ಡಿಜಿಟಲ್ ಡೇಟಾ ಭದ್ರತೆ ಬಗ್ಗೆ ನನಗೆ ನಿಮ್ಮ ಅಭಿಪ್ರಾಯ ಬೇಕು, DPDP ನಿಯಮಗಳ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಕೇಳಿದ ಅಶ್ವಿನಿ ವೈಷ್ಣವ್

ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ನಿಯಮಗಳ ಕರಡು ಬಿಡುಗಡೆ ಮಾಡಿ ಕೇಂದ್ರ ಸರ್ಕಾರ, ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯವನ್ನು ಕೇಳಿದೆ. ಈ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕರಡು ಡಿಪಿಡಿಪಿ ನಿಯಮಗಳು ಸಮಾಲೋಚನೆಗೆ ಮುಕ್ತವಾಗಿವೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಬೇಕಿದೆ ಎಂದು ಎಕ್ಸ್​​ನಲ್ಲಿ ಬರೆದುಕೊಂಡಿದ್ದಾರೆ. ಇನ್ನು ಈ DPDP ನಿಯಮಗಳ ಯಾವಾಗದಿಂದ ಜಾರಿಗೆ ಬರಲಿದೆ ಎಂಬ ಬಗ್ಗೆಯೂ ಸಚಿವರು ಇಲ್ಲಿ ಮಾಹಿತಿ ನೀಡಿದ್ದಾರೆ.

ಡಿಜಿಟಲ್ ಡೇಟಾ ಭದ್ರತೆ ಬಗ್ಗೆ ನನಗೆ ನಿಮ್ಮ ಅಭಿಪ್ರಾಯ ಬೇಕು, DPDP ನಿಯಮಗಳ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಕೇಳಿದ ಅಶ್ವಿನಿ ವೈಷ್ಣವ್
ಅಶ್ವಿನಿ ವೈಷ್ಣವ್
Follow us
ಅಕ್ಷಯ್​ ಪಲ್ಲಮಜಲು​​
|

Updated on: Jan 04, 2025 | 10:44 AM

ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ನಿಯಮಗಳ ಕರಡನ್ನು ಕೇಂದ್ರ ಸರ್ಕಾರ ಶುಕ್ರವಾರ (ಜ.3) ಬಿಡುಗಡೆ ಮಾಡಿದೆ. ಈ ಬಗ್ಗೆ ರೈಲ್ವೆ, ಮಾಹಿತಿ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ತಮ್ಮ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಸಾರ್ವಜನಿಕರ ಅಭಿಪ್ರಾಯವನ್ನು ಕೇಳಿದ್ದಾರೆ. ಕರಡು ಡಿಪಿಡಿಪಿ ನಿಯಮಗಳು ಸಮಾಲೋಚನೆಗೆ ಮುಕ್ತವಾಗಿವೆ ಎಂದು ಎಕ್ಸ್​​ನಲ್ಲಿ ಅವರು ಬರೆದುಕೊಂಡಿದ್ದಾರೆ. ನನಗೆ ನಿಮ್ಮ ಅಭಿಪ್ರಾಯ ಬೇಕು ಎಂದು ಹೇಳಿದ್ದಾರೆ.

ಈ ಕರಡು ಬಗ್ಗೆ ನಿಮಗೆ ಹೇಳೋಣ ಎಂದು ತುಂಬಾ ಸಮಯದಿಂದ ಕಾಯುತ್ತಿದೆ. ಸಾರ್ವಜನಿಕ ಸಮಾಲೋಚನೆಗಾಗಿ ಪ್ರಕಟಿಸಲಾದ ಈ ಕರಡನ್ನು ಫೆಬ್ರವರಿ 18 ರ ನಂತರ ಪರಿಗಣಿಸಲಾಗುವುದು.

ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆಕ್ಟ್

ಕರಡು ಅಧಿಸೂಚನೆಯು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯಿದೆ ಆಗಿದ್ದು, 2023 ರ ವಿಭಾಗ 40 (1) ಮತ್ತು (2) ಉಪ-ವಿಭಾಗಗಳ 40 (1) ಮತ್ತು (2) ಅಡಿಯಲ್ಲಿ ಅಧಿಕಾರವನ್ನು ಚಲಾಯಿಸಲಾಗುವುದು. ಕೇಂದ್ರ ಸರ್ಕಾರವು ಜಾರಿಗೆ ತಂದ ಈ ಕಾಯಿದೆ ಯಾವ ದಿನಾಂಕದಿಂದ ಜಾರಿಗೊಳಿಸಲಾಗುವುದು ಅಲ್ಲಿಂದ ಇದರ ಪಾಲನೆ ಮಾಡಬೇಕಾಗುತ್ತದೆ. ಇನ್ನು ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆಕ್ಟ್ ನಲ್ಲಿ ಏನಿದೆ ಎಂಬ ಬಗ್ಗೆ ಈ ಕರಡುನಲ್ಲಿ ತಿಳಿಸಲಾಗಿದೆ. ಡಿಜಿಟಲ್ ಡೇಟಾ ಪ್ರೊಟೆಕ್ಷನ್ ಆಕ್ಟ್, 2023 ರ ಅಡಿಯಲ್ಲಿ ಜನರ ಒಪ್ಪಿಗೆಯನ್ನು ಪಡೆಯುವುದು, ಡೇಟಾ ಸಂಸ್ಕರಣಾ ಸಂಸ್ಥೆಗಳು ಮತ್ತು ಪ್ರಾಧಿಕಾರಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದ ನಿಬಂಧನೆಗಳನ್ನು ನಿಗದಿಪಡಿಸಲಾಗಿದೆ.

ಫೆಬ್ರವರಿ 18 ರ ನಂತರ ಜಾರಿಗೆ

ಕರಡು ನಿಯಮಗಳನ್ನು ಫೆಬ್ರವರಿ 18, 2025 ರ ನಂತರ ಪರಿಗಣಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಕಾಯಿದೆ ಪ್ರಕಾರ 2023 ರ ಅಡಿಯಲ್ಲಿ ದಂಡದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಸದ್ಯ ಸರ್ಕಾರ ಸಿದ್ಧಪಡಿಸಿರುವ ಕರಡಿನಲ್ಲಿ ನಿಯಮ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಸರ್ಕಾರ ಈಗಷ್ಟೇ ಜನರ ಅಭಿಪ್ರಾಯ ಕೇಳಿದೆ. ಜನರ ಅಭಿಪ್ರಾಯ ಪರಿಗಣಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ