NRCಗೆ ಅರ್ಜಿ ಸಲ್ಲಿಸದ ವ್ಯಕ್ತಿ ಪೌರತ್ವ ಪಡೆದರೆ ನಾನು ರಾಜೀನಾಮೆ ನೀಡುತ್ತೇನೆ: ಹಿಮಂತ ಬಿಸ್ವಾ ಶರ್ಮಾ

National Register of Citizens: ನಾನು ಅಸ್ಸಾಂನ ಮಗ ಮತ್ತು ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದ ಒಬ್ಬ ವ್ಯಕ್ತಿ ಪೌರತ್ವವನ್ನು ಪಡೆದರೆ, ನಾನು ಮೊದಲು ರಾಜೀನಾಮೆ ನೀಡುತ್ತೇನೆ" ಎಂದು ಶಿವಸಾಗರ್‌ನಲ್ಲಿ ನಡೆದ ಕಾರ್ಯಕ್ರಮದ ನೇಪಥ್ಯದಲ್ಲಿ ಸಿಎಂ ಶರ್ಮ ಹೇಳಿದ್ದಾರೆ. ಸಿಎಎ ಜಾರಿಯಾದ ನಂತರ ಲಕ್ಷಾಂತರ ಜನರು ರಾಜ್ಯಕ್ಕೆ ಬರುತ್ತಾರೆ ಎಂದು ಪ್ರತಿಭಟನಾಕಾರರು ಹೇಳುತ್ತಿದ್ದಾರೆ. ಒಂದು ವೇಳೆ ಇದೇ ರೀತಿ ನಡೆದರೆ ನಾನೇ ಮೊದಲು ಪ್ರತಿಭಟನೆ ನಡೆಸುತ್ತೇನೆ ಎಂದರು.

NRCಗೆ ಅರ್ಜಿ ಸಲ್ಲಿಸದ ವ್ಯಕ್ತಿ ಪೌರತ್ವ ಪಡೆದರೆ ನಾನು ರಾಜೀನಾಮೆ ನೀಡುತ್ತೇನೆ: ಹಿಮಂತ ಬಿಸ್ವಾ ಶರ್ಮಾ
ಹಿಮಂತ ಬಿಸ್ವಾ ಶರ್ಮಾ
Follow us
|

Updated on: Mar 12, 2024 | 12:27 PM

ದಿಸ್ಪುರ್, ಮಾ.12: ಲೋಕಸಭೆ ಚುನಾವಣೆ (lok sabha election) ಹತ್ತಿರವಾಗುತ್ತಿದ್ದಂತೆ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗಳು ನಡೆಯುತ್ತಿದೆ. ಒಂದು ಹರ್ಯಾಣ ಮುಖ್ಯಮಂತ್ರಿ ಮನೋಹರ ಲಾಲ್​ ಖಟ್ಟರ್ (Manohar Lal Khattar) ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನು ಮತ್ತೊಂದು ಕಡೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sharma) ಕೂಡ ರಾಜೀನಾಮೆ ನೀಡುವ ಬಗ್ಗೆ ಮಾತನಾಡಿದ್ದಾರೆ. ಹರ್ಯಾಣ ಮುಖ್ಯಮಂತ್ರಿ ಮನೋಹರ ಲಾಲ್​ ಖಟ್ಟರ್ ಲೋಕಸಭೆ ಚುನಾವಣೆಯಲ್ಲಿ ಕರ್ನಾಲ್ ನಿಂದ ಸ್ಪರ್ಧಿಸುವ ಕಾರಣ ರಾಜೀನಾಮೆ ನೀಡಿದ್ದಾರೆ. ಆದರೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ರಾಜೀನಾಮೆ ನೀಡುವ ಬಗ್ಗೆ ಮಾತನಾಡಿರುವ ಕಾರಣ ಬೇರೆಯೇ, ರಾಷ್ಟ್ರೀಯ ಪೌರತ್ವ ನೋಂದಣಿಗೆ (ಎನ್‌ಆರ್‌ಸಿ) ಅರ್ಜಿ ಸಲ್ಲಿಸದ ವ್ಯಕ್ತಿಯೊಬ್ಬರು ಪೌರತ್ವ ಪಡೆದರೆ ರಾಜೀನಾಮೆ ನೀಡುವ ಮೊದಲ ವ್ಯಕ್ತಿ ನಾನು ಎಂದು ಹೇಳಿದ್ದಾರೆ.

ಪೌರತ್ವ (ತಿದ್ದುಪಡಿ) ಕಾಯಿದೆ, 2019 (ಸಿಎಎ)ನ್ನು ಕೇಂದ್ರ ಸರ್ಕಾರ ಸೋಮವಾರ ಜಾರಿಗೆ ತಂದಿದೆ. ಈ ಕಾರಣಕ್ಕೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಅಸ್ಸಾಂನಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದೆ. ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ, ಪಾಕಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ನೀಡುವುದು ಇದರ ಮೂಲ ಉದ್ದೇಶವಾಗಿದೆ.

“ನಾನು ಅಸ್ಸಾಂನ ಮಗ ಮತ್ತು ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದ ಒಬ್ಬ ವ್ಯಕ್ತಿ ಪೌರತ್ವವನ್ನು ಪಡೆದರೆ, ನಾನು ಮೊದಲು ರಾಜೀನಾಮೆ ನೀಡುತ್ತೇನೆ” ಎಂದು ಶಿವಸಾಗರ್‌ನಲ್ಲಿ ನಡೆದ ಕಾರ್ಯಕ್ರಮದ ನೇಪಥ್ಯದಲ್ಲಿ ಸಿಎಂ ಶರ್ಮಾ ಹೇಳಿದ್ದಾರೆ. ಸಿಎಎ ಜಾರಿಯಾದ ನಂತರ ಲಕ್ಷಾಂತರ ಜನರು ರಾಜ್ಯಕ್ಕೆ ಬರುತ್ತಾರೆ ಎಂದು ಪ್ರತಿಭಟನಾಕಾರರು ಹೇಳುತ್ತಿದ್ದಾರೆ. ಒಂದು ವೇಳೆ ಇದೇ ರೀತಿ ನಡೆದರೆ ನಾನೇ ಮೊದಲು ಪ್ರತಿಭಟನೆ ನಡೆಸುತ್ತೇನೆ ಎಂದರು.

ಸಿಎಎಯಲ್ಲಿ ಹೊಸದೇನೂ ಇಲ್ಲ, ಅದನ್ನು ಮೊದಲೇ ಜಾರಿಗೊಳಿಸಲಾಗಿದೆ. ಈಗ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವ ಸಮಯ ಬಂದಿದೆ. ಪೋರ್ಟಲ್‌ನಲ್ಲಿರುವ ಡೇಟಾ ಈಗ ಮಾತನಾಡುತ್ತದೆ ಮತ್ತು ಕಾಯಿದೆಯನ್ನು ವಿರೋಧಿಸುವವರ ಹಕ್ಕುಗಳು ವಾಸ್ತವಿಕವಾಗಿ ಸರಿಯಾಗಿವೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್​ ಖಟ್ಟರ್ ರಾಜೀನಾಮೆ

CAA ನಿಯಮಗಳನ್ನು ಹೊರಡಿಸುವುದರೊಂದಿಗೆ, ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಕೇಂದ್ರ ಸರ್ಕಾರವು ಭಾರತೀಯ ರಾಷ್ಟ್ರೀಯತೆಯನ್ನು ನೀಡಲು ಪ್ರಾರಂಭಿಸುತ್ತದೆ. ಇವುಗಳಲ್ಲಿ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಸೇರಿದ್ದಾರೆ. ಇದುವರೆಗೆ ನಿಯಮಾವಳಿಗಳನ್ನು ಪ್ರಕಟಿಸದ ಕಾರಣ ಕಾನೂನು ಜಾರಿಗೆ ಬರಲು ಸಾಧ್ಯವಾಗಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ