ದೆಹಲಿ: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ಕೆಲವೇ ಕ್ಷಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪಕ್ಷದ “ನಾನು ನಿಮಗೆ ಮೊದಲೇ ಹೇಳಿದ್ದೆ. ಅವರು ಸ್ಥಿರ ವ್ಯಕ್ತಿ ಅಲ್ಲ ಮತ್ತು ಗಡಿ ರಾಜ್ಯ ಪಂಜಾಬ್ಗೆ ಸರಿಹೊಂದುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
I told you so…he is not a stable man and not fit for the border state of punjab.
— Capt.Amarinder Singh (@capt_amarinder) September 28, 2021
ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ (PPCC) ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು (Navjot Singh Sidhu) ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ, ಸಿಧು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಪಕ್ಷದಲ್ಲಿ ಮುಂದುವರಿಯುವುದಾಗಿ ಹೇಳಿದ್ದಾರೆ.
“ಮನುಷ್ಯನ ಸ್ವಭಾವದ ಕುಸಿತವು ರಾಜಿ ಮೂಲೆಯಿಂದ ಹುಟ್ಟಿಕೊಂಡಿದೆ. ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ಕಾಂಗ್ರೆಸ್ ಸೇವೆ ಮುಂದುವರಿಸುತ್ತೇನೆ ಎಂದು ನವಜೋತ್ ಸಿಧು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಪಕ್ಷದಲ್ಲಿ ಅವಮಾನವಾಗಿದೆ ಎಂದು ಹೇಳಿ ಉಲ್ಲೇಖಿಸಿ ಈ ತಿಂಗಳ ಆರಂಭದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದರು.
Too much being read into @capt_amarinder’s visit to Delhi. He’s on a personal visit, during which he’ll meet some friends and also vacate Kapurthala house for the new CM. No need for any unnecessary speculation. pic.twitter.com/CFVCrvBQ0i
— Raveen Thukral (@RT_Media_Capt) September 28, 2021
ಅಮರಿಂದರ್ ಸಿಂಗ್ ಪ್ರಸ್ತುತ ದೆಹಲಿಯಲ್ಲಿದ್ದಾರೆ. ಅವರ ಭೇಟಿಯು “ವೈಯಕ್ತಿಕ”. “ಊಹಾಪೋಹಗಳ ಅಗತ್ಯವಿಲ್ಲ”, ಮಾಜಿ ಪಂಜಾಬ್ ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಇಂದು ಟ್ವೀಟ್ ಮಾಡಿದ್ದಾರೆ.
ಅಮರಿಂದರ್ ಸಿಂಗ್ ದೆಹಲಿ ಭೇಟಿ ಬಗ್ಗೆ ಹಲವಾರು ಊಹಾಪೋಹಗಳು ಕೇಳಿ ಬಂದಿವೆ. ಅವರು ವೈಯಕ್ತಿಕ ಭೇಟಿಯಲ್ಲಿದ್ದಾರೆ, ಈ ಸಮಯದಲ್ಲಿ ಅವರು ಕೆಲವು ಸ್ನೇಹಿತರನ್ನು ಭೇಟಿ ಮಾಡುತ್ತಾರೆ ಮತ್ತು ಹೊಸ ಸಿಎಂಗಾಗಿ ಕಪುರ್ತಲಾ ಮನೆಯನ್ನು ಖಾಲಿ ಮಾಡುತ್ತಾರೆ. ಯಾವುದೇ ಅನಗತ್ಯ ಊಹಾಪೋಹಗಳ ಅಗತ್ಯವಿಲ್ಲ ಎಂದು ರವೀನ್ ತುಕ್ರಾಲ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Navjot Singh Sidhu ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ
ಇದನ್ನೂ ಓದಿ:ಬಿಜೆಪಿ ಸೇರ್ತಾರಾ ಪಂಜಾಬ್ ಮಾಜಿ ಸಿಎಂ ಅಮರೀಂದರ್ ಸಿಂಗ್?; ಇಂದು ಅಮಿತ್ ಶಾ, ಜೆ.ಪಿ. ನಡ್ಡಾ ಭೇಟಿ ಸಾಧ್ಯತೆ
(I told you so he is not a stable man and not fit for the border state of Punjab Amarinder Singh on Navjot Singh Sidhu resignation)