AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS ಕೋಚಿಂಗ್ ಸೆಂಟರ್​​ನಲ್ಲಿ ಆಕಾಂಕ್ಷಿಗಳ ಸಾವು ಪ್ರಕರಣ; ಸಮಸ್ಯೆ ಪರಿಹಾರಕ್ಕೆ ಸಮಿತಿ ರಚಿಸಿದ ದೆಹಲಿ ಎಲ್​​ಜಿ

ಕೋಚಿಂಗ್ ಸಂಸ್ಥೆಗಳನ್ನು ವಿವಿಧ ಸ್ಥಳಗಳಿಂದ ಉತ್ತಮ ಯೋಜಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಸಮಿತಿಯು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುತ್ತದೆ. ಮೂವರು ಐಎಎಸ್ ಆಕಾಂಕ್ಷಿಗಳು ತಮ್ಮ ಕೋಚಿಂಗ್ ಸೆಂಟರ್ ನ ನೆಲಮಾಳಿಗೆಯಲ್ಲಿ ಮುಳುಗಿ ಸಾವಿಗೀಡಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ

IAS ಕೋಚಿಂಗ್ ಸೆಂಟರ್​​ನಲ್ಲಿ ಆಕಾಂಕ್ಷಿಗಳ ಸಾವು ಪ್ರಕರಣ; ಸಮಸ್ಯೆ ಪರಿಹಾರಕ್ಕೆ ಸಮಿತಿ ರಚಿಸಿದ ದೆಹಲಿ ಎಲ್​​ಜಿ
ವಿದ್ಯಾರ್ಥಿಗಳ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
|

Updated on: Jul 31, 2024 | 8:27 PM

Share

ದೆಹಲಿ ಜುಲೈ 31: ದೆಹಲಿಯ ಲೆಫ್ಟಿನೆಂಟ್ ಗವರ್ನರ್ (Lieutenant Governor) ವಿನಯ್ ಕುಮಾರ್ ಸಕ್ಸೇನಾ (Vinai Kumar Saxena) ಅವರು ಕೋಚಿಂಗ್ ಸೆಂಟರ್‌ಗಳ (Coaching centre) ನಿಯಂತ್ರಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರ ರಾಜಧಾನಿಯ ಮುಖ್ಯ ಕಾರ್ಯದರ್ಶಿ ಅಡಿಯಲ್ಲಿ ಸಮಿತಿಯನ್ನು ರಚಿಸಿದ್ದಾರೆ. ಕೋಚಿಂಗ್ ಸಂಸ್ಥೆಗಳನ್ನು ವಿವಿಧ ಸ್ಥಳಗಳಿಂದ ಉತ್ತಮ ಯೋಜಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಸಮಿತಿಯು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುತ್ತದೆ. ಮೂವರು ಐಎಎಸ್ ಆಕಾಂಕ್ಷಿಗಳು ತಮ್ಮ ಕೋಚಿಂಗ್ ಸೆಂಟರ್​​ನ ನೆಲಮಾಳಿಗೆಯಲ್ಲಿ ಮುಳುಗಿ ಸಾವಿಗೀಡಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಏತನ್ಮಧ್ಯೆ, ದೆಹಲಿ ಶಿಕ್ಷಣ ಸಚಿವೆ ಅತಿಶಿ, ಓಲ್ಡ್ ರಾಜಿಂದರ್ ನಗರದಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ್ದು, ಕೋಚಿಂಗ್ ಸಂಸ್ಥೆಗಳನ್ನು ನಿಯಂತ್ರಿಸಲು ಕಾನೂನನ್ನು ರಚಿಸುವ ಸಮಿತಿಯ ಭಾಗವಾಗಿರುವ ಅವರ 10 ಪ್ರತಿನಿಧಿಗಳ ಹೆಸರನ್ನು ನೀಡುವಂತೆ ಒತ್ತಾಯಿಸಿದರು. ಓಲ್ಡ್ ರಾಜಿಂದರ್ ನಗರದಲ್ಲಿ ರಾವೂಸ್  ಐಎಎಸ್ ಕೋಚಿಂಗ್‌ನ ನೆಲಮಾಳಿಗೆಯಲ್ಲಿ ಮೂವರು ಆಕಾಂಕ್ಷಿಗಳು ಸಾವಿಗೀಡಾದ ನಂತರ ಪ್ರತಿಭಟನೆ ಭುಗಿಲೆದ್ದಿತ್ತು.

ಅತಿಶಿ ಅವರು ಬಂದಾಗ ವಿದ್ಯಾರ್ಥಿಗಳು ‘ಗೋ ಬ್ಯಾಕ್’ ಮತ್ತು ‘ನಮಗೆ ನ್ಯಾಯ ಬೇಕು’ ಎಂಬ ಘೋಷಣೆ ಕೂಗಿದ್ದಾರೆ. ಆದರೆ ಪ್ರತಿಭಟನಾಕಾರರ ಜತೆ ಕುಳಿತು ಅವರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬೆಂಬಲ ನೀಡುವುದಾಗಿ ಅತಿಶಿ ಭರವಸೆ ನೀಡಿದ್ದಾರೆ.

“ನಮ್ಮೊಂದಿಗೆ ಕುಳಿತು ಅಂತಹ ಸಂಸ್ಥೆಗಳ ನಿಯಂತ್ರಣಕ್ಕಾಗಿ ಕಾನೂನು ರೂಪಿಸಲು ನಮಗೆ ಸಹಾಯ ಮಾಡುವ 10 ವಿದ್ಯಾರ್ಥಿಗಳ ಹೆಸರನ್ನು ನಮಗೆ ನೀಡಿ. ಬ್ರೋಕರೇಜ್, ಬಾಡಿಗೆ ಮತ್ತು ವಿದ್ಯುತ್ ಗೆ ಸಂಬಂಧಿಸಿದ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಪರಿಗಣಿಸಲಾಗುವುದು. ನೀವು ನಮಗೆ 10 ಹೆಸರುಗಳನ್ನು ನೀಡಿದ ನಂತರ, ನಾವು ನಿಮ್ಮೊಂದಿಗೆ ಹಂಚಿಕೊಳ್ಳುವ ಕಾನೂನಿನ ಕರಡನ್ನು ತಯಾರಿಸಲು ಸಮಿತಿಯು ಒಂದು ತಿಂಗಳು ತೆಗೆದುಕೊಳ್ಳುತ್ತದೆ, ”ಎಂದು ಅತಿಶಿ ಹೇಳಿದ್ದಾರೆ.

ಏತನ್ಮಧ್ಯೆ, ದೆಹಲಿ ಸರ್ಕಾರವು ಎಲ್ಲಾ ಶಾಲೆಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ: ವಯನಾಡ್ ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 238; ರಕ್ಷಣಾ ಕಾರ್ಯಕ್ಕೆ ಮಳೆ ಅಡ್ಡಿ

“ಶಾಲಾ ಕಟ್ಟಡಗಳಲ್ಲಿ ಯಾವುದಾದರೂ ನೆಲಮಾಳಿಗೆಗಳನ್ನು ಮಾಸ್ಟರ್ ಪ್ಲಾನ್‌ನ ನಿಬಂಧನೆಗಳ ಪ್ರಕಾರ ಮತ್ತು ಮಂಜೂರಾದ ಯೋಜನೆಯ ಪ್ರಕಾರ ಅನುಮತಿಸುವ ಚಟುವಟಿಕೆಗಳಿಗೆ ಮಾತ್ರ ಬಳಸಬೇಕು. ಶಾಲಾ ಕಟ್ಟಡಗಳ ಎಲ್ಲಾ ಗೇಟ್‌ಗಳು ಸರಿಯಾಗಿದ್ದು ಪ್ರವೇಶ ಮತ್ತು ನಿರ್ಗಮನಕ್ಕಾಗಿ ತೆರೆದಿರುತ್ತವೆ. ಎಲ್ಲಾ ಕಾರಿಡಾರ್‌ಗಳು ಎಲ್ಲಾ ಸಮಯದಲ್ಲೂ ಅಡೆತಡೆಗಳಿಂದ ಮುಕ್ತವಾಗಿರಬೇಕು. ನೀರಿನ ಶೇಖರಣೆ ಮತ್ತು ಮೆಟ್ಟಿಲುಗಳನ್ನು ನಿಯಮಿತವಾಗಿ ಪರಿಶೀಲಿಸಬೇಕು. ಎಲೆಕ್ಟ್ರಿಕಲ್ ವೈರಿಂಗ್‌ಗಳು ಮತ್ತು ಉಪಕರಣಗಳು ಸೇರಿದಂತೆ ಫಿಟ್ಟಿಂಗ್‌ಗಳನ್ನು ಪರಿಶೀಲಿಸಬೇಕು ಮತ್ತು ಯಾವುದೇ ರೀತಿಯ ಅಹಿತಕರ ಘಟನೆಗಳನ್ನು ತಪ್ಪಿಸಲು ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಅನುಸರಿಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ