AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ: ಸಿದ್ದರಾಮಯ್ಯ!

ಈ ಹಿಂದೆ ರಾಮಮಂದಿರ ನಿರ್ಮಾಣಕ್ಕೆ ಹಣ, ಇಟ್ಟಿಗೆ ಸಂಗ್ರಹಿಸಿದ್ದರು. ಸಂಗ್ರಹಿಸಿದ ಇಟ್ಟಿಗೆಗಳನ್ನು ಊರಾಚೆ ಎಸೆದು ಹಣ ತೆಗೆದುಕೊಂಡು ಹೋಗಿದ್ದರು. ಇದೆಲ್ಲ ರಾಮನ ಲೆಕ್ಕ- ಕೃಷ್ಣನ ಲೆಕ್ಕ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಮ ಮಂದಿರ ದೇಣಿಗೆ ಸಂಗ್ರಹ ಅಭಿಯಾನವನ್ನು ಟೀಕಿಸಿದ್ದಾರೆ.

ರಾಮ ಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ: ಸಿದ್ದರಾಮಯ್ಯ!
ಅಯೋಧ್ಯಾ ರಾಮ ಮಂದಿರ ನೀಲಿನಕ್ಷೆ ಮತ್ತು ಸಿದ್ದರಾಮಯ್ಯ
guruganesh bhat
| Edited By: |

Updated on:Feb 17, 2021 | 6:13 PM

Share

ದೆಹಲಿ: ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕೆ ದೇಣಿಗೆ ಕೇಳಲು ನನ್ನ ಬಳಿಯೂ ಬಂದಿದ್ದರು. ಆದರೆ, ವಿವಾದಿತ ಮಂದಿರಕ್ಕೆ ದೇಣಿಗೆ ಕೊಡಲ್ಲ ಎಂದು ಹೇಳಿ ಕಳಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಯೋಧ್ಯಾ ರಾಮ ಮಂದಿರ ನಿರ್ಮಾಣದ ದೇಣಿಗೆ ಅಭಿಯಾನದ ಕುರಿತು ಹೇಳಿಕೆ ನೀಡಿದ್ದಾರೆ. ಹಿಂದ-ಅಹಿಂದ ವಿವಾದದ ಕುರಿತು ವರಿಷ್ಠರ ಮನವೊಲಿಕೆಗಾಗಿ ದೆಹಲಿ ಭೇಟಿಯಲ್ಲಿರುವ ಅವರು, ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಕ್ಕೆ ಬಂದಾಗ ದೇಣಿಗೆ ನೀಡುವುದಿಲ್ಲ ಎಂದು ಹೇಳಿ ಕಳಿಸಿದ್ದಾಗಿ ಹೇಳಿದ್ದಾರೆ.

‘ಬೇರೆ ಕಡೆ ಕಟ್ಟಿದರೇ ದೇಣಿಗೆ ಕೊಡುತ್ತಿದ್ದೆ’ ಮಂದಿರವನ್ನು ಬೇರೆ ಕಡೆ ಕಟ್ಟಿದರೇ ದೇಣಿಗೆ ಕೊಡುತ್ತಿದ್ದೆ ಎಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಮ ಮಂದಿರಕ್ಕೆ ಸಂಗ್ರಹವಾಗ್ತಿರುವ ಹಣಕ್ಕೆ ಲೆಕ್ಕ ಕೊಡ್ತಾರಾ? ಎಂದು ಪ್ರಶ್ನಿಸಿದ್ದಾರೆ. ಈ ಹಿಂದೆ ರಾಮಮಂದಿರ ನಿರ್ಮಾಣಕ್ಕೆ ಹಣ, ಇಟ್ಟಿಗೆ ಸಂಗ್ರಹಿಸಿದ್ದರು. ಸಂಗ್ರಹಿಸಿದ ಇಟ್ಟಿಗೆಗಳನ್ನು ಊರಾಚೆ ಎಸೆದು ಹಣ ತೆಗೆದುಕೊಂಡು ಹೋಗಿದ್ದರು. ಇದೆಲ್ಲ ರಾಮನ ಲೆಕ್ಕ- ಕೃಷ್ಣನ ಲೆಕ್ಕ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಮ ಮಂದಿರ ದೇಣಿಗೆ ಸಂಗ್ರಹ ಅಭಿಯಾನವನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಬಗೆಹರಿದ ಅಯೋಧ್ಯೆ ಭೂ ವಿವಾದ: ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಸಮ್ಮತಿ

ಎಚ್ ಡಿ ಕುಮಾರಸ್ವಾಮಿ ಮನೆಗೆ ಮಾರ್ಕ್ ಮಾಡಿರಬೇಕು’ ‘ರಾಮ ಮಂದಿರಕ್ಕೆ ದೇಣಿಗೆ ನೀಡದ ಮನೆ ಮಾರ್ಕ್ ಮಾಡ್ತಿದ್ದಾರೆ’ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಅವರ ಮನೆಗೆ ಮಾರ್ಕ್ ಮಾಡಿರಬೇಕು. ಹೀಗಾಗಿಯೇ ಅವರು ರಾಮ ಮಂದಿರಕ್ಕೆ ದೇಣಿಗೆ ನೀಡದ ಮನೆ ಮಾರ್ಕ್ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ ಎಂದು ವ್ಯಂಗ್ಯ ಆಡಿದರು.

ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರಮೋದ್ ಮುತಾಲಿಕ್ ತಿರುಗೇಟು ಮತ್ತೊಂದು ಕಡೆ, ರಾಮ ಮಂದಿರಕ್ಕೆ ದೇಣಿಗೆ ನೀಡದ ಮನೆ ಮಾರ್ಕ್ ಮಾಡುತ್ತಿದ್ದಾರೆ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರಮೋದ್ ಮುತಾಲಿಕ್ ತಿರುಗೇಟು ನೀಡಿದ್ದಾರೆ. ಆರ್​ಎಸ್​ಎಸ್ ಮೇಲೆ ಎಚ್.​ಡಿ.ಕುಮಾರಸ್ವಾಮಿ ಬಹಳ ದೊಡ್ಡ ಆಪಾದನೆ ಮಾಡಿದ್ದಾರೆ. ತಮ್ಮ ಹೇಳಿಕೆ ವಾಪಸ್ ಪಡೆಯಬೇಕೆಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ.

ಆರ್​ಎಸ್​ಎಸ್ ಯಾರನ್ನೂ ದ್ವೇಷಿಸುವ ಕೆಲಸ ಮಾಡಲ್ಲ. ಆದರೆ ಆರ್​ಎಸ್​ಎಸ್ ಬಗ್ಗೆ ದೊಡ್ಡ ಆಪಾದನೆ ಮಾಡಿದ್ದಾರೆ. ಹೀಗಾಗಿ ಕ್ಷಮೆ ಕೇಳಬೇಕೆಂದು ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Adolf Hitler | ಹಿಟ್ಲರ್​ನ ನಾಜಿ ಪಡೆಯಂತೆಯೇ RSS ಕ್ರೂರವಾಗಿ ವರ್ತಿಸುತ್ತಿದೆ – ಎಚ್ ಡಿ ಕುಮಾರಸ್ವಾಮಿ

ಇದನ್ನೂ ಓದಿ: Ayodhya Ram Mandir | ರಾಮಮಂದಿರ ನಿರ್ಮಾಣಕ್ಕೆ.. ಸಿದ್ದರಾಮಯ್ಯ ಸಹೋದರನಿಂದ ದೇಣಿಗೆ

Published On - 4:00 pm, Tue, 16 February 21

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್