AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಂಸತ್ ಭವನದ ಮೊದಲ ಫೋಟೊದಲ್ಲಿದ್ದು ಚುನಾಯಿತ ಸದಸ್ಯರಲ್ಲ, ಕೇಸರಿ ಬಟ್ಟೆ ತೊಟ್ಟವರು: ಶರದ್ ಪವಾರ್

ಹೊಸ ಸಂಸತ್ ಭವನದ ಅಗತ್ಯವೇನಿತ್ತು? ಎಂದು ನನಗೆ ಅರ್ಥವಾಗಲಿಲ್ಲ.ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸಿ ನಿರ್ಧಾರ ತೆಗೆದುಕೊಳ್ಳಬಹುದಿತ್ತು. ಆದರೆ ಹೊಸ ಕಟ್ಟಡದ ಬಗ್ಗೆ ಪತ್ರಿಕೆಗಳ ಮೂಲಕ ತಿಳಿದುಕೊಂಡೆ ಎಂದು ಎನ್​​ಸಿಪಿ ನಾಯಕ ಹೇಳಿದ್ದಾರೆ.

ನೂತನ ಸಂಸತ್ ಭವನದ ಮೊದಲ ಫೋಟೊದಲ್ಲಿದ್ದು ಚುನಾಯಿತ ಸದಸ್ಯರಲ್ಲ, ಕೇಸರಿ ಬಟ್ಟೆ ತೊಟ್ಟವರು: ಶರದ್ ಪವಾರ್
ಶರದ್ ಪವಾರ್
Follow us
ರಶ್ಮಿ ಕಲ್ಲಕಟ್ಟ
|

Updated on:Jun 07, 2023 | 1:05 PM

ಔರಂಗಾಬಾದ್: ಸಂಸತ್ತಿಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಸಂವಾದದ ಪ್ರಾಮುಖ್ಯತೆಯನ್ನು ಒತ್ತಿಹೇಳಿರುವ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಅಧ್ಯಕ್ಷ ಶರದ್ ಪವಾರ್ (Sharad Pawar) ಹೊಸ ಸಂಸತ್ ಭವನದ(New Parliament Building) ಬಗ್ಗೆ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆಯ ಮೂಲಕ ನಿರ್ಧಾರ ತೆಗೆದುಕೊಳ್ಳಬಹುದಿತ್ತು ಎಂದು ಹೇಳಿದ್ದಾರೆ.ಮಂಗಳವಾರ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿರುವ ಮಹಾತ್ಮಾ ಗಾಂಧಿ ಮಿಷನ್ ವಿಶ್ವವಿದ್ಯಾಲಯದಲ್ಲಿ ನಡೆದ ಸೌಹಾರ್ದ ಬೈಠಕ್​​ನಲ್ಲಿ ಮಾತನಾಡುತ್ತಿದ್ದರವರು. ಸಂಸತ್ತಿನ ಚಟುವಟಿಕೆಗಳ ಬಗ್ಗೆ ಸಂವಾದ ಏರ್ಪಡಿಸುತ್ತಿಲ್ಲ. ಈ ಹಿಂದೆಯೂ ರಾಜಕೀಯ ಪಕ್ಷಗಳಲ್ಲಿ ಭಿನ್ನಾಭಿಪ್ರಾಯಗಳಿತ್ತು. ಇದನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡಲಾಗುತ್ತಿತ್ತು.

ಹೊಸ ಸಂಸತ್ ಭವನದ ಅಗತ್ಯವೇನಿತ್ತು? ಎಂದು ನನಗೆ ಅರ್ಥವಾಗಲಿಲ್ಲ.ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸಿ ನಿರ್ಧಾರ ತೆಗೆದುಕೊಳ್ಳಬಹುದಿತ್ತು. ಆದರೆ ಹೊಸ ಕಟ್ಟಡದ ಬಗ್ಗೆ ಪತ್ರಿಕೆಗಳ ಮೂಲಕ ತಿಳಿದುಕೊಂಡೆ ಎಂದು ಎನ್​​ಸಿಪಿ ನಾಯಕ ಹೇಳಿದ್ದಾರೆ.

ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಿಂದ ಸುಮಾರು 20 ಪ್ರತಿಪಕ್ಷಗಳು ದೂರ ಉಳಿದಿವೆ. ಪ್ರಧಾನಿಯವರು ಉದ್ಘಾಟನೆಯನ್ನು “ಪಟ್ಟಾಭಿಷೇಕ” ಎಂದು ಪರಿಗಣಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಸರ್ಕಾರದ ಪ್ರಮುಖ ವ್ಯಕ್ತಿಗಳು ನಿಯಮಿತವಾಗಿ ಸಂಸತ್ತಿನ ಅಧಿವೇಶನಗಳಿಗೆ ಹಾಜರಾಗುವುದಿಲ್ಲ. ಸರ್ಕಾರದ ಮುಖ್ಯಸ್ಥರು ಒಂದು ದಿನ ಸಂಸತ್ತಿಗೆ ಬಂದರೆ ಅದು ವಿಶೇಷವಾಗಿರುತ್ತದೆ. ಸಂಸತ್ ಎಲ್ಲಕ್ಕಿಂತ ಹೆಚ್ಚು, ಅದಕ್ಕೆ ಪ್ರಾಮುಖ್ಯತೆ ನೀಡದಿದ್ದರೆ, ಜನರ ಗ್ರಹಿಕೆ  ಮೇಲೆಯೂ ಇದು ಪರಿಣಾಮ ಬೀರುತ್ತದೆ ಎಂದು ಯಾರ ಹೆಸರನ್ನೂ ಉಲ್ಲೇಖಿಸದೆ ಪವಾರ್ ಹೇಳಿದ್ದಾರೆ.

ಸಂಸತ್ ನಲ್ಲಿ ನಾನು “ಸಣ್ಣ” ರಾಜಕೀಯ ಪಕ್ಷದ ನಾಯಕ ಎಂದ ಪವಾರ್ ನಾವು (ವಿರೋಧ ಪಕ್ಷ) ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಗಳನ್ನು ಆಹ್ವಾನಿಸಲು ಒತ್ತಾಯಿಸಿದ್ದೇವೆ, ಅದನ್ನು ಬಿಜೆಪಿ ವಿರೋಧಿಸುವ ಅಗತ್ಯವಿಲ್ಲ. ಸಂಸತ್ತಿನ ಮೊದಲ ಅಧಿವೇಶನದ ನಂತರ ಕ್ಲಿಕ್ ಮಾಡಿದ ಫೋಟೋದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಮತ್ತು ಪಂಡಿತ್ ಜವಾಹರಲಾಲ್ ನೆಹರು ಸೇರಿದಂತೆ ದೇಶದ ಅನೇಕ ನಾಯಕರು ಇದ್ದರು ಎಂದು ಪವಾರ್ ಹೇಳಿದರು.

ಇದನ್ನೂ ಓದಿ: Narendra Modi: ಯುಎಸ್ ಕಾಂಗ್ರೆಸ್​​​ ಸಭೆಯಲ್ಲಿ ಎರಡನೇ ಬಾರಿಗೆ ಮಾತನಾಡಲಿರುವ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆ ಪಡೆದ ಮೋದಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬದಿಗಿಟ್ಟಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದವು. ಮುರ್ಮು ಅವರು ದೇಶದ ಸಾಂವಿಧಾನಿಕ ಮುಖ್ಯಸ್ಥರಾಗಿರುವುದರಿಂದ ಸಂಸತ್ ಭವನವನ್ನು ಅವರು ಉದ್ಘಾಟಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದವು.

ಏತನ್ಮಧ್ಯೆ, ಚುನಾಯಿತ ನಾಯಕರಿಗೆ ಮೊದಲು ಹೊಸ ಕಟ್ಟಡಕ್ಕೆ ಪ್ರವೇಶಿಸುವ ಅವಕಾಶ ಸಿಗಲಿಲ್ಲ ಎಂದು ಆರೋಪಿಸಿದ ಪವಾರ್, ಹೊಸ ಸಂಸತ್ ಭವನದ ಮೊದಲ ಫೋಟೋ ಪ್ರಕಟವಾಗಿದ್ದು ಚುನಾಯಿತ ಸದಸ್ಯರೊಂದಿಗೆ ಅಲ್ಲ, ಕೇಸರಿ ಬಟ್ಟೆ ತೊಟ್ಟಿರುವವರ ಜೊತೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Wed, 7 June 23

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ