ಹಿಜಾಬ್ ಧರಿಸಿದ ಮಹಿಳೆ ಮುಂದೊಂದು ದಿನ ಭಾರತದ ಪ್ರಧಾನಿಯಾಗುತ್ತಾಳೆ; ಅಸಾದುದ್ದೀನ್ ಓವೈಸಿ ಭವಿಷ್ಯ

ಮುಂದೊಂದು ದಿನ ಹಿಜಾಬ್ ಧರಿಸಿರುವ ಮಹಿಳೆಯನ್ನು ಭಾರತದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. 

ಹಿಜಾಬ್ ಧರಿಸಿದ ಮಹಿಳೆ ಮುಂದೊಂದು ದಿನ ಭಾರತದ ಪ್ರಧಾನಿಯಾಗುತ್ತಾಳೆ; ಅಸಾದುದ್ದೀನ್ ಓವೈಸಿ ಭವಿಷ್ಯ
ಅಸಾದುದ್ದೀನ್ ಓವೈಸಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 26, 2022 | 2:24 PM

ನವದೆಹಲಿ: ಬ್ರಿಟನ್‌ನಲ್ಲಿ ಭಾರತೀಯ ಮೂಲದ ರಿಷಿ ಸುನಕ್ (Rishi Sunak) ಪ್ರಧಾನಿಯಾಗುತ್ತಾರೆ ಎಂಬ ಮಾತುಗಳು ನಡೆಯುತ್ತಿದ್ದರೆ, ಎಐಎಂಐಎಂ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಅವರು ಹಿಜಾಬ್ (Hijab) ಹೊಂದಿರುವ ಮಹಿಳೆಯನ್ನು ಭಾರತದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಟ್ವೀಟ್‌ಗೆ ಓವೈಸಿ ಪ್ರತಿಕ್ರಿಯಿಸಿದ್ದು, ಬ್ರಿಟನ್ ಅಲ್ಪಸಂಖ್ಯಾತ ಸಮುದಾಯದ ಸದಸ್ಯರಿಗೆ ಪ್ರಧಾನಿಯಾಗಲು ಅವಕಾಶ ನೀಡಿದೆ. ಇದು ಭಾರತದಲ್ಲಿ ಆಗಲು ಸಾಧ್ಯವೇ? ಎಂದಿದ್ದಾರೆ.

ಮುಂದೊಂದು ದಿನ ಹಿಜಾಬ್ ಧರಿಸಿರುವ ಮಹಿಳೆಯನ್ನು ಭಾರತದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಬ್ರಿಟನ್​ನಲ್ಲಿ ರಿಷಿ ಸುನಕ್ ಪ್ರಧಾನಿಯಾಗಿರುವ ಕುರಿತು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಇನ್ಶಾ ಅಲ್ಲಾಹ್ ಹಿಜಾಬ್ ಧರಿಸಿದ ಹುಡುಗಿ ಭಾರತದ ಪ್ರಧಾನಿಯಾಗುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಶಾಸಕ ಯತ್ನಾಳ್​ಗೆ​ ಪ್ರೀತಿ ಇದೆ, ಅದಕ್ಕೇ ಪದೇ ಪದೇ ಹೇಳುತ್ತಾರೆ: ಅಸಾದುದ್ದೀನ್ ಓವೈಸಿ

ಓವೈಸಿ ಈ ರೀತಿ ಮಾತನಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಕರ್ನಾಟಕದಲ್ಲಿ ಆರಂಭವಾದ ಹಿಜಾಬ್ ವಿವಾದದ ಸಂದರ್ಭದಲ್ಲಿ ಈ ವಿಷಯಗಳನ್ನು ಹೇಳಲಾಗಿತ್ತು. ನನ್ನ ಜೀವನದಲ್ಲಿ ಅಥವಾ ನನ್ನ ಜೀವನದ ನಂತರ ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುತ್ತಾಳೆ ಎಂದು ಓವೈಸಿ ಹೇಳಿದ್ದರು.

ಮುಸ್ಲಿಮರನ್ನು ದೇಶದಿಂದ ತೊಲಗಿಸುವುದು ಬಿಜೆಪಿಯ ಗುರಿ: ಬಿಜೆಪಿ ಮುಸ್ಲಿಮರ ವಿರುದ್ಧವಾಗಿದೆ. ಮುಸ್ಲಿಮರನ್ನು ದೇಶದಿಂದ ತೊಲಗಿಸುವುದು ಅದರ ನಿಜವಾದ ಉದ್ದೇಶವಾಗಿದೆ ಎಂದು ಎಐಎಂಐಎಂ ಅಧ್ಯಕ್ಷ ಓವೈಸಿ ಹೇಳಿದ್ದಾರೆ. ಹಲಾಲ್ ಮಾಂಸ ದೇಶಕ್ಕೆ ಅಪಾಯಕಾರಿಯಾಗಿದೆ, ಮುಸಲ್ಮಾನನ ಗಡ್ಡ ಅಪಾಯಕಾರಿಯಾಗಿದೆ, ಮುಸಲ್ಮಾನನ ಟೋಪಿ, ಮುಸಲ್ಮಾನನ ಆಹಾರ, ಪಾನೀಯ, ಬಟ್ಟೆ, ಚಿನ್ನ ಎಲ್ಲವೂ ಅಪಾಯಕಾರಿ ಎಂದು ಸುದ್ದಿ ಹರಡುವುದು ಬಿಜೆಪಿಯ ಅಜೆಂಡಾ ಎಂದು ಓವೈಸಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ