ನನ್ನನ್ನು ಅವಮಾನಿಸಿ, ಆದರೆ ನನ್ನ ಹುದ್ದೆ, ಸಮುದಾಯದ ಮೇಲಿನ ದಾಳಿಯನ್ನು ಸಹಿಸುವುದಿಲ್ಲ: ಜಗದೀಪ್ ಧನ್ಖರ್

ನೀವು ನನ್ನನ್ನು ಎಷ್ಟು ಅವಮಾನಿಸುತ್ತೀರಿ ಎಂಬುದರ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ಆದರೆ ನಾನು ಭಾರತದ ಉಪರಾಷ್ಟ್ರಪತಿ, ರೈತ ಸಮುದಾಯ, ನನ್ನ ಸಮುದಾಯದ ಅವಮಾನ ಸಹಿಸಲಾರೆ... ನನ್ನ ಹುದ್ದೆಯ ಘನತೆಯನ್ನು ಕಾಪಾಡಲು ಸಾಧ್ಯವಾಗಲಿಲ್ಲ ಎಂಬುದನ್ನು ನಾನು ಸಹಿಸುವುದಿಲ್ಲ, ಈ ಸದನದ ಘನತೆಯನ್ನು ಕಾಪಾಡುವುದು ನನ್ನ ಕರ್ತವ್ಯ ಎಂದು ರಾಜ್ಯಸಭೆಯ ಸಭಾಪತಿ ಜಗದೀಪ್ ಧನ್ಖರ್ ಹೇಳಿದ್ದಾರೆ.

ನನ್ನನ್ನು ಅವಮಾನಿಸಿ, ಆದರೆ ನನ್ನ ಹುದ್ದೆ, ಸಮುದಾಯದ ಮೇಲಿನ ದಾಳಿಯನ್ನು ಸಹಿಸುವುದಿಲ್ಲ: ಜಗದೀಪ್ ಧನ್ಖರ್
ಜಗದೀಪ್ ಧನ್ಖರ್
Follow us
ರಶ್ಮಿ ಕಲ್ಲಕಟ್ಟ
|

Updated on: Dec 20, 2023 | 3:12 PM

ದೆಹಲಿ ಡಿಸೆಂಬರ್ 20: ಟಿಎಂಸಿ (TMC) ಸಂಸದ ಕಲ್ಯಾಣ್ ಬ್ಯಾನರ್ಜಿ (Kalyan Banerjee) ತನ್ನನ್ನು ಅಣಕ ಮಾಡಿದ ಬಗ್ಗೆ ರಾಜ್ಯಸಭೆಯ ಸಭಾಪತಿ ಜಗದೀಪ್ ಧನ್ಖರ್ (Jagdeep Dhankhar) ಅವರು ಬುಧವಾರ ಪ್ರತಿಕ್ರಿಯಿಸಿದ್ದು ನನ್ನನು ಅವಮಾನಿಸಿದರೂ ಪರವಾಗಿಲ್ಲ ಆದರೆ ನನ್ನ ಹುದ್ದೆ, ಅವರ ಸಮುದಾಯದ ಮೇಲೆ ದಾಳಿ ಸಹಿಸುವುದಿಲ್ಲ ಎಂದಿದ್ದಾರೆ. ನೀವು ಜಗದೀಪ್ ಧನ್ಖರ್ ಅವರನ್ನು ಎಷ್ಟು ಅವಮಾನಿಸುತ್ತೀರಿ ಎಂಬುದರ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ಆದರೆ ನಾನು ಭಾರತದ ಉಪರಾಷ್ಟ್ರಪತಿ, ರೈತ ಸಮುದಾಯ, ನನ್ನ ಸಮುದಾಯದ ಅವಮಾನ ಸಹಿಸಲಾರೆ… ನನ್ನ ಹುದ್ದೆಯ ಘನತೆಯನ್ನು ಕಾಪಾಡಲು ಸಾಧ್ಯವಾಗಲಿಲ್ಲ ಎಂಬುದನ್ನು ನಾನು ಸಹಿಸುವುದಿಲ್ಲ, ಈ ಸದನದ ಘನತೆಯನ್ನು ಕಾಪಾಡುವುದು ನನ್ನ ಕರ್ತವ್ಯ ಎಂದಿದ್ದಾರೆ.

ಅಮಾನತುಗೊಂಡ ಸಂಸದರ ಪ್ರತಿಭಟನೆಯಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ, ಸಭಾಪತಿ ಧನ್ಖರ್ ಅವರನ್ನು ಅನುಕರಿಸಿದ್ದು ವಿವಾದವಾಗಿದೆ. ಬ್ಯಾನರ್ಜಿ ಅವರು ರಾಜ್ಯಸಭೆಯ ಸಭಾಪತಿಯ ವರ್ತನೆಯನ್ನು ಅನುಕರಿಸಿದ್ದಾರೆ ಎಂದು ಹೇಳಲಾದ ವಿಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿವೆ. ಸದನದ ಅಣಕು ಸಿಟ್ಟಿಂಗ್ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮೊಬೈಲ್ ಫೋನ್‌ನಲ್ಲಿ ಬ್ಯಾನರ್ಜಿ ಅವರ ಅಣಕವನ್ನು ರೆಕಾರ್ಡ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಖರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು ಅಗೌರವದ ವರ್ತನೆಯನ್ನು ಖಂಡಿಸಿದ್ದಾರೆ. ಪಿಎಂ ಮೋದಿಯವರ ಫೋನ್ ಕರೆಯನ್ನು ಉಲ್ಲೇಖಿಸಿ, ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಧನ್ಖರ್ , ನಿನ್ನೆ ಪವಿತ್ರ ಸಂಸತ್ತಿನ ಸಂಕೀರ್ಣದಲ್ಲಿ ಕೆಲವು ಗೌರವಾನ್ವಿತ ಸಂಸದರ ವರ್ತನೆ ಬಗ್ಗೆ ಅವರು ತೀವ್ರ ನೋವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಕೆಲವರ ವರ್ತನೆಗಳು ನನ್ನ ಕರ್ತವ್ಯವನ್ನು ನಿರ್ವಹಿಸಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ತತ್ವಗಳನ್ನು ಎತ್ತಿಹಿಡಿಯುವುದನ್ನು ತಡೆಯುವುದಿಲ್ಲ. ನನ್ನ ಹೃದಯದಾಳದಿಂದ ಆ ಮೌಲ್ಯಗಳಿಗೆ ನಾನು ಬದ್ಧನಾಗಿದ್ದೇನೆ. ಯಾವುದೇ ಅವಮಾನಗಳು ನನ್ನ ಹಾದಿಯನ್ನು ಬದಲಾಯಿಸುವುದಿಲ್ಲ ಎಂದು ನಾನು ಪ್ರಧಾನಿಗೆ ಹೇಳಿದೆ ಎಂದಿದ್ದಾರೆ ಧನ್ಖರ್.

ಇದನ್ನೂ ಓದಿಪ್ರತಿಯೊಂದು ವಿಚಾರದಲ್ಲೂ ಜಾತಿ ಎಳೆದು ಜನರನ್ನು ಕೆರಳಿಸಬಾರದು: ಮಲ್ಲಿಕಾರ್ಜುನ ಖರ್ಗೆ

ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರನ್ನು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅಣಕಿಸಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಖಂಡಿಸಿದ್ದಾರೆ. ಸಂಸತ್ ಆವರಣದಲ್ಲೇ ಧನ್ಖರ್ ಅವರನ್ನು ಅವಮಾನ ಮಾಡಲಾಗಿದೆ. ಚುನಾಯಿತ ಪ್ರತಿನಿಧಿಗಳು ತಮ್ಮನ್ನು ತಾವು ವ್ಯಕ್ತಪಡಿಸಲು ಮುಕ್ತವಾಗಿರಬೇಕು, ಆದರೆ ಅವರ ಅಭಿವ್ಯಕ್ತಿ “ಗೌರವ ಮತ್ತು ಸೌಜನ್ಯದ ಮಾನದಂಡಗಳ” ಒಳಗಿರಬೇಕು ಎಂದು ಮುರ್ಮು ಒತ್ತಿ ಹೇಳಿದ್ದಾರೆ.

ನಮ್ಮ ಗೌರವಾನ್ವಿತ ಉಪರಾಷ್ಟ್ರಪತಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ಅವಮಾನಿಸಿದ ರೀತಿಯನ್ನು ನೋಡಿ ನಾನು ದಿಗ್ಭ್ರಮೆಗೊಂಡೆ. ಚುನಾಯಿತ ಪ್ರತಿನಿಧಿಗಳು ತಮ್ಮನ್ನು ತಾವು ವ್ಯಕ್ತಪಡಿಸಲು ಮುಕ್ತವಾಗಿರಬೇಕು, ಆದರೆ ಅವರ ಅಭಿವ್ಯಕ್ತಿ ಘನತೆ ಮತ್ತು ಸೌಜನ್ಯದ ಮಾನದಂಡಗಳೊಳಗೆ ಇರಬೇಕು. ಅದು ನಾವು ಹೆಮ್ಮೆಪಡುವ ಸಂಸದೀಯ ಸಂಪ್ರದಾಯವಾಗಿದೆ. ಭಾರತದ ಜನರು ಅದನ್ನು ಎತ್ತಿಹಿಡಿಯುತ್ತಾರೆ ಎಂದು ನಿರೀಕ್ಷಿಸುತ್ತಾರೆ ”ಎಂದು ಮುರ್ಮು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ