ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಾದರೆ ಲಾಕ್​ಡೌನ್​ ಅನಿವಾರ್ಯ; ಸಿಎಂ ಉದ್ಧವ್​ ಠಾಕ್ರೆ

ಮಹಾರಾಷ್ಟ್ರದ ಕೊವಿಡ್ ಪರಿಸ್ಥಿತಿ ಗಂಭೀರವಾಗಿದೆ ಎಂದು ಕರೆದಿರುವ ಠಾಕ್ರೆ, ದೈನಂದಿನ ಅಂಕಿ ಅಂಶಗಳ ಪ್ರಸ್ತುತ ಏರಿಕೆ ಆತಂಕ ಮೂಡಿಸಿದೆ ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಾದರೆ ಲಾಕ್​ಡೌನ್​ ಅನಿವಾರ್ಯ; ಸಿಎಂ ಉದ್ಧವ್​ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 21, 2021 | 9:25 PM

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಿದೆ. ಇದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪ್ರಕರಣಗಳು ಹೀಗೆಯೇ ಮುಂದುವರಿದರೆ ಲಾಕ್​ಡೌನ್​ ಘೋಷಣೆ ಮಾಡುವ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯ ಆಗಲಿದೆ ಎಂದು ಉದ್ಧವ್​ ಅಭಿಪ್ರಾಯಪಟ್ಟಿದ್ದಾರೆ.

ಮಹಾರಾಷ್ಟ್ರದ ಕೊವಿಡ್ ಪರಿಸ್ಥಿತಿ ಗಂಭೀರವಾಗಿದೆ ಎಂದು ಕರೆದಿರುವ ಠಾಕ್ರೆ, ದೈನಂದಿನ ಅಂಕಿ ಅಂಶಗಳ ಪ್ರಸ್ತುತ ಏರಿಕೆ ಆತಂಕ ಮೂಡಿಸಿದೆ. ಇದು ಸೋಂಕಿನ ಹೊಸ ಅಲೆಯೇ ಎಂದು ಕಂಡುಹಿಡಿಯಲು ಒಂದೆರಡು ವಾರಗಳು ಬೇಕು. ಮತ್ತೊಂದು ಲಾಕ್​​ಡೌನ್ ತಪ್ಪಿಸಲು ಜನರು ಕೊರೊನಾ ವೈರಸ್ ನಿಯಂತ್ರಣ ಶಿಷ್ಟಾಚಾರಗಳನ್ನು ಅನುಸರಿಸಬೇಕೆಂದು ಅವರು ಎಚ್ಚರಿಸಿದರು.

ನಮಗೆ ಲಾಕ್​ಡೌನ್​ ಅಗತ್ಯವಿದೆಯೇ? ನೀವು ಜವಾಬ್ದಾರಿಯುತವಾಗಿ ವರ್ತಿಸಿ. ಮುಂದಿನ ಎಂಟು ದಿನಗಳಲ್ಲಿ ಪರಿಸ್ಥಿತಿ ಸ್ಪಷ್ಟವಾಗುತ್ತದೆ. ಲಾಕ್‌ಡೌನ್ ಬೇಡದವರು ಮಾಸ್ಕ್​ ಧರಿಸುತ್ತಾರೆ. ಲಾಕ್‌ಡೌನ್ ಬಯಸುವವರು ಮಾಸ್ಕ್​ ಧರಿಸುವುದಿಲ್ಲ. ಮಾಸ್ಕ್​ ಧರಿಸಿ, ಲಾಕ್​ಡೌನ್​ ಬೇಡವೆನ್ನಿ ಎಂದು ಕರೆಕೊಟ್ಟರು ಉದ್ಧವ್​.

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯದಲ್ಲಿ ಈ ಮೊದಲು 2,000-2,500 ಪ್ರಕರಣಗಳು ವರದಿ ಆಗುತ್ತಿದ್ದವು. ಈಗ, ಇದು ಸುಮಾರು 7,000ಕ್ಕೆ ಏರಿಕೆ ಆಗಿದೆ. ಸಕ್ರಿಯ ಪ್ರಕರಣಗಳು 40,000 ದಿಂದ 53,000ಕ್ಕೆ ಏರಿದೆ ಎಂದು ಉದ್ಧವ್​ ಹೇಳಿದರು.

ಎಲ್ಲಾ ರಾಷ್ಟ್ರಗಳಲ್ಲಿ ಕೊರೊನಾ ಕಡಿಮೆ ಆಗಿದ್ದರೂ ಮಹಾರಾಷ್ಟ್ರದಲ್ಲಿ ಮಾತ್ರ ಕೊರೊನಾ ವೈರಸ್​ ಕಡಿಮೆ ಆಗಿರಲಿಲ್ಲ. ಕಳೆದ ವಾರ 6 ಸಾವಿರ ಇದ್ದ ಪ್ರಕರಣಗಳ ಸಂಖ್ಯೆ, ಈಗ 7 ಸಾವಿರಕ್ಕೆ ಏರಿಕೆ ಆಗಿದೆ. ಇಂದು 6,971 ಪ್ರಕರಣ ವರದಿ ಆದರೆ, 35 ಸಾವು ಸಂಭವಿಸಿದೆ.

ಶನಿವಾರ ಮಾತನಾಡಿದ್ದ ಮುಂಬೈ ಮೇಯರ್​ ಕಿಶೋರಿ ಪಡ್ನೇಕರ್, ಕೊರೊನಾ ಸೋಂಕು ನಿಯಂತ್ರಣಕ್ಕೆ ಸಾಕಷ್ಟು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಕೊವಿಡ್​ ನಿಯಮದನ್ವಯ, ಮಾಸ್ಕ್​ ಹಾಕುವುದು ಕಡ್ಡಾಯವಾದರೆ, ಗುಂಪು ಸೇರುವುದರ ಮೇಲೆ ನಿಷೇಧ ಹೇರಲಾಗಿದೆ. ಆದಾಗ್ಯೂ, ಜನರು ನಿಯಮವನ್ನು ಪಾಲನೆ ಮಾಡುತ್ತಿಲ್ಲ. ಹೀಗಾಗಿ, ಕಟ್ಟುನಿಟ್ಟಾಗಿ ಕೊರೊನಾ ನಿಯಮ ಪಾಲನೆ ಸೂಚಿಸಲಾಗಿದೆ. ನೀವು ಕೊವಿಡ್​ ನಿಯಮ ಪಾಲನೆ ಮಾಡದೆ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚುತ್ತಾ ಹೋದರೆ ಲಾಕ್​ಡೌನ್​ ಘೋಷಣೆ ಮಾಡಬೇಕಾಗುತ್ತದೆ. ಇದನ್ನು ತಪ್ಪಿಸಬೇಕಾದರೆ ನೀವು ನಿಯಮ ಪಾಲನೆ ಮಾಡಿ ಎಂದಿದ್ದರು.

ಅಮರಾವತಿಯಲ್ಲಿ ಒಂದು ವಾರ ಲಾಕ್​ಡೌನ್ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರದ ಕಾರಣ ಒಂದು ವಾರಗಳ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಸೋಮವಾರ ಸಂಜೆಯಿಂದ ಲಾಕ್​ಡೌನ್​ ನಿಯಮ ಜಾರಿಗೆ ತರಲಿದೆ. ಏಳು ದಿನ ಲಾಕ್​ಡೌನ್​ ವೇಳೆ ಅಗತ್ಯ ಸೇವೆಗಳು ಮಾತ್ರ ಸಿಗಲಿವೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮತ್ತೆ ಚುರುಕುಗೊಂಡ ಕೊರೊನಾ: ಲಾಕ್​ಡೌನ್​ ಸೂಚನೆ ನೀಡಿದ ಮುಂಬೈ ಮೇಯರ್​

Published On - 9:25 pm, Sun, 21 February 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ