ಪಾಕಿಸ್ತಾನದ ವಿರುದ್ಧ ಕ್ರಮಕ್ಕೆ ಸಿದ್ಧತೆ? ವಾಯುಪಡೆ ಮುಖ್ಯಸ್ಥರನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರಮೋದಿ ಇಂದು ವಾಯುಪಡೆ ಮುಖ್ಯಸ್ಥ ಎಪಿ ಸಿಂಗ್ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾದರು. ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ, ವಾಯುಪಡೆಯ ಮುಖ್ಯಸ್ಥರು ಮತ್ತು ಪ್ರಧಾನಿ ಮೋದಿ ನಡುವಿನ ಈ ಸಭೆ ನಡೆಯಿತು. ಆ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಮತ್ತು ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಆ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಕೂಡ ಉಪಸ್ಥಿತರಿದ್ದರು.

ನವದೆಹಲಿ, ಮೇ 04: ಜಮ್ಮು ಕಾಶ್ಮೀರದ ಪಹಲ್ಗಾಮ್(Pahalgam)ನಲ್ಲಿ ನಡೆದ ಉಗ್ರ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಸೃಷ್ಟಿಯಾಗಿದೆ. ಭಾರತ ಯಾವ ಸಮಯದಲ್ಲಿ ಬೇಕಾದರೂ ತಮ್ಮ ಮೇಲೆ ಯುದ್ಧ ನಡೆಸಬಹುದು ಎಂದು ನಿದ್ರೆ ಬಿಟ್ಟು ಪಾಕಿಸ್ತಾನ ಆಲೋಚನೆಯಲ್ಲಿ ತೊಡಗಿದೆ. ವಾಯುಪಡೆ ಮುಖ್ಯಸ್ಥ ಅಮರ್ಪ್ರೀತ್ ಸಿಂಗ್ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಪಾಕಿಸ್ತಾನದೊಂದಿಗಿನ ಕಲಹದ ಮಧ್ಯೆ ಈ ಸಭೆಯನ್ನು ಮಹತ್ವದ್ದಾಗಿ ಪರಿಗಣಿಸಲಾಗುತ್ತಿದೆ. ಶನಿವಾರದಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಅವರು ಪ್ರಧಾನಿಯನ್ನು ಭೇಟಿಯಾಗಿದ್ದರು.
ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ, ವಾಯುಪಡೆಯ ಮುಖ್ಯಸ್ಥರು ಮತ್ತು ಪ್ರಧಾನಿ ಮೋದಿ ನಡುವಿನ ಈ ಸಭೆ ನಡೆಯಿತು. ಆ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಮತ್ತು ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಆ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಕೂಡ ಉಪಸ್ಥಿತರಿದ್ದರು.
ಮತ್ತಷ್ಟು ಓದಿ: ಪಾಕ್ನಿಂದ ಮತ್ತೆ ಕದನವಿರಾಮ ಉಲ್ಲಂಘನೆ, ಪಾಕ್ ರೇಂಜರ್ನ ಬಂಧಿಸಿದ ಭಾರತೀಯ ಸೇನೆ
ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದ ಒಂದು ದಿನದ ನಂತರ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಯಿತು . ಪಹಲ್ಗಾಮ್ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭಯೋತ್ಪಾದನೆಯನ್ನು ಹತ್ತಿಕ್ಕುವ ಭಾರತದ ರಾಷ್ಟ್ರೀಯ ಸಂಕಲ್ಪವನ್ನು ಸರ್ಕಾರ ಪುನರುಚ್ಚರಿಸಿದೆ. ಭಯೋತ್ಪಾದಕ ದಾಳಿಗೆ ಕಾರಣರಾದವರು ಮತ್ತು ಸಂಚುಕೋರರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಸರ್ಕಾರ ಹೇಳಿದೆ.
#WATCH | Delhi: Chief of the Air Staff, Air Chief Marshal, Amar Preet Singh leaves from 7 LKM, Prime Minister Narendra Modi’s residence. pic.twitter.com/lvpnfIOvpD
— ANI (@ANI) May 4, 2025
ಭಾರತದ ಪ್ರತಿಕ್ರಿಯೆಯ ರೀತಿ, ಉದ್ದೇಶಗಳು ಮತ್ತು ಸಮಯವನ್ನು ನಿರ್ಧರಿಸಲು ಸರ್ಕಾರವು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣಾ ಸ್ವಾತಂತ್ರ್ಯವನ್ನು ನೀಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಸರ್ಕಾರ ಸರ್ವಪಕ್ಷ ಸಭೆ ಕರೆದಿತ್ತು.
ಭಯೋತ್ಪಾದಕರ ವಿರುದ್ಧ ಸರ್ಕಾರ ತೆಗೆದುಕೊಳ್ಳುವ ಯಾವುದೇ ಕ್ರಮಕ್ಕೆ ವಿರೋಧ ಪಕ್ಷಗಳು ಸಂಪೂರ್ಣ ಬೆಂಬಲ ನೀಡಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಯಶಸ್ವಿ ಚುನಾವಣೆಗಳು ಮತ್ತು ಆರ್ಥಿಕ ಅಭಿವೃದ್ಧಿಯತ್ತ ಪ್ರಗತಿ ಸಾಧಿಸಿದ ನಂತರ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಪಾಕಿಸ್ತಾನಕ್ಕೆ ಬಲವಾದ ಸಂದೇಶ ರವಾನಿಸಲು ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಇದರಲ್ಲಿ ಸಿಂಧೂ ನದಿ ನೀರು ಒಪ್ಪಂದವನ್ನು ಅಮಾನತುಗೊಳಿಸುವುದೂ ಸೇರಿದೆ. ಪಾಕಿಸ್ತಾನ ತನ್ನ ಕೃತ್ಯಗಳಿಗೆ ತಕ್ಕ ಉತ್ತರ ಪಡೆಯುತ್ತದೆ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ