Blast at Embassy Of Israel In India ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ: 5-6 ವಾಹನಗಳು ಜಖಂ

| Updated By: ಸಾಧು ಶ್ರೀನಾಥ್​

Updated on: Jan 30, 2021 | 4:51 PM

Blast at Embassy Of Israel In India ನಗರದಲ್ಲಿರುವ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟವಾಗಿರುವ ಮಾಹಿತಿ ಲಭ್ಯವಾಗಿದೆ. IED ಬಾಂಬ್​ ಸ್ಫೋಟಗೊಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

Blast at Embassy Of Israel In India ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ: 5-6 ವಾಹನಗಳು ಜಖಂ
ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ: 5-6 ವಾಹನಗಳು ಜಖಂ
Follow us on

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದೆ. ಸುಧಾರಿತ  ಎಲೆಕ್ರಾನಿಕ್​ಸಾಧನದಿಂದ (IED) ಸ್ಫೋಟ ಸಂಭವಿಸಿದೆ ಎಂಬ ಪ್ರಾಥಮಿಕ ಮಾಹಿತಿ ಲಭಿಸಿದೆ.

ಸ್ಫೋಟದಿಂದ 5ರಿಂದ 6 ವಾಹನಗಳು ಜಖಂಗೊಂಡಿದೆ. ದೆಹಲಿಯ ಔರಂಗಜೇಬ್ ರಸ್ತೆಯಲ್ಲಿರುವ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟವಾಗಿರುವ ಮಾಹಿತಿ ಲಭ್ಯವಾಗಿದೆ. ಸಂಜೆ 5.45 ಸುಮಾರಿನಲ್ಲಿ ಸ್ಫೋಟವಾಗಿದೆ ಎಂದು ಹಿರಿಯ ಅಧಿಕಾರಿಗಳಿಂದ ಸ್ಪಷ್ಟನೆ ಸಿಕ್ಕಿದೆ.

ಅದೃಷ್ಟವಶಾತ್​, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ರಾಯಭಾರ ಕಚೇರಿಯ 50 ಮೀಟರ್ ದೂರದಲ್ಲೇ ಸ್ಫೋಟವಾಗಿದೆ ಎಂದು ತಿಳಿದುಬಂದಿದೆ. ಇನ್ನು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ಧಾವಿಸಿವೆ. ಬಾಂಬ್ ನಿಷ್ಕ್ರಿಯ ದಳದಿಂದಲೂ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗಿದೆ. ಜೊತೆಗೆ, ಸ್ಥಳಕ್ಕೆ ಫೊರೆನ್ಸಿಕ್‌ ತಂಡ ಮತ್ತು NSG ತಂಡ ಸಹ ಭೇಟಿ ನೀಡಿವೆ.

ಬೆಂಗಳೂರಿನಲ್ಲಿ ಕಟ್ಟೆಚ್ಚರ -ಕಮಲ್​ ಪಂತ್​
ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟವಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಇಸ್ರೇಲ್​ ರಾಯಭಾರ ಕಚೇರಿಗೆ ಭದ್ರತೆ ಒದಗಿಸಲಾಗಿದೆ. ನಗರದ ಹಲಸೂರಿನಲ್ಲಿರುವ ಇಸ್ರೇಲ್​ ರಾಯಭಾರ ಕಚೇರಿಗೆ ಭದ್ರತೆ ನೀಡಲಾಗಿದೆ ಎಂದು ಬೆಂಗಳೂರು ಸಿಟಿ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

Blast at Embassy Of Israel In India

Published On - 6:13 pm, Fri, 29 January 21