AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೋದಿ ಮಧ್ಯಸ್ಥಿಕೆ ವಹಿಸಿದರೆ ರೈತರ ಪ್ರತಿಭಟನೆಗೆ ನಿಮಿಷದೊಳಗೆ ಅಂತ್ಯ ಹಾಡಬಹುದು’

ಸಾವಿರಾರು ರೈತರು ರಾಷ್ಟ್ರ ರಾಜಧಾನಿಯಲ್ಲಿ ಕಳೆದ ಮೂರು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದೆ.

‘ಮೋದಿ ಮಧ್ಯಸ್ಥಿಕೆ ವಹಿಸಿದರೆ ರೈತರ ಪ್ರತಿಭಟನೆಗೆ ನಿಮಿಷದೊಳಗೆ ಅಂತ್ಯ ಹಾಡಬಹುದು’
ಪ್ರತಿಭಟನಾನಿರತ ರೈತರು (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Apr 07, 2022 | 10:39 AM

ದೆಹಲಿ: ಕೇಂದ್ರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಸರ್ಕಾರ ಬಯಸಿದರೆ ನಿಮಿಷಗಳ ಒಳಗೆ ಅಂತ್ಯ ಹಾಡಬಹುದು ಎಂದು ಶಿವಸೇನಾ ಲೋಕಸಭಾ ಸದಸ್ಯ ಸಂಜಯ್ ರಾವತ್ ಹೇಳಿದ್ದಾರೆ. ಈ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು. ಮೋದಿ ಒಬ್ಬರು ದೊಡ್ಡ ನಾಯಕ. ಎಲ್ಲರೂ ಅವರ ಮಾತನ್ನು ಕೇಳುತ್ತಾರೆ ಎಂದಿದ್ದಾರೆ. ಸರ್ಕಾರ ಇಚ್ಛಿಸಿದರೆ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಾವಿರಾರು ರೈತರು ರಾಷ್ಟ್ರ ರಾಜಧಾನಿಯಲ್ಲಿ ಕಳೆದ ಮೂರು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರದ ನೂತನ ಕೃಷಿ ಕಾಯ್ದೆಗಳಿಂದ ಕಾರ್ಪೊರೇಟ್ ವಲಯಕ್ಕೆ ಹೆಚ್ಚು ಲಾಭವಾಗಲಿದೆ. ರೈತರ ಕನಿಷ್ಠ ಬೆಂಬಲ ಬೆಲೆಯನ್ನೂ ಕಸಿದುಕೊಳ್ಳಲಿದೆ ಎಂಬ ಕಾರಣಕ್ಕೆ ಕಾಯ್ದೆಗಳನ್ನು ರೈತರು ವಿರೋಧಿಸುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದೆ. ರೈತರು ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟು ಹಿಡಿದು ಕೂತಿದ್ದಾರೆ.

ಶಿವ ಸೇನಾ ನಾಯಕ ಸಂಜಯ್ ರಾವತ್

ರೈತರ ಸಮಸ್ಯೆ ಬಗೆಹರಿಸಲು ಸುಪ್ರೀಂ ಕೋರ್ಟ್​ನಿಂದ ಹೊಸ ಸಮಿತಿ ರಚನೆ ಸಾಧ್ಯತೆ

Published On - 10:16 pm, Wed, 16 December 20