ಆನ್​ಲೈನ್​ ಸುದ್ದಿ ವೆಬ್​ಸೈಟ್​ಗಳಿಗೆ ಅಂಕುಶ; ನೋಂದಣಿ ಇನ್ನು ಕಡ್ಡಾಯ

ದೆಹಲಿ: ಮಹತ್ವದ ಆದೇಶವೊಂದನ್ನು ಹೊರಡಿಸಿರುವ ಮಾಹಿತಿ ಮತ್ತು ಪ್ರಸಾರಾಂಗ ಸಚಿವಾಲಯವು ಆನ್ಲೈನ್ ಸುದ್ದಿ ವೆಬ್ಸೈಟ್ ಗಳನ್ನು ಅಂಕುಶದಲ್ಲಿಡುವ ಆದೇಶ ಹೊರಡಿಸಿದೆ. ಈ ಮೂಲಕ ಡಿಜಿಟಲ್ ಪತ್ರಿಕೋದ್ಯಮಕ್ಕೆ ಅಧಿಕೃತ ಮಾನ್ಯತೆ ನೀಡಿದೆ. ಇದುವರೆಗೆ ನ್ಯೂಸ್ ಪೋರ್ಟಲ್ ಗಳನ್ನು ಯಾರು ಬೇಕಾದರೂ ತೆರೆಯಬಹುದಾದ ಅವಕಾಶವಿತ್ತು. ನೋಂದಣಿ ಮಾಡಿಸಿಕೊಳ್ಳದೆ ಸುದ್ದಿಗಳನ್ನು ಹರಿಯಬಿಡಲು ಅವಕಾಶ ಹೇರಳವಾಗಿತ್ತು. ಇದರಿಂದ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಿದ್ದವು. ಚುನಾವಣೆಗಳ ಸಮಯದಲ್ಲಂತೂ ತಮ್ಮ ಪರವಾಗಿ ಒಲವು ಗಿಟ್ಟಿಸಿಕೊಳ್ಳಲು ಅಭ್ಯರ್ಥಿಗಳೇ ಸುದ್ದಿ ವೆಬ್ಸೈಟ್ ಗಳನ್ನು ಸೃಷ್ಟಿಸುತ್ತಿದ್ದರು. ಆದರೆ ಇನ್ಮುಂದೆ ಸುದ್ದಿ ಜಾಲತಾಣಗಳು […]

ಆನ್​ಲೈನ್​ ಸುದ್ದಿ ವೆಬ್​ಸೈಟ್​ಗಳಿಗೆ ಅಂಕುಶ; ನೋಂದಣಿ ಇನ್ನು ಕಡ್ಡಾಯ
Follow us
ಸಾಧು ಶ್ರೀನಾಥ್​
|

Updated on: Nov 11, 2020 | 1:44 PM

ದೆಹಲಿ: ಮಹತ್ವದ ಆದೇಶವೊಂದನ್ನು ಹೊರಡಿಸಿರುವ ಮಾಹಿತಿ ಮತ್ತು ಪ್ರಸಾರಾಂಗ ಸಚಿವಾಲಯವು ಆನ್ಲೈನ್ ಸುದ್ದಿ ವೆಬ್ಸೈಟ್ ಗಳನ್ನು ಅಂಕುಶದಲ್ಲಿಡುವ ಆದೇಶ ಹೊರಡಿಸಿದೆ. ಈ ಮೂಲಕ ಡಿಜಿಟಲ್ ಪತ್ರಿಕೋದ್ಯಮಕ್ಕೆ ಅಧಿಕೃತ ಮಾನ್ಯತೆ ನೀಡಿದೆ.

ಇದುವರೆಗೆ ನ್ಯೂಸ್ ಪೋರ್ಟಲ್ ಗಳನ್ನು ಯಾರು ಬೇಕಾದರೂ ತೆರೆಯಬಹುದಾದ ಅವಕಾಶವಿತ್ತು. ನೋಂದಣಿ ಮಾಡಿಸಿಕೊಳ್ಳದೆ ಸುದ್ದಿಗಳನ್ನು ಹರಿಯಬಿಡಲು ಅವಕಾಶ ಹೇರಳವಾಗಿತ್ತು. ಇದರಿಂದ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಿದ್ದವು. ಚುನಾವಣೆಗಳ ಸಮಯದಲ್ಲಂತೂ ತಮ್ಮ ಪರವಾಗಿ ಒಲವು ಗಿಟ್ಟಿಸಿಕೊಳ್ಳಲು ಅಭ್ಯರ್ಥಿಗಳೇ ಸುದ್ದಿ ವೆಬ್ಸೈಟ್ ಗಳನ್ನು ಸೃಷ್ಟಿಸುತ್ತಿದ್ದರು.

ಆದರೆ ಇನ್ಮುಂದೆ ಸುದ್ದಿ ಜಾಲತಾಣಗಳು ಮಾಹಿತಿ ಮತ್ತು ಪ್ರಸಾರಾಂಗ ಮಂತ್ರಾಲಯದಡಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಲಿದೆ. ಈ ಆದೇಶ ಜಾರಿಯಾದರೆ ಸುಳ್ಳು ಸುದ್ದಿಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಆದೇಶ ಮುನ್ನೆಲೆಗೆ ಬರುತ್ತಿರುವ ಡಿಜಿಟಲ್ ಪತ್ರಿಕೋದ್ಯಮವನ್ನು ಅಧಿಕೃತಗೊಳಿಸಿದ ನಡೆಯಾಗಿದೆ. ಅಲ್ಲದೆ ಸುಳ್ಳು ಸುದ್ದಿ ತಡೆಗಟ್ಟಲು ನೆರವಾಗಲಿದೆ. ನೋಂದಾಯಿತ ಸುದ್ದಿತಾಣ ಸುಳ್ಳು ಸುದ್ದಿ ಪ್ರಕಟಿಸಿದರೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್