Tamil Nadu Election 2021: ‘ನಾನು ರಾಜಕೀಯಕ್ಕಾಗಿ ಸಿನಿಮಾವನ್ನು ಸಂಪೂರ್ಣವಾಗಿ ಬಿಡಲೂ ಸಿದ್ಧನಿದ್ದೇನೆ..‘- ಕಮಲ್​ ಹಾಸನ್​

ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅದರಲ್ಲಿ 154 ಸೀಟುಗಳಲ್ಲಿ ಎಂಎನ್​ಎಂ ಪಕ್ಷ ಸ್ಪರ್ಧಿಸಿದೆ. ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಮಲ್​ ಹಾಸನ್ ಸ್ಪರ್ಧೆಗೆ ಇಳಿದಿದ್ದಾರೆ.

Tamil Nadu Election 2021: ‘ನಾನು ರಾಜಕೀಯಕ್ಕಾಗಿ ಸಿನಿಮಾವನ್ನು ಸಂಪೂರ್ಣವಾಗಿ ಬಿಡಲೂ ಸಿದ್ಧನಿದ್ದೇನೆ..‘- ಕಮಲ್​ ಹಾಸನ್​
ಕಮಲ್​ ಹಾಸನ್​
Follow us
Lakshmi Hegde
|

Updated on:Apr 04, 2021 | 7:55 PM

ಚೆನ್ನೈ: ಕಮಲ್ ಹಾಸನ್​ ಖ್ಯಾತಿಗಳಿಸಿದ್ದು ಸಿನಿಮಾದಿಂದಲೇ. ಆದರೆ ಅವರೀಗ ಸಕ್ರಿಯ ರಾಜಕಾರಣಿ ಎನ್ನಿಸಿಕೊಳ್ಳುವತ್ತ ದಾಪುಗಾಲು ಹಾಕುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಇಂದು ಒಂದು ಹೇಳಿಕೆಯನ್ನೂ ನೀಡಿದ್ದಾರೆ. ನನ್ನ ರಾಜಕೀಯ ಜೀವನಕ್ಕೆ ಸಿನಿಮಾಗಳಿಂದ ತೊಂದರೆ ಆಗುವುದಾದರೆ ನಾನು ಸಿನಿಮಾವನ್ನು ಬಿಟ್ಟುಬಿಡುತ್ತೇನೆ ಎಂದು ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಕ್ಕಳ್ ನೀಧಿ ಮಯ್ಯಂ​​​ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್​, ನಾನು ರಾಜಕೀಯಕ್ಕೆ ಸೇರಬೇಕು ಎಂಬುದು ನನ್ನ ತುಂಬ ಹಳೇ ನಿರ್ಧಾರ. ಈ ನನ್ನ ರಾಜಕೀಯ ಕರಿಯರ್​​ಗೆ ಸಿನಿಮಾಗಳಿಂದ ಅಡೆತಡೆಯಾಗುತ್ತದೆ ಎಂದಾದರೆ ಈಗಿರುವ ಸಿನಿಮಾ ಕಾರ್ಯಗಳನ್ನೆಲ್ಲ ಮುಗಿಸಿಕೊಟ್ಟು, ನಂತರ ಸಂಪೂರ್ಣವಾಗಿ ಬಿಟ್ಟುಬಿಡುತ್ತೇನೆ. ಜನರ ಸೇವೆಯೇ ಆದ್ಯತೆ ಎಂದು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅದರಲ್ಲಿ 154 ಸೀಟುಗಳಲ್ಲಿ ಎಂಎನ್​ಎಂ ಪಕ್ಷ ಸ್ಪರ್ಧಿಸಿದೆ. ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಮಲ್​ ಹಾಸನ್ ಸ್ಪರ್ಧೆಗೆ ಇಳಿದಿದ್ದಾರೆ. ಕಮಲ್ ಹಾಸನ್ ರಾಜಕೀಯವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಇದಾದ ಬಳಿಕ ಸಿನಿಮಾಕ್ಕೆ ವಾಪಸ್ ಆಗುತ್ತಾರೆ ಎಂದು ಅವರ ವಿರೋಧಿ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ. ಆದರೆ ಕಮಲ್​ ಹಾಸನ್ ಸರಿಯಾಗಿ ಉಲ್ಟಾ ಹೊಡೆದಿದ್ದಾರೆ. ರಾಜಕೀಯದಲ್ಲಿ ಯಾರು ಸೋಲುತ್ತಾರೆ ಎಂದು ಕಾದು ನೋಡೋಣ. ಜನರೇ ನಿರ್ಧರಿಸುತ್ತಾರೆ ಎಂದೂ ತಿರುಗೇಟು ನೀಡಿದ್ದಾರೆ. ಇನ್ನು ತಮಗೆ ಕೆಲವು ಕಡೆಗಳಿಂದ ಬೆದರಿಕೆ ಬರುತ್ತಿರುವುದಾಗಿಯೂ ಕಮಲ್ ಹಾಸನ್ ಹೇಳಿದ್ದಾರೆ. ಆದರೆ ಅದರ ಬಗ್ಗೆ ತುಂಬ ವಿವರಗಳನ್ನು ಅವರು ನೀಡಿಲ್ಲ.

ಇದನ್ನೂ ಓದಿ: ಕೊರೊನಾ ಹೆಚ್ಚಳದ ಮಧ್ಯೆ ರಾಜ್ಯಕ್ಕೆ ಗುಡ್ ನ್ಯೂಸ್: ಕರ್ನಾಟಕಕ್ಕೆ ತುರ್ತಾಗಿ 15.25 ಲಕ್ಷ ಕೊರೊನಾ ಲಸಿಕೆ ರವಾನೆ

ಯೋಧರ ಪ್ರಾಣತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ.. ಸೂಕ್ತ ಸಮಯದಲ್ಲಿ ನಕ್ಸಲರಿಗೆ ಕಟು ತಿರುಗೇಟು ನೀಡುತ್ತೇವೆ: ಅಮಿತ್​ ಶಾ

Published On - 7:54 pm, Sun, 4 April 21

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ