AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಭೋಲ್ಕರ್ ಪ್ರಕರಣದಂತೆ ಸುಶಾಂತ್ ಸಾವು ಪ್ರಕರಣ ಹಳ್ಳ ಹಿಡಿಯಬಾರದು: ಶರದ್ ಪವಾರ್

ಸರ್ವೋಚ್ಛ ನ್ಯಾಯಾಲಯವು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಸಾವಿನ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಒಪ್ಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಈ ತನಿಖೆಯೂ ಡಾ ನರೆಂದ್ರ ದಾಭೋಲ್ಕರ್ ಪ್ರಕರಣದ ತನಿಖೆಯಂತೆ ಹಳ್ಳ ಹಿಡಿಯದಿದ್ದರೆ ಸಾಕು ಎಂದರು. ದಾಭೋಲ್ಕರ್ ಪ್ರಕರಣದ ಬಗ್ಗೆ ಮಾತಾಡಿದ ಪವಾರ್, ಆಗಸ್ಟ 20, 2013 ರಂದು ಮೂಢನಂಬಿಕೆಗಳ ವಿರುದ್ಧ ಸಮರ ಸಾರಿದ್ದ ವಿಚಾರವಾದಿ ದಾಭೋಲ್ಕರ್, ಅಪರಿಚಿತ ಹಂತಕನ ಗುಂಡಿಗೆ ಬಲಿಯಾದ ನಂತರ, ಅ ಪ್ರಕರಣವನ್ನು […]

ದಾಭೋಲ್ಕರ್ ಪ್ರಕರಣದಂತೆ ಸುಶಾಂತ್ ಸಾವು ಪ್ರಕರಣ ಹಳ್ಳ ಹಿಡಿಯಬಾರದು: ಶರದ್ ಪವಾರ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 20, 2020 | 5:58 PM

Share

ಸರ್ವೋಚ್ಛ ನ್ಯಾಯಾಲಯವು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಸಾವಿನ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಒಪ್ಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಈ ತನಿಖೆಯೂ ಡಾ ನರೆಂದ್ರ ದಾಭೋಲ್ಕರ್ ಪ್ರಕರಣದ ತನಿಖೆಯಂತೆ ಹಳ್ಳ ಹಿಡಿಯದಿದ್ದರೆ ಸಾಕು ಎಂದರು.

ದಾಭೋಲ್ಕರ್ ಪ್ರಕರಣದ ಬಗ್ಗೆ ಮಾತಾಡಿದ ಪವಾರ್, ಆಗಸ್ಟ 20, 2013 ರಂದು ಮೂಢನಂಬಿಕೆಗಳ ವಿರುದ್ಧ ಸಮರ ಸಾರಿದ್ದ ವಿಚಾರವಾದಿ ದಾಭೋಲ್ಕರ್, ಅಪರಿಚಿತ ಹಂತಕನ ಗುಂಡಿಗೆ ಬಲಿಯಾದ ನಂತರ, ಅ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಮೇ, 2014ರಲ್ಲಿ ಸಿಬಿಐಗೆ ವರ್ಗಾಯಿಸಿತು. ಆದರೆ ಈ ಕೇಸನ್ನು ತನಿಖಾ ದಳ ಇನ್ನೂ ಇತ್ಯರ್ಥಗೊಳಿಸಿಲ್ಲ. ದಾಭೋಲ್ಕರ್ ಹಂತಕರು ಇತರ ಮೂರು ವಿಚಾರವಾದಿಗಳು– ಕಮ್ಯುನಿಸ್ಟ್ ನಾಯಕ ಗೊವಿಂದ ಪನ್ಸಾರೆ, ಕನ್ನಡ ವಿದ್ವಾಂಸ ಎಮ್ ಎಮ್ ಕಲ್ಬುರ್ಗಿ ಹಾಗೂ ಪತ್ರಕರ್ತೆ ಮತ್ತು ಸಾಮಾಜಿಕ ಹೋರಾಟಗಾತಿ ಗೌರಿ ಲಂಕೇಶ್ ಅವರ ಹತ್ಯೆಗಳಲ್ಲೂ ಭಾಗಿಯಾಗಿರುವ ಶಂಕೆಯಿದೆಯೆಂದು ಪವಾರ್ ಹೇಳಿದರು.

ಗುರುವಾರದಂದು ಸರಣಿ ಟ್ವೀಟ್​ಗಳ ಮೂಲಕ ತಮ್ಮ ಅನಿಸಿಕೆಗಳನ್ನು ಹೇಳಿರುವ ಪವಾರ್, ‘‘2014 ರಲ್ಲಿ ಆರಂಭಿಸಿದ ಡಾ. ನರೇಂದ್ರ ದಾಭೋಲ್ಕರ್ ಪ್ರಕರಣದ ತನಿಖೆಯಂತೆ ಈ ಪ್ರಕರಣದ ತನಿಖೆಯನ್ನು ಸಿಬಿಐ ಮಾಡಲಾರದೆಂಬ ನಿರೀಕ್ಷೆ ನನಗಿದೆ. ದಾಭೋಲ್ಕರ್ ಪ್ರಕರಣದ ತನಿಖೆ ಕಳೆದ ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ,’’ ಎಂದರು.

ದಾಭೋಲ್ಕರ್ ತನಿಖೆ ಅಪೂರ್ಣವಾಗಿದ್ದಾಗ್ಯೂ, ಮಹಾರಾಷ್ಟ್ರ ಸರ್ಕಾರ ಸಿಬಿಐಗೆ ಎಲ್ಲಾ ರೀತಿಯ ಸಹಕಾರ ಒದಗಿಸಿ ಅಪೆಕ್ಸ್ ಕೋರ್ಟಿನ ಆದೇಶವನ್ನು ಪಾಲಿಸುವ ವಿಶ್ವಾಸವನ್ನು ಪವಾರ್ ವ್ಯಕ್ತಪಡಿಸಿದರು.

‘‘ಸುಶಾಂತ್ ಸಿಂಗ್ ರಜಪೂತ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸೂಚಿಸುವ ಸುಪ್ರೀಂಕೋರ್ಟ್ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ಗೌರವಿಸಿ ತನಿಖಾ ದಳಕ್ಕೆ ಸಂಪೂರ್ಣ ಸಹಕಾರ ಒದಗಿಸುತ್ತದೆಂಬ ಭರವಸೆ ನನಗಿದೆ.’’

Follow Us
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್