ದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(CM BS Yediyurappa) ಪರ ರಾಜ್ಯದ ವಿವಿಧ ಮಠಾಧೀಶರು, ರಾಜಕೀಯ ನಾಯಕರು ಬ್ಯಾಟಿಂಗ್ ಮುಂದುವರೆಸಿದ್ದಾರೆ. ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ತೆರವುಗೊಳಿಸುತ್ತಾರೆ ಎಂಬ ಮಾತು ಬಲಗೊಳ್ಳೊತ್ತಿದ್ದಂತೆಯೇ ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬಂದಿದೆ. ಸದ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಬಿ.ಎಸ್ ಯಡಿಯೂರಪ್ಪ ಮುಂದುವರೆಯಲು ಎಂ.ಬಿ.ಪಾಟೀಲ್ ಮತ್ತು ಶಿವಶಂಕರಪ್ಪ ಬೆಂಬಲ ಸೂಚಿಸಿರುವ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಹಾಗೂ ಶಿವಶಂಕರಪ್ಪ ಜತೆ ಈ ಸಂಬಂಧ ನಾನು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.
ಮೌನಕ್ಕೆ ಶರಣಾದ ಸುತ್ತೂರು ಮಠದ ಶ್ರೀಗಳು
ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಬಹುತೇಕ ಎಲ್ಲಾ ಮಠಾಧೀಶರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರವಾಗಿ ಮಾತನಾಡುತ್ತಿದ್ದಾರೆ. ಆದರೆ ಸುತ್ತೂರು ಮಠದ ಶ್ರೀಗಳು ಮಾತ್ರ ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರೀಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.
ಕೆಲ ದಿನಗಳಿಂದ ಶಕ್ತಿ ಕೇಂದ್ರವಾಗಿದ್ದ ಸುತ್ತೂರು ಮಠಕ್ಕೆ ಸಚಿವರು, ಶಾಸಕರು, ಬಂಡಾಯ ನಾಯಕರು ಭೇಟಿ ನೀಡಿದ್ದರು. ಸಿ.ಪಿ.ಯೋಗೇಶ್ವರ್, ಅರವಿಂದ ಬೆಲ್ಲದ್, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಆರ್.ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರು ಕೂಡ ಭೇಟಿ ನೀಡಿದ್ದರು. ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಯಾವುದೇ ಅಭಿಪ್ರಾಯ ನೀಡದ ಸುತ್ತೂರು ಶ್ರೀಗಳ ಈ ಮೌನ ರಾಜ್ಯದಲ್ಲಿ ಕುತೂಹಲ ಉಂಟುಮಾಡಿದೆ.
ಇದನ್ನೂ ಓದಿ:
ಕರ್ನಾಟಕ ಕಾಂಗ್ರೆಸ್ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯವಿಲ್ಲ; ದೆಹಲಿಯಲ್ಲಿ ಸಿದ್ದರಾಮಯ್ಯ ಹೇಳಿಕೆ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಉದ್ದೇಶಿಸಿದ್ದ ಬಿಜೆಪಿ ಶಾಸಕಾಂಗ ಸಭೆ ದಿಢೀರ್ ರದ್ದು