Rahul Gandhi: ನಾನು ಲಂಡನ್​​ನಲ್ಲಿ ಭಾರತದ ವಿರುದ್ಧ ಏನನ್ನೂ ಹೇಳಿಲ್ಲ: ರಾಹುಲ್ ಗಾಂಧಿ

|

Updated on: Mar 16, 2023 | 1:53 PM

ನಾನು ಲಂಡನ್ ಸೆಮಿನಾರ್‌ನಲ್ಲಿ ಭಾರತದ ವಿರುದ್ಧ ಏನನ್ನೂ ಮಾತನಾಡಲಿಲ್ಲ. ಅವರು ಅವಕಾಶ ನೀಡಿದರೆ ನಾನು ಸಂಸತ್ತಿನ ಒಳಗೆ ಮಾತನಾಡುತ್ತೇನೆ ಎಂದು ವಯನಾಡ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

Rahul Gandhi: ನಾನು ಲಂಡನ್​​ನಲ್ಲಿ ಭಾರತದ ವಿರುದ್ಧ ಏನನ್ನೂ ಹೇಳಿಲ್ಲ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us on

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ(Rahul Gandhi) ಗುರುವಾರ ಸಂಸತ್​​ಗೆ (Parliament) ಆಗಮಿಸಿದ್ದಾರೆ.ಯುನೈಟೆಡ್ ಕಿಂಗ್‌ಡಂನಲ್ಲಿ ನೀಡಿದ ಹೇಳಿಕೆಗಳಿಗೆ ರಾಹುಲ್ ಕ್ಷಮೆಯಾಚಿಸಬೇಕೆಂದು ಬಿಜೆಪಿ (BJP) ಸಂಸದರು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್, ನಾನು ಲಂಡನ್ ಸೆಮಿನಾರ್‌ನಲ್ಲಿ ಭಾರತದ ವಿರುದ್ಧ ಏನನ್ನೂ ಮಾತನಾಡಲಿಲ್ಲ. ಅವರು ಅವಕಾಶ ನೀಡಿದರೆ ನಾನು ಸಂಸತ್ತಿನ ಒಳಗೆ ಮಾತನಾಡುತ್ತೇನೆ ಎಂದಿದ್ದಾರೆ. ರಾಹುಲ್ ಗಾಂಧಿಯವರ ವಿಷಯದಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಭಾರಿ ಘರ್ಷಣೆಗೆ ಸಂಸತ್ತು ಸಾಕ್ಷಿಯಾಗಿದೆ. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ ಕುರಿತು ಜಂಟಿ ಸಂಸದೀಯ ಸಮಿತಿ (JPC) ತನಿಖೆಗೆ ಒತ್ತಾಯಿಸುತ್ತಿವೆ. ಅದೇ ವೇಳೆ ವಿದೇಶಿ ನೆಲದಲ್ಲಿ ಭಾರತವನ್ನು ಅವಮಾನಿಸಿರುವ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ರಾಹುಲ್ ಗಾಂಧಿ ಏನು ಹೇಳುತ್ತಾರೋ ಅದೇ ಭಾಷೆಯನ್ನು ದೇಶ ಮತ್ತು ಹೊರಗಿನ ಭಾರತ ವಿರೋಧಿಗಳು ಬಳಸುತ್ತಾರೆ” ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಕರ್ನಾಟಕದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ,ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಟೀಕಿಸಿದ್ದು ಲಂಡನ್‌ನ ನೆಲದಿಂದ ಭಾರತದ ಪ್ರಜಾಪ್ರಭುತ್ವದ ಮೇಲೆ ಪ್ರಶ್ನೆಗಳು ಎದ್ದಿರುವುದು ದುರದೃಷ್ಟಕರ. ಭಾರತದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಶಕ್ತಿ ಇಲ್ಲ. ಆದರೆ ಅದರ ಹೊರತಾಗಿಯೂ, ಭಾರತೀಯ ಪ್ರಜಾಪ್ರಭುತ್ವದ ಮೇಲೆ ಆಕ್ರಮಣ ಮಾಡಲು ಕೆಲವರು ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ಮಾರ್ಚ್ 25 ರಂದು ಸಿಬಿಐ ಮುಂದೆ ಹಾಜರಾಗುವಂತೆ ತೇಜಸ್ವಿ ಯಾದವ್​​ಗೆ ದೆಹಲಿ ಹೈಕೋರ್ಟ್ ಸೂಚನೆ

ಬಿಜೆಪಿಯ ಒತ್ತಡದ ನಡುವೆಯೂ ಕಾಂಗ್ರೆಸ್ ಪಟ್ಟುಬಿಡುವ ಮನಸ್ಥಿತಿಯಲ್ಲಿಲ್ಲ, ರಾಹುಲ್ ಗಾಂಧಿ ಕ್ಷಮೆ ಕೇಳುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ದಾನಿ ವಿಚಾರದಲ್ಲಿ ಜೆಪಿಸಿ ತನಿಖೆಯ ನಮ್ಮ ಬೇಡಿಕೆಯನ್ನು ನಿರ್ಲಕ್ಷಿಸಿ ಸಂಸತ್ತಿಗೆ ಅವಕಾಶ ನೀಡದಿರುವುದು ಅವರ ಪಿತೂರಿ. ಅವರು ನಿರುದ್ಯೋಗ ಮತ್ತು ಹಣದುಬ್ಬರದ ಸಮಸ್ಯೆಗಳನ್ನು ಚರ್ಚಿಸಲು ಬಯಸುವುದಿಲ್ಲ. ಈ ಹಿಂದೆ ಹಲವಾರು ಸಂದರ್ಭಗಳಲ್ಲಿ ಮೋದಿ ಜಿ ವಿದೇಶಗಳಲ್ಲಿ ಭಾರತದ ವಿರುದ್ಧ ಮಾತನಾಡಿದ್ದರು. ರಾಹುಲ್ ಗಾಂಧಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:27 pm, Thu, 16 March 23