AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬದುಕಿರುವವರೆಗೂ ಭಾರತವನ್ನು ಹಿಂದು ರಾಷ್ಟ್ರವನ್ನಾಗಿ ಮಾಡಲು ಬಿಡುವುದಿಲ್ಲ: ಕಾಂಗ್ರೆಸ್ ನಾಯಕ ರಶೆದ್​​ ಖಾನ್​

ಈ ರಶೆದ್​ ಖಾನ್​ ಕೂಡ ಜಿತೇಂದ್ರ ಅವರ ವಿರುದ್ಧ ತಿರುಗಿಬಿದ್ದಿದ್ದರು. ರಿಜ್ವಿ ಹಿಂದೂ ಧರ್ಮಕ್ಕೆ ಸೇರುವ ಮೂಲಕ ಇಸ್ಲಾಂಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿದ್ದರು.

ನಾನು ಬದುಕಿರುವವರೆಗೂ ಭಾರತವನ್ನು ಹಿಂದು ರಾಷ್ಟ್ರವನ್ನಾಗಿ ಮಾಡಲು ಬಿಡುವುದಿಲ್ಲ: ಕಾಂಗ್ರೆಸ್ ನಾಯಕ ರಶೆದ್​​ ಖಾನ್​
ರಶೆದ್​ ಖಾನ್​
TV9 Web
| Edited By: |

Updated on: Dec 28, 2021 | 4:22 PM

Share

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ರೂಪಿಸುವ ಕನಸು ಕಾಣುತ್ತಿರುವ ಆರ್​ಎಸ್​ಎಸ್, ವಿಶ್ವ ಹಿಂದು ಪರಿಷತ್​, ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​, ಅಮಿತ್​ ಶಾರಿಗೆ ದೊಡ್ಡ ನಿರಾಸೆಯಾಗಲಿದೆ. ಅವರ ಕನಸು ಎಂದಿಗೂ ನನಸಾಗುವುದಿಲ್ಲ. ನಾನು ಬದುಕಿ ಇರುವವರೆಗೂ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ರೂಪಿಸಲು ಬಿಡುವುದಿಲ್ಲ ಎಂದು ತೆಲಂಗಾಣ ಕಾಂಗ್ರೆಸ್​ ನಾಯಕ ರಶೆದ್​ ಖಾನ್​ ತಿಳಿಸಿದ್ದಾರೆ.  ಅಲ್ಲದೆ, ಈ ದೇಶದಲ್ಲಿ ಕಾಂಗ್ರೆಸ್​ ಪಕ್ಷ ಮಾತ್ರ ಮುಸ್ಲಿಮರಿಗೆ ಬೆಂಬಲ ನೀಡುತ್ತಿದೆ. ಕಾಂಗ್ರೆಸ್ ತಾರತಮ್ಯ ಮಾಡದೆ ಎಲ್ಲ ಪಕ್ಷದವರನ್ನೂ ಒಂದೇ ರೀತಿ ಕಾಣುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಉತ್ತರಪ್ರದೇಶ ಶಿಯಾ ವಕ್ಫ್​ ಮಂಡಳಿ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಇಸ್ಲಾಂ ತೊರೆದು ಹಿಂದು ಧರ್ಮಕ್ಕೆ ಸೇರ್ಪಡೆಯಾಗಿ, ಅವರ ಹೆಸರನ್ನು ಜಿತೇಂದ್ರ ನಾರಾಯಣ್ ಸಿಂಗ್​ ತ್ಯಾಗಿ ಎಂದು ಬದಲಿಸಿಕೊಂಡಿದ್ದಾರೆ. ಅವರು ಸನಾತನ ಧರ್ಮ ಒಪ್ಪಿಕೊಳ್ಳಲು ಮುಖ್ಯ ಕಾರಣ, ಆ ಧರ್ಮದಲ್ಲಿ ಅವರು ಸೃಷ್ಟಿಸಿಕೊಂಡಿದ್ದ ವಿವಾದ ಮತ್ತು ನಿರಂತರವಾಗಿ ಬರುತ್ತಿದ್ದ ಬೆದರಿಕೆ ಕರೆಗಳು. ಮುಸ್ಲಿಮರ ಪವಿತ್ರ ಗ್ರಂಥ ಕುರಾನ್​​ನಲ್ಲಿರುವ ಕೆಲವು ಆಯ್ದ ಭಾಗಗಳು ಹಿಂಸಾಚಾರವನ್ನು ಬೋಧಿಸುತ್ತವೆ. ಹಾಗಾಗಿ ಅವುಗಳನ್ನು ತೆಗೆದುಹಾಕಬೇಕು ಎಂದು ಸುಪ್ರೀಂಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹಾಗಂತ ಸುಪ್ರೀಂಕೋರ್ಟ್​ ಅವರ ಅರ್ಜಿಯನ್ನು ಮಾನ್ಯ ಮಾಡಿರಲಿಲ್ಲ. ಅದನ್ನು ತಿರಸ್ಕರಿಸಿತ್ತು.  ಅಷ್ಟೇ ಅಲ್ಲದೆ,  ಮೊಹಮ್ಮದ್​ ಎನ್ನುವ ಒಂದು ಪುಸ್ತಕ ಬಿಡುಗಡೆ ಮಾಡಿದ್ದರು. ಅದರಲ್ಲಿ ಪ್ರವಾದಿ ಮೊಹಮ್ಮದರ ವಿರುದ್ಧ ಆಕ್ಷೇಪಣೀಯ ಭಾಷೆ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್​ ಓವೈಸಿ ಕೂಡ ರಿಜ್ವಿ ವಿರುದ್ಧ ಹೈದರಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಾಗೇ, ರಿಜ್ವಿಯ ಈ ನಡವಳಿಕೆ ಹಿಂದೆ ಇಸ್ಲಾಂ ವಿರೋಧಿ ಶಕ್ತಿಗಳಿವೆ ಎಂದೂ ಆರೋಪ ಮಾಡಿದ್ದರು. ಜೀವ ಬೆದರಿಕೆ ಇನ್ನಷ್ಟು ಜಾಸ್ತಿಯಾಗಿತ್ತು. ಈ ವೇಳೆ ಈ ರಶೆದ್​ ಖಾನ್​ ಕೂಡ ಜಿತೇಂದ್ರ ಅವರ ವಿರುದ್ಧ ತಿರುಗಿಬಿದ್ದಿದ್ದರು. ರಿಜ್ವಿ ಹಿಂದೂ ಧರ್ಮಕ್ಕೆ ಸೇರುವ ಮೂಲಕ ಇಸ್ಲಾಂಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿದ್ದಲ್ಲದೆ, ಅವರ ತಲೆಗೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು.

ಇದನ್ನೂ ಓದಿ: 60 ವರ್ಷ ಮೇಲ್ಪಟ್ಟು, ಇನ್ನಿತರ ಕಾಯಿಲೆಗಳಿರುವವರು ಲಸಿಕೆ 3ನೇ ಡೋಸ್ ಪಡೆಯಲು ಮೆಡಿಕಲ್​ ಸರ್ಟಿಫಿಕೇಟ್​ ಬೇಕಾಗಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ