AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೂ ಆ ರೂಮಲ್ಲೇ ಇದ್ದೆ; ಭಾರತ-ಪಾಕಿಸ್ತಾನದ ಕದನ ವಿರಾಮ ಕುರಿತು ಸಚಿವ ಜೈಶಂಕರ್ ಹೇಳಿದ್ದೇನು?

ಭಾರತದ ನಿರಂತರ ನಿರಾಕರಣೆಗಳ ಹೊರತಾಗಿಯೂ ಭಾರತ ಮತ್ತು ಪಾಕಿಸ್ತಾನದ ನಡುವಿನ ಮಿಲಿಟರಿ ಉದ್ವಿಗ್ನತೆಯನ್ನು ತಾನೇ ಕೊನೆಗೊಳಿಸಿದ್ದು, ಎರಡೂ ದೇಶಗಳ ನಡುವೆ ನಾನೇ ಕದನವಿರಾಮ ಒಪ್ಪಂದ ಮಾಡಿಸಿದ್ದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಪ್ರತಿಪಾದಿಸಿದ್ದಾರೆ. ಕಳೆದ ವಾರ ಕೂಡ ಟ್ರಂಪ್ ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಸಂಘರ್ಷವನ್ನು ನಾನೇ ಕೊನೆಗೊಳಿಸಿದ್ದು ಎಂದು ಮತ್ತೊಮ್ಮೆ ಹೇಳಿಕೊಂಡಿದ್ದರು. ಅದಕ್ಕೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ.

ನಾನೂ ಆ ರೂಮಲ್ಲೇ ಇದ್ದೆ; ಭಾರತ-ಪಾಕಿಸ್ತಾನದ ಕದನ ವಿರಾಮ ಕುರಿತು ಸಚಿವ ಜೈಶಂಕರ್ ಹೇಳಿದ್ದೇನು?
S Jaishankar
ಸುಷ್ಮಾ ಚಕ್ರೆ
|

Updated on: Jul 01, 2025 | 4:31 PM

Share

ನವದೆಹಲಿ, ಜುಲೈ 1: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಕಾಶ್ಮೀರದಲ್ಲಿ ಪ್ರವಾಸೋದ್ಯಮವನ್ನು ನಾಶ ಮಾಡಲು ಉದ್ದೇಶಿಸಲಾದ “ಆರ್ಥಿಕ ಯುದ್ಧದ ಕೃತ್ಯ” ಎಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಟೀಕಿಸಿದ್ದಾರೆ. ಪಾಕಿಸ್ತಾನದ ಜೊತೆಗಿನ ಕದನ ವಿರಾಮ ಒಪ್ಪಂದಕ್ಕೂ (India-Pakistan Ceasefire) ಮೊದಲು ನವದೆಹಲಿ ಮತ್ತು ವಾಷಿಂಗ್ಟನ್ ನಡುವಿನ ಮಾತುಕತೆಗಳ ಬಗ್ಗೆ ವಿವರವಾದ ಮಾಹಿತಿಯನ್ನು ಹಂಚಿಕೊಂಡ ಅವರು, ಪಾಕಿಸ್ತಾನದ ಬೆಂಬಲವಿರುವ ಭಯೋತ್ಪಾದನೆಗೆ ಪ್ರತಿಕ್ರಿಯಿಸದಂತೆ ತಡೆಯಲು ಪರಮಾಣು ಬ್ಲ್ಯಾಕ್‌ಮೇಲ್‌ಗೆ ಅವಕಾಶ ನೀಡುವುದಿಲ್ಲ ಎಂಬ ಭಾರತದ ನಿಲುವನ್ನು ಪ್ರತಿಪಾದಿಸಿದರು. ಭಾರತ ಮತ್ತು ಪಾಕಿಸ್ತಾನವನ್ನು ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಒತ್ತಾಯಿಸಲು ವ್ಯಾಪಾರ ಒಪ್ಪಂದವನ್ನು ಬಳಸಿಕೊಂಡಿದ್ದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ತಳ್ಳಿಹಾಕಿದರು.

ನ್ಯೂಯಾರ್ಕ್‌ನಲ್ಲಿ ನ್ಯೂಸ್‌ವೀಕ್‌ನೊಂದಿಗೆ ವಿಶೇಷ ಚಾಟ್‌ನಲ್ಲಿ ಭಾಗವಹಿಸಿದ ಎಸ್. ಜೈಶಂಕರ್, ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದಾಗ ನಾನು ಕೂಡ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅದೇ ರೂಂನಲ್ಲಿ ಇದ್ದೆ ಎಂದು ಬಹಿರಂಗಪಡಿಸಿದ್ದಾರೆ. ಭಾರತಕ್ಕೆ ಸಂಬಂಧಿಸಿದಂತೆ ವ್ಯಾಪಾರ ಮತ್ತು ಕದನ ವಿರಾಮದ ನಡುವೆ ಯಾವುದೇ ಸಂಬಂಧವಿಲ್ಲ. ಕದನವಿರಾಮ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ದ್ವಿಪಕ್ಷೀಯ ಒಪ್ಪಂದವಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಭಾರತದ ವಿರುದ್ಧ ಚೀನಾ ಗೌಪ್ಯ ಮಾಹಿತಿ ನೀಡಿದ್ದನ್ನು ಒಪ್ಪಿಕೊಂಡ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್

“ಮೇ 9ರ ರಾತ್ರಿ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪ್ರಧಾನಿ ಮೋದಿಯವರೊಂದಿಗೆ ಫೋನ್​ನಲ್ಲಿ ಮಾತನಾಡಿದರು. ಪಾಕಿಸ್ತಾನಿಗಳು ಭಾರತದ ಮೇಲೆ ಭಾರಿ ದಾಳಿ ನಡೆಸಲಿದ್ದಾರೆ ಎಂದು ಅವರು ಹೇಳಿದಾಗ ನಾನು ಅದೇ ರೂಂನಲ್ಲಿದ್ದೆ. ನಾವು ಅವರು ಹೇಳಿದ ಕೆಲವು ವಿಷಯಗಳನ್ನು ಸ್ವೀಕರಿಸಲಿಲ್ಲ. ಪಾಕಿಸ್ತಾನ ನಮ್ಮ ದೇಶದ ಮೇಲೆ ಏನೇ ಮಾಡಿದರೂ ನಾವು ಅದಕ್ಕೆ ಪ್ರತಿಕ್ರಿಯೆ ನೀಡಲು ಸಿದ್ಧರಿದ್ದೇವೆ ಎಂದು ಮೋದಿ ಸೂಚಿಸಿದರು” ಎಂದು ಜೈಶಂಕರ್ ಹೇಳಿದ್ದಾರೆ.

ಮೇ 9ರ ರಾತ್ರಿ ಪಾಕಿಸ್ತಾನ ಭಾರತದ ವಿರುದ್ಧ ಭಾರಿ ದಾಳಿ ನಡೆಸಿತು ಎಂದು ಜೈಶಂಕರ್ ನೆನಪಿಸಿಕೊಂಡರು. ಆದರೆ, ಭಾರತೀಯ ಸಶಸ್ತ್ರ ಪಡೆಗಳು ತಕ್ಷಣ ಅದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದವು ಎಂದು ಅವರು ಒತ್ತಿ ಹೇಳಿದರು. “ಅಮೆರಿಕದೊಂದಿಗಿನ ಮುಂದಿನ ಸಂಪರ್ಕವು ಮರುದಿನ ಬೆಳಿಗ್ಗೆ ವಿದೇಶಾಂಗ ಸಚಿವರು ಮತ್ತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ನಡುವೆ ಆಗಿತ್ತು. ರುಬಿಯೊ ಪಾಕಿಸ್ತಾನಿಗಳು ಮಾತನಾಡಲು ಸಿದ್ಧರಿದ್ದಾರೆ ಎಂದು ನನಗೆ ಹೇಳಿದರು. ಆ ಮಧ್ಯಾಹ್ನದ ನಂತರ, ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಮೇಜರ್ ಜನರಲ್ ಕಾಶಿಫ್ ಅಬ್ದುಲ್ಲಾ ಅವರು ತಮ್ಮ ಭಾರತೀಯ ಸಹವರ್ತಿ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಅವರನ್ನು ನೇರವಾಗಿ ಕರೆದು ಕದನ ವಿರಾಮ ಕೋರಿದರು. ಹೀಗಾಗಿ, ಎರಡೂ ದೇಶಗಳ ನಡುವೆ ಏನಾಯಿತು ಎಂಬುದನ್ನು ನಾನು ನನ್ನ ಅನುಭವದಿಂದಲೇ ಹೇಳುತ್ತಿದ್ದೇನೆ. ಆ ದಿನ ನಾನೇ ರೂಂನಲ್ಲಿದ್ದು ಎಲ್ಲದಕ್ಕೂ ಸಾಕ್ಷಿಯಾಗಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ಅಕ್ರಮವಾಗಿ ಭಾರತ ಗಡಿ ದಾಟಲು ಯತ್ನಿಸಿದ ಪಾಕಿಸ್ತಾನದ ಜೋಡಿ: ನೀರಿಲ್ಲದೆ ಮರುಭೂಮಿಯಲ್ಲಿ ದುರಂತ ಸಾವು

ಪಾಕಿಸ್ತಾನದಿಂದ ಹೊರಹೊಮ್ಮುವ ಭಯೋತ್ಪಾದನೆಗೆ ಪ್ರತಿಕ್ರಿಯಿಸುವುದನ್ನು ತಡೆಯಲು ಪರಮಾಣು ಬ್ಲ್ಯಾಕ್‌ಮೇಲ್‌ಗೆ ಅವಕಾಶ ನೀಡದಿರುವ ಭಾರತದ ನಿಲುವನ್ನು ಅವರು ಪ್ರತಿಪಾದಿಸಿದರು. ಪಾಕಿಸ್ತಾನ ಬೆಂಬಲಿತ ಲಷ್ಕರ್-ಎ-ತೈಬಾಗೆ ಸಂಬಂಧಿಸಿದ ರೆಸಿಸ್ಟೆನ್ಸ್ ಫ್ರಂಟ್ ನಡೆಸಿದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳ ವಿರುದ್ಧ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು