AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜಕೀಯ ಅವಕಾಶವಾದಿತನಕ್ಕೆ ಮತ್ತೊಂದು ಹೆಸರೇ ರಾಹುಲ್ ಗಾಂಧಿ’; ಬಿಜೆಪಿ ನಾಯಕ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

ಎಸ್​ಐಆರ್​ ಪ್ರಕ್ರಿಯೆಯನ್ನು ವಿರೋಧಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯ ಒಕ್ಕೂಟ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಗ್ಗೆ ಟೀಕಾಪ್ರಹಾರ ನಡೆಸಿರುವ ಕೇಂದ್ರ ಸರ್ಕಾರದ ಮಾಜಿ ಶಿಕ್ಷಣ ಸಚಿವ ಹಾಗೂ ಬಿಜೆಪಿ ನಾಯಕ ಧರ್ಮೇಂದ್ರ ಪ್ರಧಾನ್ ರಾಜಕೀಯ ಅವಕಾಶವಾದಕ್ಕೆ ಮತ್ತೊಂದು ಹೆಸರೇ ರಾಹುಲ್ ಗಾಂಧಿ ಎಂದು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಅವರು ಸುದೀರ್ಘ ಪೋಸ್ಟ್ ಮಾಡುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

'ರಾಜಕೀಯ ಅವಕಾಶವಾದಿತನಕ್ಕೆ ಮತ್ತೊಂದು ಹೆಸರೇ ರಾಹುಲ್ ಗಾಂಧಿ'; ಬಿಜೆಪಿ ನಾಯಕ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ
ಧರ್ಮೇಂದ್ರ ಪ್ರಧಾನ್Image Credit source: PTI
ಸುಷ್ಮಾ ಚಕ್ರೆ
|

Updated on: Oct 09, 2026 | 9:38 PM

Share

ನವದೆಹಲಿ, ಅಕ್ಟೋಬರ್ 9: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶದ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳಲ್ಲಿ ಕಾಂಗ್ರೆಸ್ ಪಕ್ಷವು ತನ್ನ ನಿಲುವನ್ನು ಬದಲಾಯಿಸುವ ಮೂಲಕ ರಾಜಕೀಯ ಅವಕಾಶವಾದಿತನ ಪ್ರದರ್ಶಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿರುವ ಧರ್ಮೇಂದ್ರ ಪ್ರಧಾನ್, “ರಾಜಕೀಯ ಅವಕಾಶವಾದಕ್ಕೆ ಮುಖವೊಂದಿದ್ದರೆ ಅದನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎನ್ನಬಹುದಿತ್ತು! ವಿದೇಶಿ ಮಣ್ಣಿನಲ್ಲಿ ಭಾರತದ ಪ್ರಜಾಪ್ರಭುತ್ವವನ್ನು ಪ್ರಶ್ನಿಸುವುದರಿಂದ ಹಿಡಿದು, ಸ್ವತಃ ಭಾರತೀಯ ಒಕ್ಕೂಟ ವ್ಯವಸ್ಥೆಯ ವಿರುದ್ಧವೇ ಹೋರಾಟ ಘೋಷಿಸುವವರೆಗೆ ರಾಹುಲ್ ಗಾಂಧಿ ಅವರ ಆದ್ಯತೆಗಳು ಯಾವಾಗಲೂ ಅನುಮಾನಾಸ್ಪದವಾಗಿವೆ” ಎಂದು ಅವರು ಹೇಳಿದ್ದಾರೆ.

“ಈ ಹಿಂದೆ ರಾಷ್ಟ್ರೀಯ ಭದ್ರತೆಯ ಕಾರಣ ನೀಡಿ ಕಾಂಗ್ರೆಸ್ ಪಕ್ಷವೇ ವಿರೋಧಿಸಿದ್ದ ಪ್ರಮುಖ ವಿಚಾರವೊಂದರಲ್ಲಿ, ಈಗ ತನ್ನ ನಿಲುವನ್ನು ಸಂಪೂರ್ಣವಾಗಿ ಉಲ್ಟಾ ಮಾಡಿದೆ. ರಾಜಕೀಯ ಅನುಕೂಲಕ್ಕಾಗಿ ತತ್ವ ಮತ್ತು ಸಿದ್ಧಾಂತಗಳನ್ನು ಬಲಿಕೊಡಲು ಸಾಧ್ಯವಿಲ್ಲ. ಕೇವಲ ಒಂದು ವರ್ಷದಲ್ಲಿ ಕಾಂಗ್ರೆಸ್‌ನ ಈ ಬದಲಾವಣೆಗೆ ಕಾರಣವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ

“ಭಾರತವು ಒಂದು ಸಾರ್ವಭೌಮ ರಾಷ್ಟ್ರ. ದೇಶದ ನೀತಿ-ನಿಯಮಗಳನ್ನು ಭಾರತದ ಸ್ವಂತ ಸಾಂವಿಧಾನಿಕ ಸಂಸ್ಥೆಗಳು, ಕಾನೂನುಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳು ನಿರ್ಧರಿಸುತ್ತವೆಯೇ ಹೊರತು ವಿದೇಶಿ ಒತ್ತಡಗಳಾಗಲಿ ಅಥವಾ ‘ಎಕ್ಸ್’ (ಟ್ವಿಟರ್) ನಂತಹ ಸಾಮಾಜಿಕ ಜಾಲತಾಣಗಳ ನಿರೂಪಣೆಗಳಾಗಲಿ ಅಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೃಢ ನೇತೃತ್ವದಲ್ಲಿ ಭಾರತವು ಎಂದಿಗೂ ಯಾವುದೇ ಬಾಹ್ಯ ಒತ್ತಡಕ್ಕೆ ಮಣಿಯುವುದಿಲ್ಲ. ಯಾವುದೇ ರಾಜಕೀಯ ಉದ್ದೇಶ ಅಥವಾ ಪ್ರಚೋದನೆಗಳು ದೇಶದ ರಾಷ್ಟ್ರೀಯ ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾವು ಹಿಂದೆಂದೂ ರಾಜಿ ಮಾಡಿಕೊಂಡಿಲ್ಲ, ಮುಂದೆಯೂ ಮಾಡುವುದಿಲ್ಲ” ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಇಂಡಿಯಾ ಸಂಸದರ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ತ್ರಿವರ್ಣ ಧ್ವಜ ಬೀಸಿದ ರಾಹುಲ್ ಗಾಂಧಿ!

“ಭಾರತವು ಜಾಗತಿಕ ಕಂಪನಿಗಳು, ನಾವೀನ್ಯತೆ (ಇನೋವೇಶನ್) ಮತ್ತು ಹೂಡಿಕೆಗಳನ್ನು ಮುಕ್ತವಾಗಿ ಸ್ವಾಗತಿಸುತ್ತದೆ. ದೇಶದ ಕಾನೂನು ಮತ್ತು ಭದ್ರತಾ ನಿಯಮಗಳನ್ನು ಗೌರವಿಸುವ ಉದ್ಯಮಗಳಿಗೆ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಅವಕಾಶಗಳಿವೆ. ಆದರೆ, ದೇಶದ ಹಿತಾಸಕ್ತಿಯನ್ನು ಬಲಿಕೊಟ್ಟು ಯಾವುದನ್ನೂ ಸ್ವೀಕರಿಸಲಾಗುವುದಿಲ್ಲ” ಎಂದು ಪ್ರಧಾನ್ ಹೇಳಿದ್ದಾರೆ.

ಕಾಂಗ್ರೆಸ್ ಬದ್ಧತೆಗೆ ಸವಾಲು:

“ಇಷ್ಟೊಂದು ಸೂಕ್ಷ್ಮವಾದ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವನ್ನು ಇದ್ದಕ್ಕಿದ್ದಂತೆ ಬದಲಾಯಿಸಿರುವುದಕ್ಕೆ ದೇಶಕ್ಕೆ ಉತ್ತರ ನೀಡಬೇಕಾಗಿದೆ. ಪ್ರಭಾವಿ ಬಾಹ್ಯ ಶಕ್ತಿಗಳಿಂದ ರಾಜಕೀಯ ಬೆಂಬಲ ಮತ್ತು ಸಂಪನ್ಮೂಲಗಳನ್ನು ಪಡೆಯುವ ಹಂಬಲವು ಭಾರತದ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಗಿಂತ ಹೆಚ್ಚಾಗುತ್ತಿದೆಯೇ? ” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

“ರಾಜಕೀಯ ಲಾಭಕ್ಕಾಗಿ ರಾಷ್ಟ್ರೀಯ ಹಿತಾಸಕ್ತಿಯನ್ನು ಬಲಿಕೊಡುವವರಿಗೆ ಇತಿಹಾಸವೇ ತಕ್ಕ ಪಾಠ ಕಲಿಸಿದೆ. ದೇಶದ ಜನರು ಎಲ್ಲವನ್ನೂ ಗಮನಿಸುತ್ತಿದ್ದು, ರಾಷ್ಟ್ರೀಯ ಹಿತಾಸಕ್ತಿಗಳು ಎಂದಿಗೂ ಚೌಕಾಸಿಗೆ ಒಳಪಡುವುದಿಲ್ಲ ಎಂಬುದನ್ನು ಕಾಂಗ್ರೆಸ್ ನೆನಪಿಟ್ಟುಕೊಳ್ಳಬೇಕು” ಎಂದು ಧರ್ಮೇಂದ್ರ ಪ್ರಧಾನ್ ಎಚ್ಚರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?