ನವಜೋತ್ ಸಿಂಗ್ ಸಿಧು ಸ್ಥಿರ ವ್ಯಕ್ತಿ ಅಲ್ಲ ಎಂದು ನಾನು ಮೊದಲೇ ಹೇಳಿದ್ದೆ: ಕ್ಯಾಪ್ಟನ್ ಅಮರಿಂದರ್ ಸಿಂಗ್

Amarinder Singh: ಅಮರಿಂದರ್ ಸಿಂಗ್ ಪ್ರಸ್ತುತ ದೆಹಲಿಯಲ್ಲಿದ್ದಾರೆ. ಅವರ ಭೇಟಿಯು "ವೈಯಕ್ತಿಕ". "ಊಹಾಪೋಹಗಳ ಅಗತ್ಯವಿಲ್ಲ", ಮಾಜಿ ಪಂಜಾಬ್ ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಇಂದು ಟ್ವೀಟ್ ಮಾಡಿದ್ದಾರೆ.

ನವಜೋತ್ ಸಿಂಗ್ ಸಿಧು ಸ್ಥಿರ ವ್ಯಕ್ತಿ ಅಲ್ಲ ಎಂದು ನಾನು ಮೊದಲೇ  ಹೇಳಿದ್ದೆ: ಕ್ಯಾಪ್ಟನ್ ಅಮರಿಂದರ್ ಸಿಂಗ್
ಅಮರಿಂದರ್ ಸಿಂಗ್​
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 28, 2021 | 4:32 PM

ದೆಹಲಿ: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ಕೆಲವೇ ಕ್ಷಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪಕ್ಷದ “ನಾನು ನಿಮಗೆ ಮೊದಲೇ ಹೇಳಿದ್ದೆ. ಅವರು ಸ್ಥಿರ ವ್ಯಕ್ತಿ ಅಲ್ಲ ಮತ್ತು ಗಡಿ ರಾಜ್ಯ ಪಂಜಾಬ್​​ಗೆ ಸರಿಹೊಂದುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. 

ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ (PPCC) ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು (Navjot Singh Sidhu) ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ, ಸಿಧು ಅಧ್ಯಕ್ಷ ಸ್ಥಾನಕ್ಕೆ  ರಾಜೀನಾಮೆ ನೀಡಿದರೂ  ಪಕ್ಷದಲ್ಲಿ ಮುಂದುವರಿಯುವುದಾಗಿ ಹೇಳಿದ್ದಾರೆ.

“ಮನುಷ್ಯನ ಸ್ವಭಾವದ ಕುಸಿತವು ರಾಜಿ ಮೂಲೆಯಿಂದ ಹುಟ್ಟಿಕೊಂಡಿದೆ. ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ಕಾಂಗ್ರೆಸ್ ಸೇವೆ ಮುಂದುವರಿಸುತ್ತೇನೆ ಎಂದು ನವಜೋತ್ ಸಿಧು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಪಕ್ಷದಲ್ಲಿ ಅವಮಾನವಾಗಿದೆ ಎಂದು ಹೇಳಿ ಉಲ್ಲೇಖಿಸಿ ಈ ತಿಂಗಳ ಆರಂಭದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದರು.

ಅಮರಿಂದರ್ ಸಿಂಗ್ ಪ್ರಸ್ತುತ ದೆಹಲಿಯಲ್ಲಿದ್ದಾರೆ. ಅವರ ಭೇಟಿಯು “ವೈಯಕ್ತಿಕ”. “ಊಹಾಪೋಹಗಳ ಅಗತ್ಯವಿಲ್ಲ”, ಮಾಜಿ ಪಂಜಾಬ್ ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಇಂದು ಟ್ವೀಟ್ ಮಾಡಿದ್ದಾರೆ.

ಅಮರಿಂದರ್ ಸಿಂಗ್  ದೆಹಲಿ ಭೇಟಿ ಬಗ್ಗೆ ಹಲವಾರು ಊಹಾಪೋಹಗಳು  ಕೇಳಿ ಬಂದಿವೆ. ಅವರು ವೈಯಕ್ತಿಕ ಭೇಟಿಯಲ್ಲಿದ್ದಾರೆ, ಈ ಸಮಯದಲ್ಲಿ ಅವರು ಕೆಲವು ಸ್ನೇಹಿತರನ್ನು ಭೇಟಿ ಮಾಡುತ್ತಾರೆ ಮತ್ತು ಹೊಸ ಸಿಎಂಗಾಗಿ ಕಪುರ್ತಲಾ ಮನೆಯನ್ನು ಖಾಲಿ ಮಾಡುತ್ತಾರೆ. ಯಾವುದೇ ಅನಗತ್ಯ ಊಹಾಪೋಹಗಳ ಅಗತ್ಯವಿಲ್ಲ ಎಂದು ರವೀನ್ ತುಕ್ರಾಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:  Navjot Singh Sidhu ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

ಇದನ್ನೂ ಓದಿ:ಬಿಜೆಪಿ ಸೇರ್ತಾರಾ ಪಂಜಾಬ್ ಮಾಜಿ ಸಿಎಂ ಅಮರೀಂದರ್ ಸಿಂಗ್?; ಇಂದು ಅಮಿತ್ ಶಾ, ಜೆ.ಪಿ. ನಡ್ಡಾ ಭೇಟಿ ಸಾಧ್ಯತೆ  

(I told you so he is not a stable man and not fit for the border state of Punjab Amarinder Singh on Navjot Singh Sidhu resignation)

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್