ಮುಸಲ್ಮಾನರ ಹತ್ಯೆಯ ಬಗ್ಗೆಯೂ ಸಿನಿಮಾ ಮಾಡಬೇಕು ಎಂದು ಟ್ವೀಟ್ ಮಾಡಿದ ಮಧ್ಯಪ್ರದೇಶದ ಐಎಎಸ್ ಅಧಿಕಾರಿ

ಏಳು  ಪುಸ್ತಕಗಳ ಲೇಖಕರಾಗಿರುವ ಖಾನ್ ಅವರು "ವಿವಿಧ ಸಂದರ್ಭಗಳಲ್ಲಿ ಮುಸ್ಲಿಮರ ಹತ್ಯಾಕಾಂಡ" ಕುರಿತು ಪುಸ್ತಕವನ್ನು ಬರೆಯುವ ಬಗ್ಗೆ ಯೋಚಿಸುತ್ತಿರುವುದಾಗಿ ಹೇಳಿದ್ದಾರೆ, ಇದರಿಂದಾಗಿ "ಅಲ್ಪಸಂಖ್ಯಾತರ ನೋವನ್ನು ಭಾರತೀಯರ ಮುಂದೆ ತರಬಹುದು" ಎಂದು ಅವರು ಹೇಳಿದ್ದಾರೆ.

ಮುಸಲ್ಮಾನರ ಹತ್ಯೆಯ ಬಗ್ಗೆಯೂ  ಸಿನಿಮಾ ಮಾಡಬೇಕು ಎಂದು ಟ್ವೀಟ್ ಮಾಡಿದ ಮಧ್ಯಪ್ರದೇಶದ ಐಎಎಸ್ ಅಧಿಕಾರಿ
ನಿಯಾಜ್ ಖಾನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 21, 2022 | 9:07 PM

ಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು “ಹಲವು ರಾಜ್ಯಗಳಾದ್ಯಂತ ನಡೆದ ಮುಸ್ಲಿಮರ ಹತ್ಯೆ” ಕುರಿತು ಸಿನಿಮಾ ನಿರ್ಮಿಸಿ ಎಂದು ದಿ ಕಾಶ್ಮೀರ್ ಫೈಲ್ಸ್ (Kashmir Files) ಸಿನಿಮಾ ನಿರ್ಮಾಪಕರಿಗೆ ಕರೆ ನೀಡಿದ ಟ್ವೀಟ್ ಗಳಿಂದ ಈಗ ಸಂಕಷ್ಟಕ್ಕೊಳಗಾಗಿದ್ದಾರೆ. ಪ್ರಸ್ತುತ ರಾಜ್ಯ ಲೋಕೋಪಯೋಗಿ ಇಲಾಖೆ (PWD) ನಲ್ಲಿ ಉಪ ಕಾರ್ಯದರ್ಶಿಯಾಗಿರುವ ನಿಯಾಜ್ ಖಾನ್ (Niyaz Khan) ಕಳೆದ ವಾರ ಟ್ವೀಟ್ ಮಾಡಿದ್ದು ಅದು ಹೀಗಿದೆ- ಕಾಶ್ಮೀರ್ ಫೈಲ್ಸ್ ಬ್ರಾಹ್ಮಣರ ನೋವನ್ನು ತೋರಿಸುತ್ತದೆ. ಕಾಶ್ಮೀರದಲ್ಲಿ ಎಲ್ಲ ಗೌರವಗಳೊಂದಿಗೆ ಸುರಕ್ಷಿತವಾಗಿ ಬದುಕಲು ಅವರಿಗೆ ಅವಕಾಶ ನೀಡಬೇಕು. ಹಲವಾರು ರಾಜ್ಯಗಳಾದ್ಯಂತ ಹೆಚ್ಚಿನ ಸಂಖ್ಯೆಯ ಮುಸ್ಲಿಮರ ಹತ್ಯೆಗಳನ್ನು ತೋರಿಸಲು ನಿರ್ಮಾಪಕರು ಸಿನಿಮಾವೊಂದನ್ನು ಮಾಡಬೇಕು ಎಂದಿದ್ದಾರೆ. ಭಾನುವಾರ ಮಾಡಿದ ಟ್ವೀಟ್ ನಲ್ಲಿ ಖಾನ್, ಚಿತ್ರವು 150 ಕೋಟಿ ರೂಪಾಯಿಗಳ ಆದಾಯದ ಗಡಿಯನ್ನು ಮುಟ್ಟಿದ್ದಕ್ಕಾಗಿ ಚಿತ್ರದ ನಿರ್ಮಾಪಕರನ್ನು ಅಭಿನಂದಿಸಿದ್ದಾರೆ. ಜನರು “ಕಾಶ್ಮೀರಿ ಬ್ರಾಹ್ಮಣರ ಭಾವನೆಗಳಿಗೆ ಹೆಚ್ಚಿನ ಗೌರವವನ್ನು ನೀಡಿರುವುದರಿಂದ” ಚಲನಚಿತ್ರ ನಿರ್ಮಾಪಕರು “ಎಲ್ಲಾ ಗಳಿಕೆಯನ್ನು ಬ್ರಾಹ್ಮಣ ಮಕ್ಕಳ ಶಿಕ್ಷಣಕ್ಕೆ ವರ್ಗಾಯಿಸಬೇಕು” ಮತ್ತು ಕಾಶ್ಮೀರದಲ್ಲಿ ಅವರಿಗೆ ಮನೆಗಳನ್ನು ನಿರ್ಮಿಸಬೇಕು ಎಂದು ಹೇಳಿದ್ದಾರೆ. ಪ್ರತಿಕ್ರಿಯೆಯಾಗಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಮಾರ್ಚ್ 25 ರಂದು ಭೋಪಾಲ್‌ನಲ್ಲಿ ಭೇಟಿಯಾಗುವಂತೆ ಖಾನ್ ಅವರಿಗೆ ಹೇಳಿದ್ದಾರೆ. ನಾವು ಹೇಗೆ ಸಹಾಯ ಮಾಡಬಹುದು ಮತ್ತು ನಿಮ್ಮ ಪುಸ್ತಕಗಳ ರಾಯಧನ ಮತ್ತು ಐಎಎಸ್ ಅಧಿಕಾರಿಯಾಗಿ ನೀವು ಹೇಗೆ ಸಹಾಯ ಮಾಡಬಹುದು ಎಂಬುದನ್ನು ಭೇಟಿ ಮಾಡಿ ವಿಚಾರ ವಿನಿಮಯ ಮಾಡಿಕೊಳ್ಳೋಣ ಎಂದು ಅಗ್ನಿಹೋತ್ರಿ ಟ್ವೀಟ್ ಮಾಡಿದ್ದಾರೆ.

ಏಳು  ಪುಸ್ತಕಗಳ ಲೇಖಕರಾಗಿರುವ ಖಾನ್ ಅವರು “ವಿವಿಧ ಸಂದರ್ಭಗಳಲ್ಲಿ ಮುಸ್ಲಿಮರ ಹತ್ಯಾಕಾಂಡ” ಕುರಿತು ಪುಸ್ತಕವನ್ನು ಬರೆಯುವ ಬಗ್ಗೆ ಯೋಚಿಸುತ್ತಿರುವುದಾಗಿ ಹೇಳಿದ್ದಾರೆ, ಇದರಿಂದಾಗಿ “ಅಲ್ಪಸಂಖ್ಯಾತರ ನೋವನ್ನು ಭಾರತೀಯರ ಮುಂದೆ ತರಬಹುದು” ಎಂದು ಅವರು ಹೇಳಿದ್ದಾರೆ.

ಐಎಎಸ್ ಅಧಿಕಾರಿಯ ಕಾಮೆಂಟ್‌ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವ್ ಸಾರಂಗ್ ಅವರನ್ನು “ಫಿರ್ಕಾ ಪರಸ್ತಿ (ಪಂಗಡವಾದ)” ಎಂದು ಆರೋಪಿಸಿದ್ದು ಅವರನ್ನು ಪಿಡಬ್ಲ್ಯೂಡಿಯಿಂದ ತೆಗೆದುಹಾಕುವಂತೆ ಕರೆ ನೀಡಿದರು.

ಈ ಹೇಳಿಕೆ ನೀಡುವ ಮೂಲಕ ಖಾನ್ ಅವರು ಐಎಎಸ್ ಸೇವಾ ನೀತಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಅವರ ವಿರುದ್ಧ ಸಿಬ್ಬಂದಿ ಇಲಾಖೆಗೆ ದೂರು ನೀಡುವುದಾಗಿ ಸಚಿವರು ಸುದ್ದಿಗಾರರಿಗೆ ತಿಳಿಸಿದರು. ಅವರಿಗೆ ಯಾವುದೇ ಹಕ್ಕಿಲ್ಲ. ಅವರು ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ ಮತ್ತು ಟ್ವಿಟರ್ ಜಗಳ ಪ್ರಾರಂಭಿಸಿರುವ ರೀತಿ, ಇದು ಸೇವಾ ನಿಯಮಗಳಿಗೆ ವಿರುದ್ಧವಾಗಿದೆ, ”ಸಾರಂಗ್ ಹೇಳಿದರು.

ಮಧ್ಯಪ್ರದೇಶ ಸರ್ಕಾರವು ಕಾಶ್ಮೀರ ಫೈಲ್ಸ್ ಅನ್ನು ತೆರಿಗೆ ಮುಕ್ತಗೊಳಿಸಿದೆ ಮತ್ತು ಪೊಲೀಸ್ ಸಿಬ್ಬಂದಿಗೆ ತಮ್ಮ ಕುಟುಂಬದೊಂದಿಗೆ ಚಲನಚಿತ್ರವನ್ನು ವೀಕ್ಷಿಸಲು ಒಂದು ದಿನದ ರಜೆಯನ್ನು ನೀಡಿದೆ. ಕಳೆದ ವಾರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತಮ್ಮ ಸರ್ಕಾರದ ಸಚಿವರು ಮತ್ತು ಬಿಜೆಪಿ ಶಾಸಕರೊಂದಿಗೆ ಭೋಪಾಲ್‌ನಲ್ಲಿ ವಿಶೇಷ ಪ್ರದರ್ಶನದಲ್ಲಿ ಚಲನಚಿತ್ರವನ್ನು ವೀಕ್ಷಿಸಿದರು.

ವಿವೇಕ್ ಅಗ್ನಿಹೋತ್ರಿ ಮತ್ತು ನಟ ಅಕ್ಷಯ್ ಕುಮಾರ್ ಅವರು ಮಖನ್‌ಲಾಲ್ ಚತುರ್ವೇದಿ ನ್ಯಾಷನಲ್ ಯೂನಿವರ್ಸಿಟಿ ಆಫ್ ಜರ್ನಲಿಸಂ ಅಂಡ್ ಕಮ್ಯುನಿಕೇಷನ್‌ನ ಹೊಸ ಕ್ಯಾಂಪಸ್‌ನಲ್ಲಿ ಮಾರ್ಚ್ 25 ರಂದು ಪ್ರಾರಂಭವಾಗುವ ಮೂರು ದಿನಗಳ ಚಿತ್ರ ಭಾರತಿ ಚಲನಚಿತ್ರೋತ್ಸವದಲ್ಲಿ (CBFF) ಭಾಗವಹಿಸಲು ಸಿದ್ಧರಾಗಿದ್ದಾರೆ.

ಇದನ್ನೂ ಓದಿ:  ‘ದಿ ಕಾಶ್ಮೀರ್ ಫೈಲ್ಸ್​’ನ ಪೈರಸಿ ಕಾಪಿ ತೋರಿಸಲು ಮುಂದಾದ ರಾಜಕೀಯ ನಾಯಕರು; ವಿವೇಕ್​ ಅಗ್ನಿಹೋತ್ರಿ ಅಸಮಾಧಾನ