AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್​ ತರಬೇತಿ ಕೇಂದ್ರದಲ್ಲಿ ಮೂವರು ವಿದ್ಯಾರ್ಥಿಗಳ ಸಾವು, ಬುಲ್ಡೋಜರ್ ಕಾರ್ಯಾಚರಣೆ ಶುರು

ದೆಹಲಿಯ ಐಎಎಸ್​ ತರಬೇತಿ ಕೇಂದ್ರದಲ್ಲಿ ಮೂವರು ಐಎಎಸ್ ಆಕಾಂಕ್ಷಿಗಳು ಸಾವನ್ನಪ್ಪಿದ್ದು, ಇಡೀಗ ದೆಹಲಿ ಮಹಾನಗರ ಪಾಲಿಕೆಯು ಅಕ್ರಮ ಕಟ್ಟಡದ ವಿರುದ್ಧ ಬುಲ್ಡೋಜರ್ ಕ್ರಮಕ್ಕೆ ಮುಂದಾಗಿದೆ.

ಐಎಎಸ್​ ತರಬೇತಿ ಕೇಂದ್ರದಲ್ಲಿ ಮೂವರು ವಿದ್ಯಾರ್ಥಿಗಳ ಸಾವು, ಬುಲ್ಡೋಜರ್ ಕಾರ್ಯಾಚರಣೆ ಶುರು
ಬುಲ್ಡೋಜರ್Image Credit source: India TV
ನಯನಾ ರಾಜೀವ್
|

Updated on: Jul 29, 2024 | 2:15 PM

Share

ದೆಹಲಿಯ ಓಲ್ಡ್​ ರಾಜಿಂದರ್ ನಗರದಲ್ಲಿರುವ ರಾವು ಅವರ ಐಎಎಸ್​ ಕೋಚಿಂಗ್ ಸೆಂಟರ್​ನ ನೆಲಮಾಳಿಗೆಯಲ್ಲಿ ಪ್ರವಾಹದಿಂದಾಗಿ ಮೂವರು ಐಎಎಸ್​ ಆಕಾಂಕ್ಷಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇನ್ನೂ ಐವರನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರರಕಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಕಟ್ಟಡದ ಮಾಲೀಕ ಅಭಿಷೇಕ್ ಗುಪ್ತಾ ಹಾಗೂ ಕೋಚಿಂಗ್ ಸೆಂಟರ್​ನ ಸಂಯೋಜಕ ದೇಶಪಾಲ್​ ಸಿಂಗ್ ಅವರನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ರಾವು ಅವರ ಐಎಎಸ್ ಸ್ಟಡಿ ಸೆಂಟರ್ ಬಳಿಯ ಅತಿಕ್ರಮಣಗಳನ್ನು ತೆಗೆದುಹಾಕಲು ಬುಲ್ಡೋಜರ್ ಕ್ರಮ ಪ್ರಾರಂಭವಾಗಿದೆ.

ಕಾರ್ಯಾಚರಣೆಗೆ ದೆಹಲಿ ಪೊಲೀಸರು ಈಗಾಗಲೇ ಅನುಮತಿ ನೀಡಿದ್ದರು. ಈ ಘಟನೆಯಲ್ಲಿ ಯಾರೇ ತಪ್ಪು ಮಾಡಿದರೂ ಬಿಡುವುದಿಲ್ಲ ಎಂದು ಉಪ ಪೊಲೀಸ್ ಆಯುಕ್ತ ಎಂ.ಹರ್ಷವರ್ಧನ್ ಹೇಳಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿದ್ದೇವೆ ಮತ್ತು ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ.

ಕಟ್ಟಡದ ವಿವಿಧ ಮಹಡಿಗಳನ್ನು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರು ಕಟ್ಟಡದ ರಚನೆ ಮತ್ತು ಪ್ರದೇಶದ ಒಳಚರಂಡಿ ವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ಸ್ಥಳೀಯ ಪುರಸಭೆಯ ಪಾತ್ರವನ್ನು ಪರಿಶೀಲಿಸುತ್ತಿದ್ದಾರೆ.

ದೆಹಲಿ ಅಗ್ನಿಶಾಮಕ ಸೇವೆಯು ಕಟ್ಟಡ ಮತ್ತು ಅದರ ನೆಲಮಾಳಿಗೆಯನ್ನು ಪರಿಶೀಲಿಸುತ್ತಿದೆ, ಇದನ್ನು ಅಕ್ರಮವಾಗಿ ಗ್ರಂಥಾಲಯವಾಗಿ ಬಳಸಲಾಗುತ್ತಿತ್ತು. ಈ ಪ್ರದೇಶದ ಒಳಚರಂಡಿ ವ್ಯವಸ್ಥೆ ಕುರಿತು ಪೊಲೀಸರು ನಗರಸಭೆ ಅಧಿಕಾರಿಗಳನ್ನು ಪ್ರಶ್ನಿಸಿ ಮಾಹಿತಿ ಕೋರಿ ನೋಟಿಸ್ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವ್ಯವಸ್ಥೆಯನ್ನು ನಿರ್ವಹಿಸುವ ಹೊಣೆ ಹೊತ್ತಿರುವವರನ್ನು ಎಫ್‌ಐಆರ್‌ನಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ.

ಕಾರ್ಯಾಚರಣೆ ನಡೆಸಲು ದೆಹಲಿ ಪೊಲೀಸರು ಪೂರ್ವಾನುಮತಿ ನೀಡಿದ ನಂತರ ಬುಲ್ಡೋಜರ್‌ಗಳು ಕೋಚಿಂಗ್ ಸೆಂಟರ್ ಬಳಿ ಅತಿಕ್ರಮಣಗಳನ್ನು ತೆಗೆದುಹಾಕುತ್ತಿವೆ. ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದು, ಕೋಚಿಂಗ್ ಸೆಂಟರ್‌ನಲ್ಲಿ ಸುರಕ್ಷತೆ ಉಲ್ಲಂಘನೆ ಮತ್ತು ಅಕ್ರಮ ಬೇಸ್‌ಮೆಂಟ್ ಕಾರ್ಯಾಚರಣೆಗಳು ಸಾವಿಗೆ ಕಾರಣವಾಗಿವೆ.

ಮತ್ತಷ್ಟು ಓದಿ: ದೆಹಲಿಯ ಐಎಎಸ್​ ತರಬೇತಿ​ ಕೇಂದ್ರಕ್ಕೆ ನುಗ್ಗಿದ ನೀರು, ಮೂವರು ವಿದ್ಯಾರ್ಥಿಗಳು ಸಾವು

ನೆಲಮಾಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ದೆಹಲಿ ಕೋಚಿಂಗ್ ಹಬ್‌ಗೆ ನಾಗರಿಕ ಮಂಡಳಿಯ ತಂಡ ಭೇಟಿ ನೀಡಿದೆ ಎಂದು ದೆಹಲಿ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಕಾರ್ಯಾಚರಣೆಯ ಸಮಯದಲ್ಲಿ ಅಂತಹ ಹದಿಮೂರು ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚಲಾಯಿತು .

ಹೆಚ್ಚುತ್ತಿರುವ ಸಾರ್ವಜನಿಕ ಆಕ್ರೋಶದ ನಡುವೆ, ಓಲ್ಡ್ ರಾಜೇಂದ್ರ ನಗರ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿ ಕೋಚಿಂಗ್ ಸೆಂಟರ್‌ನ ಹೊರಗೆ ಪ್ರತಿಭಟನೆ ನಡೆಸಿದರು.

ಶನಿವಾರ ಸಂಜೆ ಭಾರೀ ಮಳೆಯ ನಂತರ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿ ನೀರು ನುಗ್ಗಿದಾಗ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೇರಿದಂತೆ 35 ಕ್ಕೂ ಹೆಚ್ಚು ಮಂದಿ ಸಿಕ್ಕಿಬಿದ್ದಿದ್ದರು. ಈ ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು-ಯುಪಿಯ ಶ್ರೇಯಾ ಯಾದವ್, ತೆಲಂಗಾಣದ ತಾನ್ಯಾ ಸೋನಿ ಮತ್ತು ಕೇರಳದ ನವೀನ್ ಡಾಲ್ವಿನ್ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More