ದೆಹಲಿಯ ಓಲ್ಡ್ ರಾಜಿಂದರ್ ನಗರದಲ್ಲಿರುವ ರಾವು ಅವರ ಐಎಎಸ್ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿ ಪ್ರವಾಹದಿಂದಾಗಿ ಮೂವರು ಐಎಎಸ್ ಆಕಾಂಕ್ಷಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇನ್ನೂ ಐವರನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರರಕಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ಕಟ್ಟಡದ ಮಾಲೀಕ ಅಭಿಷೇಕ್ ಗುಪ್ತಾ ಹಾಗೂ ಕೋಚಿಂಗ್ ಸೆಂಟರ್‌ನ ಸಂಯೋಜಕ ದೇಶಪಾಲ್ ಸಿಂಗ್ ಅವರನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ರಾವು ಅವರ ಐಎಎಸ್ ಸ್ಟಡಿ ಸೆಂಟರ್ ಬಳಿಯ ಅತಿಕ್ರಮಣಗಳನ್ನು ತೆಗೆದುಹಾಕಲು ಬುಲ್ಡೋಜರ್ ಕ್ರಮ ಪ್ರಾರಂಭವಾಗಿದೆ.
ಕಾರ್ಯಾಚರಣೆಗೆ ದೆಹಲಿ ಪೊಲೀಸರು ಈಗಾಗಲೇ ಅನುಮತಿ ನೀಡಿದ್ದರು. ಈ ಘಟನೆಯಲ್ಲಿ ಯಾರೇ ತಪ್ಪು ಮಾಡಿದರೂ ಬಿಡುವುದಿಲ್ಲ ಎಂದು ಉಪ ಪೊಲೀಸ್ ಆಯುಕ್ತ ಎಂ.ಹರ್ಷವರ್ಧನ್ ಹೇಳಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿದ್ದೇವೆ ಮತ್ತು ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ.
ಕಟ್ಟಡದ ವಿವಿಧ ಮಹಡಿಗಳನ್ನು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರು ಕಟ್ಟಡದ ರಚನೆ ಮತ್ತು ಪ್ರದೇಶದ ಒಳಚರಂಡಿ ವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ಸ್ಥಳೀಯ ಪುರಸಭೆಯ ಪಾತ್ರವನ್ನು ಪರಿಶೀಲಿಸುತ್ತಿದ್ದಾರೆ.
ದೆಹಲಿ ಅಗ್ನಿಶಾಮಕ ಸೇವೆಯು ಕಟ್ಟಡ ಮತ್ತು ಅದರ ನೆಲಮಾಳಿಗೆಯನ್ನು ಪರಿಶೀಲಿಸುತ್ತಿದೆ, ಇದನ್ನು ಅಕ್ರಮವಾಗಿ ಗ್ರಂಥಾಲಯವಾಗಿ ಬಳಸಲಾಗುತ್ತಿತ್ತು. ಈ ಪ್ರದೇಶದ ಒಳಚರಂಡಿ ವ್ಯವಸ್ಥೆ ಕುರಿತು ಪೊಲೀಸರು ನಗರಸಭೆ ಅಧಿಕಾರಿಗಳನ್ನು ಪ್ರಶ್ನಿಸಿ ಮಾಹಿತಿ ಕೋರಿ ನೋಟಿಸ್ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವ್ಯವಸ್ಥೆಯನ್ನು ನಿರ್ವಹಿಸುವ ಹೊಣೆ ಹೊತ್ತಿರುವವರನ್ನು ಎಫ್‌ಐಆರ್‌ನಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ.
ಕಾರ್ಯಾಚರಣೆ ನಡೆಸಲು ದೆಹಲಿ ಪೊಲೀಸರು ಪೂರ್ವಾನುಮತಿ ನೀಡಿದ ನಂತರ ಬುಲ್ಡೋಜರ್‌ಗಳು ಕೋಚಿಂಗ್ ಸೆಂಟರ್ ಬಳಿ ಅತಿಕ್ರಮಣಗಳನ್ನು ತೆಗೆದುಹಾಕುತ್ತಿವೆ. ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದು, ಕೋಚಿಂಗ್ ಸೆಂಟರ್‌ನಲ್ಲಿ ಸುರಕ್ಷತೆ ಉಲ್ಲಂಘನೆ ಮತ್ತು ಅಕ್ರಮ ಬೇಸ್‌ಮೆಂಟ್ ಕಾರ್ಯಾಚರಣೆಗಳು ಸಾವಿಗೆ ಕಾರಣವಾಗಿವೆ.
ಮತ್ತಷ್ಟು ಓದಿ: ದೆಹಲಿಯ ಐಎಎಸ್ ತರಬೇತಿ ಕೇಂದ್ರಕ್ಕೆ ನುಗ್ಗಿದ ನೀರು, ಮೂವರು ವಿದ್ಯಾರ್ಥಿಗಳು ಸಾವು
ನೆಲಮಾಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ದೆಹಲಿ ಕೋಚಿಂಗ್ ಹಬ್‌ಗೆ ನಾಗರಿಕ ಮಂಡಳಿಯ ತಂಡ ಭೇಟಿ ನೀಡಿದೆ ಎಂದು ದೆಹಲಿ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಕಾರ್ಯಾಚರಣೆಯ ಸಮಯದಲ್ಲಿ ಅಂತಹ ಹದಿಮೂರು ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚಲಾಯಿತು .
#WATCH | Action against alleged encroachment being taken in Delhi’s Old Rajinder Nagar, where 3 students died due to drowning at an IAS coaching institute on 27th July; Officials from local administration and Police present pic.twitter.com/t0Efn6KL1p
— ANI (@ANI) July 29, 2024
ಹೆಚ್ಚುತ್ತಿರುವ ಸಾರ್ವಜನಿಕ ಆಕ್ರೋಶದ ನಡುವೆ, ಓಲ್ಡ್ ರಾಜೇಂದ್ರ ನಗರ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿ ಕೋಚಿಂಗ್ ಸೆಂಟರ್‌ನ ಹೊರಗೆ ಪ್ರತಿಭಟನೆ ನಡೆಸಿದರು.
ಶನಿವಾರ ಸಂಜೆ ಭಾರೀ ಮಳೆಯ ನಂತರ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿ ನೀರು ನುಗ್ಗಿದಾಗ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೇರಿದಂತೆ 35 ಕ್ಕೂ ಹೆಚ್ಚು ಮಂದಿ ಸಿಕ್ಕಿಬಿದ್ದಿದ್ದರು. ಈ ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು-ಯುಪಿಯ ಶ್ರೇಯಾ ಯಾದವ್, ತೆಲಂಗಾಣದ ತಾನ್ಯಾ ಸೋನಿ ಮತ್ತು ಕೇರಳದ ನವೀನ್ ಡಾಲ್ವಿನ್ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ