Agniveervayu Recruitment 2026: ಭಾರತೀಯ ವಾಯುಪಡೆಯಲ್ಲಿ ನೇಮಕಾತಿ; 12ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ!

ಭಾರತೀಯ ವಾಯುಪಡೆ ಅಗ್ನಿವೀರವಾಯು ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ದೇಶಸೇವೆ ಮಾಡಲು ಬಯಸುವ ಅವಿವಾಹಿತ ಯುವಕ-ಯುವತಿಯರು ಜುಲೈ 6 ರಿಂದ ಜುಲೈ 26 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 22 ಮತ್ತು 23 ರಂದು ಪರೀಕ್ಷೆ ನಡೆಯಲಿದೆ. ಅರ್ಹತೆ, ವಯಸ್ಸಿನ ಮಿತಿ, ಶುಲ್ಕ ಮತ್ತು ಇತರೆ ವಿವರಗಳಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Agniveervayu Recruitment 2026: ಭಾರತೀಯ ವಾಯುಪಡೆಯಲ್ಲಿ ನೇಮಕಾತಿ; 12ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ!
ಅಗ್ನಿವೀರವಾಯು ನೇಮಕಾತಿ
Image Credit source: Getty Images

Updated on: Jul 07, 2026 | 4:09 PM

ಮುಖ್ಯಾಂಶಗಳು

  • ಭಾರತೀಯ ವಾಯುಪಡೆ ಅಗ್ನಿವೀರವಾಯು ನೇಮಕಾತಿ ಅಧಿಸೂಚನೆ ಪ್ರಕಟ
  • ದೇಶಸೇವೆಯ ಕನಸು ಹೊಂದಿರುವ ಯುವಕ-ಯುವತಿಯರಿಗೆ ಸುವರ್ಣವಕಾಶ
  • ಜುಲೈ 6 ರಿಂದ ಜುಲೈ 26 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

ದೇಶಸೇವೆಯ ಕನಸು ಹೊಂದಿರುವ ಯುವಕ-ಯುವತಿಯರಿಗೆ ಭಾರತೀಯ ವಾಯುಪಡೆ (Indian Air Force) ಸಿಹಿಸುದ್ದಿ ನೀಡಿದೆ. ಅಗ್ನಿವೀರವಾಯು (Agniveervayu) ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 6ರ ಬೆಳಿಗ್ಗೆ 11 ಗಂಟೆಯಿಂದ ಜುಲೈ 26ರ ರಾತ್ರಿ 11 ಗಂಟೆಯವರೆಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು iafrecruitment.edcil.co.in ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ನೇಮಕಾತಿಯ ಆನ್‌ಲೈನ್ ಪರೀಕ್ಷೆಯು 2026ರ ಸೆಪ್ಟೆಂಬರ್ 22 ಮತ್ತು 23ರಂದು ನಡೆಯಲಿದೆ. ಪ್ರಕಟಣೆಯ ಪ್ರಕಾರ, 2005ರ ಜುಲೈ 1ರಿಂದ 2010ರ ಜನವರಿ 1ರ ನಡುವೆ ಜನಿಸಿದ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ, ದೈಹಿಕ ಸಾಮರ್ಥ್ಯ, ವೈದ್ಯಕೀಯ ಮಾನದಂಡಗಳು ಹಾಗೂ ಇತರ ನಿಯಮಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸುವುದು ಕಡ್ಡಾಯ. ಅರ್ಜಿ ಶುಲ್ಕ 550 ರೂ ಮತ್ತು ಜಿಎಸ್‌ಟಿ ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಆರಂಭ: 06 ಜುಲೈ 2026 (ಬೆಳಿಗ್ಗೆ 11:00)
  • ಅರ್ಜಿ ಸಲ್ಲಿಸಲು ಕೊನೆಯ ದಿನ: 26 ಜುಲೈ 2026 (ರಾತ್ರಿ 11:00)
  • ಆನ್‌ಲೈನ್ ಪರೀಕ್ಷೆ: 22 ಮತ್ತು 23 ಸೆಪ್ಟೆಂಬರ್ 2026
  • ಅಧಿಕೃತ ವೆಬ್‌ಸೈಟ್:iafrecruitment.edcil.co.in

ಇದನ್ನೂ ಓದಿ: ನೀಟ್ ಇಲ್ಲದೆಯೂ ವೈದ್ಯಕೀಯ ಲೋಕಕ್ಕೆ ಎಂಟ್ರಿ; 12ನೇ ತರಗತಿ ಅಂಕಗಳ ಆಧಾರದ ಮೇಲೆ ಸಿಗಲಿದೆ ಅಡ್ಮಿಷನ್!

ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಸಮಯಕ್ಕೆ ಸರಿಯಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us