ಕಾಂಗ್ರೆಸ್​​ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ, ಆದರೆ ಕಸಗಳನ್ನು ಒಪ್ಪಿಕೊಳ್ಳಲು ನಾನು ಸಿದ್ಧನಿಲ್ಲ: ಅರವಿಂದ್ ಕೇಜ್ರಿವಾಲ್​

ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್​, ಈಗ ರಾಜ್ಯದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ಇಲ್ಲಿನ ಸರ್ಕಾರ ಕಣ್ಣಲ್ಲಿ ನೀರಿಡುತ್ತಿದೆ. 15 ವರ್ಷಗಳಿಂದ ಇಲ್ಲಿ ನೀವೇ ಅಧಿಕಾರದಲ್ಲಿ ಇರುವಾಗ ಅದನ್ನು ಖಾಲಿ ಮಾಡಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​​ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ, ಆದರೆ ಕಸಗಳನ್ನು ಒಪ್ಪಿಕೊಳ್ಳಲು ನಾನು ಸಿದ್ಧನಿಲ್ಲ: ಅರವಿಂದ್ ಕೇಜ್ರಿವಾಲ್​
ಅರವಿಂದ ಕೇಜ್ರಿವಾಲ್
Follow us
TV9 Web
| Updated By: Lakshmi Hegde

Updated on:Nov 23, 2021 | 4:13 PM

ಪಂಜಾಬ್​ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಪ್​ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸದ್ಯ ಪಂಜಾಬ್​ ರಾಜ್ಯದ ಪ್ರವಾಸದಲ್ಲಿದ್ದಾರೆ. ನಿನ್ನೆ ಪಂಜಾಬ್​​ನಲ್ಲಿ ಮಾತನಾಡಿದ್ದ ಅವರು, ತಮ್ಮ ಪಕ್ಷ ಇಲ್ಲಿಗೆ ಅಧಿಕಾರಕ್ಕೆ ಬಂದರೆ, ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಗೂ ತಿಂಗಳಿಗೆ 1 ಸಾವಿರ ರೂಪಾಯಿ ನೀಡುವ ಭರವಸೆ ನೀಡಿದ್ದರು. ಹಾಗೇ, ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನ ಸುಮಾರು 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರೆಲ್ಲ ಆಪ್​ ಸೇರಲು ಉತ್ಸುಕರಾಗಿದ್ದಾರೆ. ಆದರೆ ನನಗೆ ಕಾಂಗ್ರೆಸ್​ ಕಸವನ್ನು ಒಪ್ಪಿಕೊಳ್ಳಲು, ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಮನಸು ಒಪ್ಪುತ್ತಿಲ್ಲ ಎಂದು ನಗುತ್ತ ಹೇಳಿದ್ದಾರೆ. ಇತ್ತೀಚೆಗೆ ಒಂದಿಲ್ಲೊಂದು ವಿವಾದ ಎಬ್ಬಿಸುತ್ತಿರುವ ನವಜೋತ್​ ಸಿಂಗ್​ ಸಿಧು ಆಪ್​​ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿ ಹರಡಿದೆ. ಇದು ನಿಜವಾ ಎಂದು ಮಾಧ್ಯಮ ಸಿಬ್ಬಂದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.  

ಕಾಂಗ್ರೆಸ್​ನ ಹಲವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಆದರೆ ಕಾಂಗ್ರೆಸ್​ನ ಕಚಡಾ, ಕಸಕಡ್ಡಿಗಳನ್ನೇಕೆ ನಾವು ಸೇರಿಸಿಕೊಳ್ಳಬೇಕು. ಕಾಂಗ್ರೆಸ್​ನ ಒಂದು ಕಸವನ್ನು ಸೇರಿಸಿಕೊಂಡರೂ ಅದರ ಹಿಂದೆ ಮತ್ತೆ 25 ಶಾಸಕರು, ಮೂವರು ಸಂಸದರು ಆ ಪಕ್ಷದಿಂದ ಬರುತ್ತಾರೆ ಎಂದು ಖಚಿತವಾಗಿಯೂ ಸತ್ಯ ಎಂದಿದ್ದಾರೆ. ಪಂಜಾಬ್​ ವಿಧಾನಸಭೆ ಚುನಾವಣೆಯಲ್ಲಿ ಆಪ್​ ಅಧಿಕಾರಕ್ಕೆ ಬರಬೇಕು ಎಂಬುದು ನನ್ನ ಬಲವಾದ ಆಶಯ. ಹಾಗೊಮ್ಮೆ ನಮ್ಮ ಪಕ್ಷ ಗೆದ್ದರೆ ನಾನಂತೂ ಖಂಡಿತವಾಗಿಯೂ ಇಲ್ಲಿನ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ ಎಂದು ಕೇಜ್ರಿವಾಲ್ ಹೇಳಿಕೊಂಡಿದ್ದಾರೆ.

ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್​, ಈಗ ರಾಜ್ಯದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ಇಲ್ಲಿನ ಸರ್ಕಾರ ಕಣ್ಣಲ್ಲಿ ನೀರಿಡುತ್ತಿದೆ. 15 ವರ್ಷಗಳಿಂದ ಇಲ್ಲಿ ನೀವೇ ಅಧಿಕಾರದಲ್ಲಿ ಇರುವಾಗ ಅದನ್ನು ಖಾಲಿ ಮಾಡಿದ್ದು ಯಾರು? ಆದರೆ ನನಗೆ ಗೊತ್ತಿದೆ ಪಂಜಾಬ್​ ಖಜಾನೆ ಹೇಗೆ ತುಂಬಿಸಬೇಕು ಎಂಬುದು ಎಂದು ದೆಹಲಿ ಸಿಎಂ ಹೇಳಿದ್ದಾರೆ.  ಪಂಜಾಬ್​ನಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಆದರೆ, ದೆಹಲಿಯನ್ನು ನಾವು ಹೇಗೆ ಬದಲಾಯಿಸಿದ್ದೇವೋ ಹಾಗೇ ಇದನ್ನೂ ಬದಲಿಸುತ್ತೇವೆ ಎಂಬ ಭರವಸೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನು ರದ್ದುಗೊಳಿಸಲು ಕೇಂದ್ರ ನಿರ್ಧರಿಸಿದ ನಂತರ ಪರಿಣಾಮಗಳ ಬಗ್ಗೆ ಬಿಜೆಪಿಗೆ ಎಚ್ಚರಿಕೆ ನೀಡಿದ ಸಚಿನ್ ಪೈಲಟ್

Published On - 4:12 pm, Tue, 23 November 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ