AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ನಿವೃತ್ತಿ; ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರ್ಪಡೆ

2019ರಲ್ಲಿ ಪಾಕಿಸ್ತಾನದ ಯುದ್ಧವಿಮಾನದೊಂದಿಗಿನ ವೈಮಾನಿಕ ಕಾದಾಟದ ವೇಳೆ ಶೌರ್ಯ ಮೆರೆದಿದ್ದ ಭಾರತೀಯ ವಾಯುಪಡೆಯ ಫೈಟರ್ ಪೈಲಟ್ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರು ಸೇವಾ ಅವಧಿ ಮುಗಿಯುವ ಮುನ್ನವೇ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ. ಅವರು ಕಮರ್ಷಿಯಲ್ ಪೈಲಟ್ ಆಗಿ ಖಾಸಗಿ ವಿಮಾನಯಾನ ಸಂಸ್ಥೆಯೊಂದನ್ನು ಸೇರಲಿದ್ದಾರೆ. 2021ರ ಡಿಸೆಂಬರ್​ನಲ್ಲಿ ಗ್ರೂಪ್ ಕ್ಯಾಪ್ಟನ್ ಹುದ್ದೆಗೆ ಬಡ್ತಿ ಪಡೆದಿದ್ದ ಅಭಿನಂದನ್ ಸುಮಾರು 22 ವರ್ಷಗಳ ಕಾಲ ವಾಯುಪಡೆ ಪೈಲಟ್ ಆಗಿ ಸೇವೆ ಸಲ್ಲಿಸಿದ್ದರು.

ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ನಿವೃತ್ತಿ; ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರ್ಪಡೆ
ಅಭಿನಂದನ್ ವರ್ಧಮಾನ್Image Credit source: x
ಸುಷ್ಮಾ ಚಕ್ರೆ
|

Updated on: Sep 02, 2026 | 11:12 PM

Share

ನವದೆಹಲಿ, ಸೆಪ್ಟೆಂಬರ್ 2: 2019ರ ಬಾಲಾಕೋಟ್ ವೈಮಾನಿಕ ದಾಳಿಯ ನಂತರ ಪಾಕಿಸ್ತಾನದ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿ, ಪಾಕಿಸ್ತಾನದ ಗಡಿಯೊಳಗೆ ಇಳಿದು ಶೌರ್ಯ ಮೆರೆದಿದ್ದ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ತಮ್ಮ ಸೇವಾ ಅವಧಿ ಮುಗಿಯುವ ಮುನ್ನವೇ ವಾಯುಪಡೆಯಿಂದ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ. ಅವರು ಖಾಸಗಿ ವಿಮಾನಯಾನ ಸಂಸ್ಥೆಯೊಂದರಲ್ಲಿ ಕಮರ್ಷಿಯಲ್ ಪೈಲಟ್ ಆಗಿ ಸೇರ್ಪಡೆಗೊಳ್ಳಲು ವಾಯುಪಡೆಯ ಸೇವೆಯಿಂದ ನಿವೃತ್ತರಾಗಿದ್ದಾರೆ.

ಅಭಿನಂದನ್ ವರ್ಧಮಾನ್ ಯಾರು?:

2019ರ ಫೆಬ್ರವರಿ 14ರಂದು ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತವು ಬಾಲಾಕೋಟ್‌ನಲ್ಲಿರುವ ಉಗ್ರರ ನೆಲೆಗಳ ಮೇಲೆ ವಾಯುದಾಳಿ ನಡೆಸಿತ್ತು. ಫೆಬ್ರವರಿ 27ರಂದು ಪಾಕಿಸ್ತಾನದ ಯುದ್ಧವಿಮಾನಗಳು ಭಾರತದ ಗಡಿ ಪ್ರವೇಶಿಸಿದಾಗ, ಅಭಿನಂದನ್ ತಮ್ಮ ‘ಮಿಗ್-21 ಬೈಸನ್’ ವಿಮಾನದ ಮೂಲಕ ಪಾಕಿಸ್ತಾನದ ಅತ್ಯಾಧುನಿಕ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದರು.

ಇದನ್ನೂ ಓದಿ: 2019ರಲ್ಲಿ ವಿಂಗ್ ಕಮಾಂಡರ್ ಅಭಿನಂದನ್​​ರನ್ನು ಸೆರೆ ಹಿಡಿದಿದ್ದ ಪಾಕ್ ಮೇಜರ್ ಮೊಯಿಜ್ ಸಾವು

ಪಾಕಿಸ್ತಾನದಲ್ಲಿ ಸೆರೆಯಾಗಿದ್ದ ಅಭಿನಂದನ್:

ಯುದ್ಧದ ಸಮಯದಲ್ಲಿ ಅಭಿನಂದನ್ ಅವರ ವಿಮಾನಕ್ಕೂ ಹಾನಿಯಾದ ಹಿನ್ನೆಲೆಯಲ್ಲಿ, ಅಭಿನಂದನ್ ಪ್ಯಾರಾಶೂಟ್ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದ ನೆಲಕ್ಕೆ ಇಳಿದು ಪಾಕಿಸ್ತಾನಿ ಸೇನೆಯ ವಶವಾಗಿದ್ದರು. ಶತ್ರುಗಳ ವಶದಲ್ಲಿದ್ದಾಗಲೂ ಅವರು ತೋರಿಸಿದ ಧೈರ್ಯ ಮತ್ತು ಸ್ಥಿರತೆ ದೇಶಾದ್ಯಂತ ಮೆಚ್ಚುಗೆಗೆ ಪಾತ್ರವಾಗಿತ್ತು. ಬಳಿಕ ರಾಜತಾಂತ್ರಿಕ ಒತ್ತಡಕ್ಕೆ ಮಣಿದ ಪಾಕಿಸ್ತಾನ, ಮಾರ್ಚ್ 2ರಂದು ವಾಘಾ ಗಡಿಯ ಮೂಲಕ ಅಭಿನಂದನ್ ಅವರನ್ನು ಭಾರತಕ್ಕೆ ಹಸ್ತಾಂತರಿಸಿತು.

ಇದನ್ನೂ ಓದಿ: ಅಭಿನಂದನ್ ವರ್ಧಮಾನ್ ಅವರನ್ನು ಸೆರೆಹಿಡಿದಿದ್ದ ಪಾಕಿಸ್ತಾನದ ಮೇಜರ್ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭಾಗಿ

ಅಪಾರ ಶೌರ್ಯ ಮತ್ತು ದೇಶಭಕ್ತಿಯನ್ನು ಪ್ರದರ್ಶಿಸಿದ್ದಕ್ಕಾಗಿ ಅಭಿನಂದನ್ ವರ್ಧಮಾನ್ ಅವರಿಗೆ ಭಾರತದ ಮೂರನೇ ಅತ್ಯುನ್ನತ ಮಿಲಿಟರಿ ಗೌರವವಾದ ‘ವೀರ್ ಚಕ್ರ’ ನೀಡಿ ಗೌರವಿಸಲಾಗಿತ್ತು. 2004ರ ಜೂನ್ 19ರಂದು ಭಾರತೀಯ ವಾಯುಪಡೆಗೆ ಫೈಟರ್ ಪೈಲಟ್ ಆಗಿ ನಿಯೋಜನೆಗೊಂಡಿದ್ದ ಅಭಿನಂದನ್, ಡಿಸೆಂಬರ್ 2021ರಲ್ಲಿ ‘ವಲ್ವಿಂಗ್ ಕಮಾಂಡರ್’ ಹುದ್ದೆಯಿಂದ ‘ಗ್ರೂಪ್ ಕ್ಯಾಪ್ಟನ್’ ಆಗಿ ಬಡ್ತಿ ಪಡೆದಿದ್ದರು. 22 ವರ್ಷಗಳಿಗೂ ಹೆಚ್ಚು ಕಾಲ ದೇಶಕ್ಕೆ ಸಲ್ಲಿಸಿದ ಸೇವೆಗೆ ವಿದಾಯ ಹೇಳಿ ಅವರು ಕಮರ್ಷಿಯಲ್ ಪೈಲಟ್ ಆಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್