​.ಅಶೋಕ್ ಸೇರಿದಂತೆ ಹಲವು ಬಿಜೆಪಿ‌ ನಾಯಕರು ಕೂಡ ಭೇಟಿ ನೀಡಿದ್ದರು. ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಯಾವುದೇ ಅಭಿಪ್ರಾಯ ನೀಡದ ಸುತ್ತೂರು ಶ್ರೀಗಳ ಈ ಮೌನ ರಾಜ್ಯದಲ್ಲಿ ಕುತೂಹಲ ಉಂಟುಮಾಡಿದೆ.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್​ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯವಿಲ್ಲ; ದೆಹಲಿಯಲ್ಲಿ ಸಿದ್ದರಾಮಯ್ಯ ಹೇಳಿಕೆ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಉದ್ದೇಶಿಸಿದ್ದ ಬಿಜೆಪಿ ಶಾಸಕಾಂಗ ಸಭೆ ದಿಢೀರ್ ರದ್ದು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್