‘ಅಧಿಕಾರಕ್ಕೆ ಬಂದರೆ ಮಸೀದಿಗಳ ಧ್ವನಿವರ್ಧಕಗಳನ್ನು ತೆಗೆದುಹಾಕುತ್ತೇನೆ’; ರಾಜ್ ಠಾಕ್ರೆ ಭರವಸೆ

ರಾಜ್ ಠಾಕ್ರೆ ಅವರು ಯಾವಾಗಲೂ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ವಿರೋಧಿಸುತ್ತಾರೆ. ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಧ್ವನಿವರ್ಧಕಗಳನ್ನು ಬಳಸುವ ಘಟನೆಗಳನ್ನು ವರದಿ ಮಾಡುವಂತೆ ರಾಜ್ ಠಾಕ್ರೆ ಜನರನ್ನು ಒತ್ತಾಯಿಸಿದ್ದರು.

‘ಅಧಿಕಾರಕ್ಕೆ ಬಂದರೆ ಮಸೀದಿಗಳ ಧ್ವನಿವರ್ಧಕಗಳನ್ನು ತೆಗೆದುಹಾಕುತ್ತೇನೆ’; ರಾಜ್ ಠಾಕ್ರೆ ಭರವಸೆ
ರಾಜ್ ಠಾಕ್ರೆ
Follow us
ಸುಷ್ಮಾ ಚಕ್ರೆ
|

Updated on: Nov 07, 2024 | 4:11 PM

ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಅಮರಾವತಿಯಲ್ಲಿ ನಡೆದ ರ್ಯಾಲಿಯಲ್ಲಿ ಮಸೀದಿಗಳ ಮೇಲಿನ ಧ್ವನಿವರ್ಧಕಗಳ ವಿಷಯವನ್ನು ಮತ್ತೊಮ್ಮೆ ಪ್ರಸ್ತಾಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.

ನನಗೆ ಅಧಿಕಾರ ಕೊಡಿ, ನಾನು ಮಹಾರಾಷ್ಟ್ರದ ಯಾವುದೇ ಮಸೀದಿಯಲ್ಲಿ ಒಂದೇ ಒಂದು ಧ್ವನಿವರ್ಧಕಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಕೆಲವು ಮುಸ್ಲಿಂ ಮುಖಂಡರು ಮಸೀದಿಗಳಿಂದ ಮಹಾ ವಿಕಾಸ್ ಅಘಾಡಿ (MVA)ಗೆ ಮತ ನೀಡುವಂತೆ ಒತ್ತಾಯಿಸಿ ಫತ್ವಾಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಸೀದಿಯ ಧ್ವನಿವರ್ಧಕಗಳನ್ನು ತೆಗೆದಿದ್ದು, ಅವರ ಬೆಂಬಲಿಗರ ವಿರುದ್ಧ 17,000 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: Maharashtra Elections: ಮಹಾರಾಷ್ಟ್ರದಲ್ಲಿ 3 ಲಕ್ಷ ರೂ. ಕೃಷಿ ಸಾಲ ಮನ್ನಾ, ಉಚಿತ ಬಸ್ ಪ್ರಯಾಣ; ಎಂವಿಎ ಗ್ಯಾರಂಟಿ ಘೋಷಣೆ

ಶರದ್ ಪವಾರ್ ವಿರುದ್ಧ ವಾಗ್ದಾಳಿ ನಡೆಸಿದ ಠಾಕ್ರೆ ಅವರನ್ನು ‘ಸಂತ ಶರದ್ಚಂದ್ರ ಪವಾರ್’ ಎಂದು ಕರೆದಿದ್ದಾರೆ. ಅವರು ಒಬಿಸಿ ಮತ್ತು ಮರಾಠ ಸಮುದಾಯಗಳ ನಡುವೆ ವಿವಾದಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜಿಲ್ಲೆಗಳಾದ್ಯಂತ ಶಿವಾಜಿ ಮಹಾರಾಜರ ದೇವಾಲಯಗಳಿಗೆ ಉದ್ಧವ್ ಠಾಕ್ರೆ ಅವರು ಇತ್ತೀಚೆಗೆ ನೀಡಿದ ಕರೆಗಳನ್ನು ಗುರಿಯಾಗಿಟ್ಟುಕೊಂಡು ರಾಜ್ ಠಾಕ್ರೆ, “ಪ್ರತಿ ಜಿಲ್ಲೆಯಲ್ಲೂ ದೇವಾಲಯಗಳನ್ನು ನಿರ್ಮಿಸಲು ಪ್ರತಿಮೆಗಳು ಸಾಕಾಗುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ: ಉದ್ಧವ್ ಠಾಕ್ರೆಯ ಶಿವಸೇನೆಯಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಎಂಎನ್‌ಎಸ್ ಯಾವುದೇ ಮೈತ್ರಿ ಇಲ್ಲದೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸ್ವಂತವಾಗಿ ಹೋರಾಡಲಿದೆ ಎಂದು ಪಕ್ಷದ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್‌ಎಸ್) ಮುಖ್ಯಸ್ಥರು 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಉಮೇದುವಾರಿಕೆಯನ್ನು ಬೆಂಬಲಿಸಿದ್ದರು. ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಎಂಎನ್‌ಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಯಾವುದೇ ಪಕ್ಷಗಳಿಗಿಂತ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ