Big News: ಬೀದಿ ನಾಯಿ ಕಚ್ಚಿದರೆ ಅದಕ್ಕೆ ಆಹಾರ ಹಾಕುವವರೂ ಜವಾಬ್ದಾರರು; ಸುಪ್ರೀಂ ಕೋರ್ಟ್

ಕೇರಳ ಮತ್ತು ಮುಂಬೈನಲ್ಲಿ ಬೀದಿ ನಾಯಿಗಳನ್ನು ಕೊಲ್ಲುವ ಕುರಿತು ವಿವಿಧ ನಾಗರಿಕ ಸಂಸ್ಥೆಗಳು ಹೊರಡಿಸಿದ ಆದೇಶಗಳಿಗೆ ಸಂಬಂಧಿಸಿದ ವಿಷಯಗಳ ಕುರಿತಾದ ಅರ್ಜಿಗಳ ಬ್ಯಾಚ್ ಅನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

Big News: ಬೀದಿ ನಾಯಿ ಕಚ್ಚಿದರೆ ಅದಕ್ಕೆ ಆಹಾರ ಹಾಕುವವರೂ ಜವಾಬ್ದಾರರು; ಸುಪ್ರೀಂ ಕೋರ್ಟ್
ಸಂಗ್ರಹ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 10, 2022 | 12:20 PM

ನವದೆಹಲಿ: ಬೀದಿ ನಾಯಿಗಳ (Stray Dogs) ಹಾವಳಿ ಪ್ರತಿ ವರ್ಷ ಸಾವಿರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಬೀದಿ ನಾಯಿಗಳ ಕಾಟಕ್ಕೆ ಪರಿಹಾರ ಕಂಡುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್ (Supreme Court) ಬೀದಿ ನಾಯಿಗಳಿಗೆ ಪ್ರತಿದಿನ ಆಹಾರ ನೀಡುವ ಜನರಿಗೆ ಅವುಗಳ ಲಸಿಕೆಯ ಜವಾಬ್ದಾರಿಯನ್ನು ನೀಡಬಹುದು. ಒಂದುವೇಳೆ ಅವರು ಆಹಾರ ಹಾಕುವ ಬೀದಿ ನಾಯಿಗಳು ಜನರ ಮೇಲೆ ದಾಳಿ ಮಾಡಿದರೆ ಅವರೇ ಆ ವೆಚ್ಚವನ್ನು ಭರಿಸಬೇಕಾಗುತ್ತದೆ ಎಂದು ಆದೇಶ ನೀಡಿದೆ.

ಜನರ ಸುರಕ್ಷತೆ ಮತ್ತು ಪ್ರಾಣಿಗಳ ಹಕ್ಕುಗಳ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾದ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. “ನಮ್ಮ ದೇಶದಲ್ಲಿ ಹೆಚ್ಚಿನವರು ನಾಯಿ ಪ್ರಿಯರು. ನಾನು ಕೂಡ ನಾಯಿಗಳಿಗೆ ಆಹಾರ ನೀಡುತ್ತೇನೆ. ಆದರೆ, ಜನರು ನಾಯಿಗಳಿಗೆ ಆಹಾರ ಹಾಕುವುದರ ಜೊತೆಗೆ ಅವುಗಳ ಕಾಳಜಿ, ಜವಾಬ್ದಾರಿಯನ್ನೂ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿದ್ದಾರೆ.

ಬೀದಿನಾಯಿ ಸಮಸ್ಯೆಯನ್ನು ಪರಿಹರಿಸಲು ತರ್ಕಬದ್ಧ ಪರಿಹಾರವನ್ನು ಕಂಡುಹಿಡಿಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ. ಈ ವಿಷಯದಲ್ಲಿ ಉತ್ತರಗಳನ್ನು ಸಲ್ಲಿಸಲು ಕಕ್ಷಿದಾರರಿಗೆ ತಿಳಿಸಿದೆ.

ಇದನ್ನೂ ಓದಿ: Viral Video: ಬಾವಿಗೆ ಬಿತ್ತು ನಾಯಿ, ಪಕ್ಕದಲ್ಲೇ ಇತ್ತು ನಾಗರಹಾವು, ಮುಂದೇನಾಯ್ತು, ಜಯ ಯಾರಿಗೆ ಪ್ರಾಪ್ತಿಯಾಯ್ತು?

ಭಾರತದಲ್ಲಿ 1.5 ಕೋಟಿ ನಾಯಿ ಕಡಿತ ಪ್ರಕರಣಗಳು ದಾಖಲು: 2019ರಿಂದ ಭಾರತದಲ್ಲಿ 1.5 ಕೋಟಿಗೂ ಹೆಚ್ಚು ನಾಯಿ ಕಡಿತದ ಪ್ರಕರಣಗಳು ದಾಖಲಾಗಿವೆ. ಉತ್ತರ ಪ್ರದೇಶದಲ್ಲಿ (27,52,218), ತಮಿಳುನಾಡು (20,70,921), ಮಹಾರಾಷ್ಟ್ರ (15,75,606) ಮತ್ತು ಪಶ್ಚಿಮ ಬಂಗಾಳ(12,09,232)ದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಮತ್ತೊಂದೆಡೆ, ಲಕ್ಷದ್ವೀಪದಲ್ಲಿ ಇದುವರೆಗೂ ಯಾವುದೇ ನಾಯಿ ಕಡಿತದ ಪ್ರಕರಣಗಳು ವರದಿಯಾಗಿಲ್ಲ.

2019ರಲ್ಲಿ 72,77,523 ನಾಯಿ ಕಡಿತವಾಗಿವೆ. 2020ರಲ್ಲಿ 46,33,493 ಮತ್ತು ಒಂದು ವರ್ಷದ ನಂತರ 17,01,133ಕ್ಕೆ ಇಳಿದಿದೆ. ಆದರೆ, 2022ರ ಮೊದಲ 7 ತಿಂಗಳು ಕೇವಲ 14.5 ಲಕ್ಷ ಪ್ರಕರಣಗಳನ್ನು ದಾಖಲಿಸಿವೆ. ಈ ವರ್ಷ ಅತಿ ಹೆಚ್ಚು ಪ್ರಕರಣಗಳು ತಮಿಳುನಾಡು (251,510) ಮತ್ತು ಮಹಾರಾಷ್ಟ್ರ (231,531)ದಲ್ಲಿ ದಾಖಲಾಗಿವೆ. ಭಾರತವು ಪ್ರತಿ ವರ್ಷ 100ಕ್ಕೂ ಹೆಚ್ಚು ರೇಬೀಸ್ ಪ್ರಕರಣಗಳು ಮತ್ತು ಸಾವುಗಳನ್ನು ವರದಿ ಮಾಡುತ್ತದೆ.

ಇದನ್ನೂ ಓದಿ: Viral Video: 11 ವರ್ಷದ ಬಾಲಕನ ಮುಖಕ್ಕೆ ಕಚ್ಚಿದ ಪಿಟ್​ಬುಲ್ ನಾಯಿ; ಬರೋಬ್ಬರಿ 150 ಹೊಲಿಗೆ ಹಾಕಿದ ವೈದ್ಯರು

ವಿಶೇಷವಾಗಿ ಕೇರಳ ಮತ್ತು ಮುಂಬೈನಲ್ಲಿ ಬೀದಿ ನಾಯಿಗಳನ್ನು ಕೊಲ್ಲುವ ಕುರಿತು ವಿವಿಧ ನಾಗರಿಕ ಸಂಸ್ಥೆಗಳು ಹೊರಡಿಸಿದ ಆದೇಶಗಳಿಗೆ ಸಂಬಂಧಿಸಿದ ವಿಷಯಗಳ ಕುರಿತಾದ ಅರ್ಜಿಗಳ ಬ್ಯಾಚ್ ಅನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಕೆಲವು ಎನ್‌ಜಿಒಗಳು ಮತ್ತು ವೈಯಕ್ತಿಕ ಅರ್ಜಿದಾರರು ಬಾಂಬೆ ಹೈಕೋರ್ಟ್ ಮತ್ತು ಕೇರಳ ಹೈಕೋರ್ಟ್ ಸೇರಿದಂತೆ ಕೆಲವು ಹೈಕೋರ್ಟ್‌ಗಳ ತೀರ್ಪುಗಳ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ನಿಯಮಗಳ ಪ್ರಕಾರ ಬೀದಿ ನಾಯಿಗಳ ಕಾಟವನ್ನು ಎದುರಿಸಲು ಪುರಸಭೆಯ ಅಧಿಕಾರಿಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್