AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಬಯಸಿದರೆ ಮಣಿಪುರದಲ್ಲಿ ಎರಡು ಮೂರು ದಿನಗಳಲ್ಲಿ ಬೆಂಕಿ ನಂದಿಸಬಹುದು: ರಾಜಸ್ಥಾನದಲ್ಲಿ ರಾಹುಲ್ ಗಾಂಧಿ

ವಿಶ್ವ ಬುಡಕಟ್ಟು ದಿನದ ಸಂದರ್ಭದಲ್ಲಿ ಆಯೋಜಿಸಲಾದ ಈ ರ್ಯಾಲಿಯು ಈ ವರ್ಷದ ಕೊನೆಯಲ್ಲಿ ರಾಜಸ್ಥಾನದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರದ ಆರಂಭವನ್ನು ಸೂಚಿಸುತ್ತದೆ. ಆದಿವಾಸಿಗಳಿಗೆ ಬದಲಾಗಿ ಬುಡಕಟ್ಟು ಜನರನ್ನು "ವನವಾಸಿ" ಎಂದು ಕರೆದಿರುವುದು ಅವರಿಗೆ ಮಾಡಿದ ಅವಮಾನ ಎಂದು ರಾಹುಲ್ ಗಾಂಧಿ ಟೀಕಿಸಿದರು. ಒಮ್ಮೆ ನಾನು ನನ್ನ ಅಜ್ಜಿ (ಇಂದಿರಾ ಗಾಂಧಿ) ಅವರಲ್ಲಿ 'ಆದಿವಾಸಿ' ಪದದ ಬಗ್ಗೆ ಕೇಳಿದೆ. ಆಗ ಅವರು ಆದಿವಾಸಿಗಳು ಈ ದೇಶದ ಮೊದಲ ನಿವಾಸಿಗಳು ಎಂದು ಹೇಳಿದರು.

ಮೋದಿ ಬಯಸಿದರೆ ಮಣಿಪುರದಲ್ಲಿ ಎರಡು ಮೂರು ದಿನಗಳಲ್ಲಿ ಬೆಂಕಿ ನಂದಿಸಬಹುದು: ರಾಜಸ್ಥಾನದಲ್ಲಿ ರಾಹುಲ್ ಗಾಂಧಿ
ರಾಜಸ್ಥಾನದಲ್ಲಿ ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on: Aug 09, 2023 | 8:49 PM

Share

ಜೈಪುರ ಆಗಸ್ಟ್ 09: ಬಿಜೆಪಿಯ ಸಿದ್ಧಾಂತವು ಮಣಿಪುರಕ್ಕೆ(Manipur) ಬೆಂಕಿ ಹಚ್ಚಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಬುಧವಾರ ಆರೋಪಿಸಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಬಯಸಿದರೆ, ಎರಡು-ಮೂರು ದಿನಗಳಲ್ಲಿ ಬೆಂಕಿಯನ್ನು ನಂದಿಸಬಹುದು ಎಂದು ಹೇಳಿದರು. ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯ ಮಂಗರ್ ಧಾಮ್‌ನಲ್ಲಿ ಪಕ್ಷದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮಣಿಪುರವನ್ನು ವಿಭಜಿಸಿದ್ದಾರೆ. ಕಳೆದ ಎರಡು-ಮೂರು ತಿಂಗಳಿನಿಂದ ಈಶಾನ್ಯ ರಾಜ್ಯವು ಭಾರತದ ಭಾಗವಲ್ಲ ಎಂದು ತೋರುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಯ ಸಿದ್ಧಾಂತವು ಮಣಿಪುರಕ್ಕೆ ಬೆಂಕಿ ಹಚ್ಚಿದೆ, ಜನರನ್ನು ಕೊಲ್ಲಲಾಗುತ್ತಿದೆ. ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಬಯಸಿದರೆ, ಮಣಿಪುರದ ಬೆಂಕಿಯನ್ನು ಎರಡು-ಮೂರು ದಿನಗಳಲ್ಲಿ ನಂದಿಸಬಹುದು, ಆದರೆ ಬೆಂಕಿ ಉರಿಯುತ್ತಾ ಇರಲು ಬಯಸುತ್ತಾರೆ ಎಂದಿದ್ದಾರೆ ರಾಹುಲ್.

ಮಣಿಪುರದಲ್ಲಿ ಮೇ 3 ರಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಲೇ ಇದೆ . ಬಹುಸಂಖ್ಯಾತ ಮೈತಿ ಮತ್ತು ಬುಡಕಟ್ಟು ಕುಕಿ ಸಮುದಾಯದ ನಡುವಿನ ಘರ್ಷಣೆಯಲ್ಲಿ 150 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.

ವಿಶ್ವ ಬುಡಕಟ್ಟು ದಿನದ ಸಂದರ್ಭದಲ್ಲಿ ಆಯೋಜಿಸಲಾದ ಈ ರ್ಯಾಲಿಯು ಈ ವರ್ಷದ ಕೊನೆಯಲ್ಲಿ ರಾಜಸ್ಥಾನದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರದ ಆರಂಭವನ್ನು ಸೂಚಿಸುತ್ತದೆ. ಆದಿವಾಸಿಗಳಿಗೆ ಬದಲಾಗಿ ಬುಡಕಟ್ಟು ಜನರನ್ನು “ವನವಾಸಿ” ಎಂದು ಕರೆದಿರುವುದು ಅವರಿಗೆ ಮಾಡಿದ ಅವಮಾನ ಎಂದು ರಾಹುಲ್ ಗಾಂಧಿ ಟೀಕಿಸಿದರು.

ಒಮ್ಮೆ ನಾನು ನನ್ನ ಅಜ್ಜಿ (ಇಂದಿರಾ ಗಾಂಧಿ) ಅವರಲ್ಲಿ ‘ಆದಿವಾಸಿ’ ಪದದ ಬಗ್ಗೆ ಕೇಳಿದೆ. ಆಗ ಅವರು ಆದಿವಾಸಿಗಳು ಈ ದೇಶದ ಮೊದಲ ನಿವಾಸಿಗಳು ಎಂದು ಹೇಳಿದರು. ಈಗ ಬಿಜೆಪಿ ‘ವನವಾಸಿ’ ಎಂಬ ಹೊಸ ಪದವನ್ನು ಪರಿಚಯಿಸಿದೆ. ಈ ಜನರು ಆದಿವಾಸಿಗಳಲ್ಲ ಆದರೆ ವನವಾಸಿಗಳು ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ನಿಮಗೆ ಗಾಯವಾಗಿಲ್ಲ ತಾನೇ?; ಸ್ಕೂಟರ್​​ನಿಂದ ಬಿದ್ದ ವ್ಯಕ್ತಿಯ ಬಳಿ ಹೋಗಿ ವಿಚಾರಿಸಿದ ರಾಹುಲ್ ಗಾಂಧಿ

ಬಿಜೆಪಿಯು ಬುಡಕಟ್ಟು ಜನರನ್ನು ವನವಾಸಿ ಎಂದು ಕರೆಯುತ್ತದೆ, ಅವರ ಕಾಡುಗಳನ್ನು ಕಿತ್ತು ಅದಾನಿಗೆ ನೀಡುತ್ತದೆ ಎಂದು ರಾಹುಲ್, ಬುಡಕಟ್ಟು ಜನಾಂಗದ ಹಕ್ಕುಗಳು ಮತ್ತು ಅವರ ಕನಸುಗಳು ನನಸಾಗಬೇಕೆಂದು ಕಾಂಗ್ರೆಸ್ ಬಯಸುತ್ತದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ