AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS ಅಧಿಕಾರಿ ಮೇಲೆ ಪತಿಯ ದರ್ಪ: ಬಾಗಿಲು ಮುರಿದವ.. ಕೊನೆಗೆ ಜೈಲುಪಾಲಾದ

ಲಕ್ನೋ: ಪತ್ನಿಯ ಮೇಲೆ ಹಲ್ಲೆ ಹಾಗೂ ಮಾವನ ಮನೆಗೆ ಬಲವಂತವಾಗಿ ನುಗ್ಗಲು ಯತ್ನಿಸಿರುವ ಆರೋಪದಡಿ ಹರಿಯಾಣ ರಾಜ್ಯದ ಗುರುಗ್ರಾಮ್​ನಲ್ಲಿ ಪ್ರಾದೇಶಿಕ ಕಾರ್ಮಿಕ ಇಲಾಖೆಯ ಅಧಿಕಾರಿಯಾಗಿರುವ ರಾಜೀವ್ ನಯನ್​ನನ್ನು ಪೊಲೀಸರು ಬಂಧಿಸಿದ್ದಾರೆ. 2013 ರ ಬ್ಯಾಚ್​ನ IAS ಅಧಿಕಾರಿ ಶೈಲಜಾ ಶರ್ಮಾ ಮೇಲೆ ಪತಿ ರಾಜೀವ್ ನಯನ್ ಹಲ್ಲೆ ಮಾಡಿರುವ ಆರೋಪ ಮತ್ತು ಶನಿವಾರ ತಡರಾತ್ರಿ ಉತ್ತರ ಪ್ರದೇಶದ ಮುಜಫರ್​ನಗರದಲ್ಲಿರುವ ತಮ್ಮ ಮಾವನ ಮನೆಗೆ ಬಲವಂತವಾಗಿ ಪ್ರವೇಶಿಸಿರುವ ಆರೋಪದ ಮೇಲೆ ಅರೆಸ್ಟ್​ ಆಗಿದ್ದಾರೆ. ಶೈಲಜಾ ಶರ್ಮಾ ಸದ್ಯ ಉತ್ತರ […]

IAS ಅಧಿಕಾರಿ ಮೇಲೆ ಪತಿಯ ದರ್ಪ: ಬಾಗಿಲು ಮುರಿದವ.. ಕೊನೆಗೆ ಜೈಲುಪಾಲಾದ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Aug 04, 2020 | 4:05 PM

Share

ಲಕ್ನೋ: ಪತ್ನಿಯ ಮೇಲೆ ಹಲ್ಲೆ ಹಾಗೂ ಮಾವನ ಮನೆಗೆ ಬಲವಂತವಾಗಿ ನುಗ್ಗಲು ಯತ್ನಿಸಿರುವ ಆರೋಪದಡಿ ಹರಿಯಾಣ ರಾಜ್ಯದ ಗುರುಗ್ರಾಮ್​ನಲ್ಲಿ ಪ್ರಾದೇಶಿಕ ಕಾರ್ಮಿಕ ಇಲಾಖೆಯ ಅಧಿಕಾರಿಯಾಗಿರುವ ರಾಜೀವ್ ನಯನ್​ನನ್ನು ಪೊಲೀಸರು ಬಂಧಿಸಿದ್ದಾರೆ.

2013 ರ ಬ್ಯಾಚ್​ನ IAS ಅಧಿಕಾರಿ ಶೈಲಜಾ ಶರ್ಮಾ ಮೇಲೆ ಪತಿ ರಾಜೀವ್ ನಯನ್ ಹಲ್ಲೆ ಮಾಡಿರುವ ಆರೋಪ ಮತ್ತು ಶನಿವಾರ ತಡರಾತ್ರಿ ಉತ್ತರ ಪ್ರದೇಶದ ಮುಜಫರ್​ನಗರದಲ್ಲಿರುವ ತಮ್ಮ ಮಾವನ ಮನೆಗೆ ಬಲವಂತವಾಗಿ ಪ್ರವೇಶಿಸಿರುವ ಆರೋಪದ ಮೇಲೆ ಅರೆಸ್ಟ್​ ಆಗಿದ್ದಾರೆ. ಶೈಲಜಾ ಶರ್ಮಾ ಸದ್ಯ ಉತ್ತರ ಪ್ರದೇಶದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಶರ್ಮಾ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಕಳೆದ ಶುಕ್ರವಾರ ತನ್ನ ತವರು ಮನೆಗೆ ಬಂದಿದ್ದರು. ಆಕೆ ನೀಡಿರುವ ದೂರಿನ ಪ್ರಕಾರ, ಪತಿ ರಾಜೀವ್ ನಯನ್ ತನ್ನ ಮಾವನ ಮನೆಗೆ ಬಂದು ಬಾಗಿಲು ತೆರೆಯುವ ಮುನ್ನವೇ ಅದನ್ನ ಮುರಿದು ಹಲ್ಲೆಗೆ ಯತ್ನಿಸಿದ್ದಾರೆ. ಪತ್ನಿಯನ್ನು ರಕ್ಷಿಸಲು ಬಂದ ಆಕೆಯ ಕುಟುಂಬ ಸದಸ್ಯರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಎಫ್ಐಆರ್​ನಲ್ಲಿ ಉಲ್ಲೇಖಿಸಲಾಗಿದೆ.

ಶರ್ಮಾ ನೀಡಿರುವ ದೂರಿನ್ವಯ ಪೊಲೀಸರು ನಯನ್ ವಿರುದ್ಧ ದೂರು ದಾಖಲಿಸಿಕೊಂಡಿದ್ದರು. ನಯನ್​ರನ್ನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಇದೀಗ ಜೈಲಿಗೆ ಕಳುಹಿಸಲಾಗಿದೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ