ಒಂದೊಮ್ಮೆ ಭೂ ಹಗರಣ ಸಾಬೀತಾದರೆ ನಾನು ರಾಜಕೀಯದಿಂದಲೇ ಹೊರಬರುತ್ತೇನೆ ಎಂದು ಜಾರ್ಖಂಡ್‍ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್(Hemanth Soren) ಹೇಳಿದ್ದಾರೆ. ಅಕ್ರಮ ಹಣವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹೇಮಂತ್ ಸೊರೆನ್ ಅನ್ನು ಬಂಧಿಸಿದೆ. ಜಾರ್ಖಂಡ್(Jharkhand)ನಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಚಂಪೈ ಸೊರೆನ್ ಸರ್ಕಾರ ಇಂದು 81 ಸದಸ್ಯ ಬಲದ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಲಿದೆ.
ನಾವು ಇನ್ನೂ ಸೋಲನ್ನು ಒಪ್ಪಿಕೊಂಡಿಲ್ಲ. ಅವರು ನನ್ನನ್ನು ಕಂಬಿ ಹಿಂದೆ ಹಾಕುವ ಮೂಲಕ ಯಶಸ್ವಿಯಾಗಬಹುದೆಂದು ಅವರು ಭಾವಿಸಿದರೆ ಅದು ತಪ್ಪು ಎಂದು ಹೇಳಿದ್ದಾರೆ. ಹೇಮಂತ್ ಸೊರೆನ್ ಅವರು ತಮ್ಮ ಬಂಧನಕ್ಕೂ ಮುನ್ನ ಮುಖ್ಯಮಂತ್ರಿ ಹುದ್ದೆಗೆ ಜನವರಿ 31ರಂದು ರಾಜೀನಾಮೆ ನೀಡಿದ್ದರು.
ರಾಂಚಿಯ ವಿಶೇಷ ನ್ಯಾಯಾಲಯವು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರಿಗೆ ಸದನದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಿತ್ತು. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೋರೆನ್ ಅವರನ್ನು ಜಾರಿ ನಿರ್ದೇಶನಾಲಯವು ಜನವರಿ 31 ರಂದು ಬಂಧಿಸಿತ್ತು. ಫೆಬ್ರವರಿ 2 ರಂದು ನ್ಯಾಯಾಲಯ ಅವರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿತ್ತು.
ಮತ್ತಷ್ಟು ಓದಿ: Champai Soren: ಹೇಮಂತ್ ಸೊರೆನ್ ರಾಜೀನಾಮೆ; ಚಂಪೈ ಸೊರೆನ್ ಜಾರ್ಖಂಡ್ ನೂತನ ಸಿಎಂ
ತಾವು ವಿಧಾನಸಭೆಯ ಸದಸ್ಯರಾಗಿದ್ದು, ಸದನದ ವಿಶೇಷ ಅಧಿವೇಶನದಲ್ಲಿ ಭಾಗವಹಿಸುವ ಹಕ್ಕಿದೆ ಎಂದು ಅವರು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದರು. ಚಂಪೈ ಸೊರೆನ್ ನೇತೃತ್ವದ ಹೊಸ ಸರ್ಕಾರವು ಸದನದಲ್ಲಿ ತನ್ನ ಬಹುಮತವನ್ನು ಸಾಬೀತುಪಡಿಸಲು ಕರೆದಿರುವ ವಿಶೇಷ ಅಧಿವೇಶನದಲ್ಲಿ ಶಾಸಕಾಂಗ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಹೇಮಂತ್ ಬಂಧನದ ನಂತರ ಜಾರ್ಖಂಡ್‍ನ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಹೇಮಂತ್ ಸೊರೆನ್ ಅವರು ವಿಶೇಷ ಪಿಎಂಎಲ್‍ಎ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಹೊಸ ಸರ್ಕಾರ ಕೋರಿರುವ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ಕೋರಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ