AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗಾತಿ, ಮಗಳ ಕೊಂದು ಲಿಪ್ಟ್​ ಸ್ಟಿಕ್​​ನಲ್ಲಿ ಗೋಡೆ ಮೇಲೆ ಆರೋಪಿ ಬರೆದಿದ್ದೇನು?

ವ್ಯಕ್ತಿಯೊಬ್ಬ ತನ್ನ ಸಂಗಾತಿ ಹಾಗೂ ಮಗಳ ಕತ್ತು ಹಿಸುಕಿ ಕೊಲೆ(Murder) ಮಾಡಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಇಬ್ಬರನ್ನೂ ಕೊಂದು ರಾತ್ರಿ ಇಡೀ ಶವದ ಪಕ್ಕದಲ್ಲೇ ಆತ ಕುಳಿತುಕೊಂಡಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಲಿಪ್​ಸ್ಟಿಕ್ ಬಳಸಿ ಗೋಡೆಯ ಮೇಲೆ ನಾನು ಅವಳನ್ನು ಕೊಂದೆ ಎಂದು ಬರೆದಿದ್ದ. ಗಂಜ್‌ಬಸೋಡಾದ ವಾರ್ಡ್ ಸಂಖ್ಯೆ 8 ರಲ್ಲಿ ಈ ದುರಂತ ಘಟನೆ ನಡೆದಿದ್ದು, ಸ್ಥಳೀಯ ಸಮುದಾಯವನ್ನು ದಿಗ್ಭ್ರಮೆಗೊಳಿಸಿದೆ.

ಸಂಗಾತಿ, ಮಗಳ ಕೊಂದು ಲಿಪ್ಟ್​ ಸ್ಟಿಕ್​​ನಲ್ಲಿ ಗೋಡೆ ಮೇಲೆ ಆರೋಪಿ ಬರೆದಿದ್ದೇನು?
ಕ್ರೈಂ
ನಯನಾ ರಾಜೀವ್
|

Updated on: Jul 23, 2025 | 3:01 PM

Share

ಮಧ್ಯಪ್ರದೇಶ, ಜುಲೈ 23: ವ್ಯಕ್ತಿಯೊಬ್ಬ ತನ್ನ ಸಂಗಾತಿ ಹಾಗೂ ಮಗಳ ಕತ್ತು ಹಿಸುಕಿ ಕೊಲೆ(Murder) ಮಾಡಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಇಬ್ಬರನ್ನೂ ಕೊಂದು ರಾತ್ರಿ ಇಡೀ ಶವದ ಪಕ್ಕದಲ್ಲೇ ಆತ ಕುಳಿತುಕೊಂಡಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಲಿಪ್​ಸ್ಟಿಕ್ ಬಳಸಿ ಗೋಡೆಯ ಮೇಲೆ ನಾನು ಅವಳನ್ನು ಕೊಂದೆ ಎಂದು ಬರೆದಿದ್ದ.

ಗಂಜ್‌ಬಸೋಡಾದ ವಾರ್ಡ್ ಸಂಖ್ಯೆ 8 ರಲ್ಲಿ ಈ ದುರಂತ ಘಟನೆ ನಡೆದಿದ್ದು, ಸ್ಥಳೀಯ ಸಮುದಾಯವನ್ನು ದಿಗ್ಭ್ರಮೆಗೊಳಿಸಿದೆ.ಆರೋಪಿಯನ್ನು ರಾಜಾ ಅಲಿಯಾಸ್ ಅನುಜ್ ವಿಶ್ವಕರ್ಮ ಎಂದು ಗುರುತಿಸಲಾಗಿದ್ದು, ಕೆಲವು ತಿಂಗಳುಗಳಿಂದ 36 ವರ್ಷದ ರಾಮಸಖಿ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದ. ಅನುಜ್ ಜೊತೆಗೆ ಬರುವ ಮೊದಲು ರಾಮಸಖಿ ತನ್ನ ಪತಿಯಿಂದ ಬೇರ್ಪಟ್ಟಿದ್ದರು.

ಈ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು, ಆದರೆ ಇಷ್ಟೊಂದು ಭಯಾನಕ ರೀತಿಯಲ್ಲಿ ಅವರ ಬದುಕೇ ಕೊನೆಗೊಳ್ಳುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಅನುಜ್ ಅವರ ನೆರೆಹೊರೆಯವರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಪೊಲೀಸರು ಸ್ಥಳಕ್ಕೆ ಬಂದಾಗ, ಗೋಡೆಯ ಮೇಲೆ ನಾನು ಅವಳನ್ನು ಕೊಂದೆ, ಅವಳು ನನಗೆ ಸುಳ್ಳು ಹೇಳಿದ್ದಳು.

ಮತ್ತಷ್ಟು ಓದಿ: ಬಿಕ್ಲು ಶಿವ ಕೊಲೆ ಕೇಸ್: ಹತ್ಯೆಗೆ ಪ್ರಮುಖ ಕಾರಣ ಪತ್ತೆ ಮಾಡಿದ ಪೊಲೀಸರು! ಮತ್ತಷ್ಟು ರೋಚಕ ಅಂಶ ಬಯಲು

ಅವಳಿಗೆ ಬೇರೆ ಸಂಬಂಧವಿತ್ತು ಎಂದು ಬರೆದಿರುವ ಸಂದೇಶ ಕಂಡುಬಂದಿದೆ. ವರದಿಯ ಪ್ರಕಾರ, ಕೊಲೆ ನಡೆದ ಸ್ವಲ್ಪ ಸಮಯದ ನಂತರ ಈ ಸಂದೇಶವನ್ನು ಬರೆಯಲಾಗಿದೆ ಎಂದು ವಿಧಿವಿಜ್ಞಾನ ತಜ್ಞರು ದೃಢಪಡಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಪ್ರಶಾಂತ್ ಚೌಬೆ ಎನ್‌ಡಿಟಿವಿಗೆ ಮಾಹಿತಿ ನೀಡಿದ್ದು, ಮಹಿಳೆ ತನ್ನ ಪತಿಯಿಂದ ಬೇರೆಯಾಗಿ ಅನುಜ್ ಹಾಗೂ ಮಗಳ ಜೊತೆ ವಾಸಿಸುತ್ತಿದ್ದರು ಎಂದು ಹೇಳಿದ್ದಾರೆ.

ನಮ್ಮ ತನಿಖೆಯಲ್ಲಿ ಆಕೆ ಮತ್ತು ಆಕೆಯ ಮಗು ಇಬ್ಬರನ್ನೂ ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್