ಕರ್ನಾಟಕದಲ್ಲಿ ಕಳೆದ ಒಂದೆರಡು ತಿಂಗಳಿಂದಲೂ ಚಾಲ್ತಿಯಲ್ಲಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಅಂತಿಮ ತೀರ್ಪು ನೀಡಿದೆ. ಹಿಜಾಬ್ ಧರಿಸಬೇಕು ಎನ್ನುವುದು ಇಸ್ಲಾಂನ ಅತ್ಯಗತ್ಯ ಭಾಗವಲ್ಲ. ಹೀಗಾಗಿ ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಹೋಗುವಂತಿಲ್ಲ. ಸರ್ಕಾರ ಕಡ್ಡಾಯ ಮಾಡಿರುವ ವಸ್ತ್ರ ಸಂಹಿತೆಯನ್ನೇ ಪಾಲನೆ ಮಾಡಬೇಕು ಎಂದು ಹೇಳಿದೆ. ಅದರ ಬೆನ್ನಲ್ಲೇ ಮುಸ್ಲಿಂ ಮುಖಂಡರು ಈ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬರೀ ರಾಜ್ಯದವರಷ್ಟೇ ಅಲ್ಲ, ಬೇರೆ ರಾಜ್ಯಗಳ ಮುಸ್ಲಿಂ ಪ್ರಮುಖರೂ ಕೂಡ ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲಿ AIMIM ಮುಖ್ಯಸ್ಥ, ಹೈದರಾಬಾದ್ ಎಂಪಿ ಅಸಾದುದ್ದೀನ್ ಓವೈಸಿ ಕೂಡ ಒಬ್ಬರು.
ಎರಡು ವಿಚಾರಗಳನ್ನು ಟ್ವೀಟ್ ಮಾಡಿರುವ ಓವೈಸಿ, ಹಿಜಾಬ್ ಕುರಿತಾಗಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ನಾನು ಸಂಪೂರ್ಣವಾಗಿ ವಿರೋಧಿಸುತ್ತೇನೆ. ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದವರು, ಮುಂದೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತಾರೆ ಎಂಬ ಆಶಯ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಮತ್ತು ಇತರ ಮುಸ್ಲಿಂ ಧಾರ್ಮಿಕ ಸಂಘಟನೆಗಳೂ ಕೂಡ ಹೈಕೋರ್ಟ್ನ ಈ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಬೇಕು ಎಂದೂ ಕರೆ ಕೊಟ್ಟಿದ್ದಾರೆ. ಅಸಾದುದ್ದೀನ್ ಓವೈಸಿ ಕೂಡ ಈ ಮೊದಲೂ ಕರ್ನಾಟಕ ಹಿಜಾಬ್ ವಿವಾದದ ಬಗ್ಗೆ ಮಾತನಾಡಿದ್ದರು. ಅಷ್ಟೇ ಅಲ್ಲ, ಮುಂದೊಂದು ದಿನ ಹಿಜಾಬ್ ಧರಿಸುವ ಹುಡುಗಿಯೇ ದೇಶದ ಪ್ರಧಾನಮಂತ್ರಿಯಾಗುತ್ತಾಳೆ ಎಂದೂ ಹೇಳಿದ್ದರು.
1. I disagree with Karnataka High Court’s judgement on #hijab. It’s my right to disagree with the judgement & I hope that petitioners appeal before SC
2. I also hope that not only @AIMPLB_Official but also organisations of other religious groups appeal this judgement…
— Asaduddin Owaisi (@asadowaisi) March 15, 2022
ಕರ್ನಾಟಕ ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಕೋರ್ಟ್ ನೀಡಿರುವ ತೀರ್ಪಿಗೆ ಪ್ರತಿಕ್ರಿಯೆ ನೀಡಿದ ಸುನ್ನಿ ಧರ್ಮಗುರು ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಲಿ, ನಾವು ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ. ಆದರೆ ಇಸ್ಲಾಂನಲ್ಲಿ ಹಿಜಾಬ್ ಅತ್ಯಗತ್ಯ ಭಾಗವಲ್ಲ ಎಂದು ಹೇಳಿರುವ ಅಂಶವನ್ನು ಒಪ್ಪುವುದಿಲ್ಲ ಎಂದಿದ್ದಾರೆ. ಇಸ್ಲಾಮಿಕ್ ಸೆಮಿನರಿ ದಾರುಲ್ ಊಲುಮ್ ದೇವಬಂದ್ನ ವಕ್ತಾರ, ಮೌಲಾನಾ ಸೂಫಿಯಾನ್ ನಿಜಾಮಿ ಕೂಡ ಇದೇ ಅಭಿಪ್ರಾಯ ಹೊರಹಾಕಿದ್ದಾರೆ.
ಇದನ್ನೂ ಓದಿ: ಹೈಕೋರ್ಟ್ ಸ್ಪಷ್ಟ ತೀರ್ಪು ಹೊರತಾಗಿಯೂ ಪರೀಕ್ಷೆ ಬಹಿಷ್ಕರಿಸಿ ಕಾಲೇಜಿನಿಂದ ಹೊರನಡೆದ 35 ವಿದ್ಯಾರ್ಥಿನಿಯರು!
Published On - 1:41 pm, Tue, 15 March 22